ಚೀನಾದ ಜನಪ್ರಿಯ ಮೊಬೈಲ್ ಅಪ್ಲಿಕೇಶನ್ಗಳಿಗೆ ನಿಷೇಧ ಹೇರಿದ ದಿನಗಳ ನಂತರ, ಸರ್ಕಾರವು ಈಗ ಚೀನಾದಿಂದ ಕಲರ್ ಟೆಲಿವಿಷನ್ ಸೆಟ್ಗಳನ್ನು ಆಮದು ಮಾಡಿಕೊಳ್ಳಲು ನಿರ್ಬಂಧಗಳನ್ನು ವಿಧಿಸಿದೆ.ಈ ಕ್ರಮವು ಸ್ಥಳೀಯ ಉತ್ಪಾದನೆಯನ್ನು ಹೆಚ್ಚಿಸುವ ಗುರಿಯನ್ನು ಹೊಂದಿದೆ ಮತ್ತು ಇದು ಪ್ರಧಾನಿ ನರೇಂದ್ರ ಮೋದಿಯವರ ಇತ್ತೀಚಿನ ಕರೆಗೆ ಅನುಗುಣವಾಗಿದೆ.
ಬೋರಿಸ್ ಜಾನ್ಸನ್ ಸರ್ಕಾರವು 2027 ರ ವೇಳೆಗೆ ಅಸ್ತಿತ್ವದಲ್ಲಿರುವ ಚೀನೀ ಹುವಾವೇ ಉಪಕರಣಗಳನ್ನು ತೆಗೆದುಹಾಕುವುದಾಗಿ ಘೋಷಿಸಿದೆ ಮತ್ತು ಈ ವರ್ಷದ ಡಿಸೆಂಬರ್ 31 ರಿಂದ ಕಂಪನಿಯಿಂದ ಹೊಸ ಉಪಕರಣಗಳನ್ನು ಖರೀದಿಸುವುದನ್ನು ನಿಷೇಧಿಸಿದೆ.ಇನ್ನೊಂದೆಡೆ ಹುವಾವೇಯನ್ನು ನಿಷೇಧಿಸಿದರೆ ಅದರ ಪರಿಣಾಮಗಳ ಎದುರಿಸಬೇಕಾಗುತ್ತದೆ ಎಂದು ಚೀನಾ ಯುಕೆಗೆ ಎಚ್ಚರಿಕೆ ನೀಡಿದೆ.
ಚೀನಾದ ಸರಕುಗಳನ್ನು ಬಹಿಷ್ಕರಿಸುವ ಕುರಿತಂತೆ ಹೆಚ್ಚಾಗುತ್ತಿರುವ ಬೇಡಿಕೆಗಳ ಹಿನ್ನೆಲೆ ಸರ್ಕಾರ ಕೂಡ ಚೀನಾದಿಂದ ಆಮದು ಕಡಿಮೆ ಮಾಡಲು ದೊಡ್ಡ ಯೋಜನೆಗಳನ್ನು ರೂಪಿಸುತ್ತಿದೆ. ಚೀನಾದಿಂದ ಆಮದಾಗುತ್ತಿರುವ ಸರಕುಗಳ ಮೇಲೆ ಕಸ್ಟಮ್ ಸುಂಕವನ್ನು ಹೆಚ್ಚಿಸಲು ಇದೀಗ ಸರ್ಕಾರ ಚಿಂತನೆ ನಡೆಸುತ್ತಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.