ಕಾವೇರಿ ನೀರಿನ ವಿವಾದದ ಬಗ್ಗೆ ಐತಿಹಾಸಿಕ ತೀರ್ಪನ್ನು ಶುಕ್ರವಾರ ಸುಪ್ರೀಂಕೋರ್ಟ್ ಪ್ರಕಟಿಸಿದೆ. 'ನದಿಗಳು ರಾಷ್ಟ್ರೀಯ ಸಂಪತ್ತು. ಯಾವುದೇ ಒಂದು ರಾಜ್ಯಕ್ಕೂ ನದಿಗಳ ಬಗ್ಗೆ ಸಂಪೂರ್ಣ ಹಕ್ಕು ಇರುವುದಿಲ್ಲ ಎಂಬುದನ್ನು ನ್ಯಾಯಾಲಯ ಸ್ಪಷ್ಟಪಡಿಸಿದೆ.
ಕಾವೇರಿ ನದಿ ನೀರು ಹಂಚಿಕೆ ವಿವಾದದ ಅಂತಿಮ ತೀರ್ಪು ಹಿನ್ನೆಲೆಯಲ್ಲಿ ಎಲ್ಲಿಯೂ ಕಾನೂನು ಸುವ್ಯವಸ್ಥೆ ಹದಗೆಡಂತೆ ಮುನ್ನೆಚ್ಚರಿಕೆ ವಹಿಸಲು ರಾಜ್ಯದಲ್ಲಿ ಮಧ್ಯರಾತ್ರಿಯಿಂದಲೇ ಹೈ ಅಲರ್ಟ್ ಜಾರಿಗೊಳಿಸಲಾಗಿದೆ.
ಕಾವೇರಿ ನ್ಯಾಯಾಧಿಕರಣದ ಐತೀರ್ಪನ್ನು ಪ್ರಶ್ನಿಸಿ ಸಲ್ಲಿಸಿದ್ದ ವಿಶೇಷ ಮೇಲ್ಮನವಿ ಅರ್ಜಿಗಳ ಅಂತಿಮ ಹಂತದ ವಿಚಾರಣೆ ನಡೆಸಿ ತೀರ್ಪು ಕಾಯ್ದಿರಿಸಿದ್ದ ನ್ಯಾಯಮೂರ್ತಿ ದೀಪಕ್ ಮಿಶ್ರಾ ನೇತೃತ್ವದ ತ್ರಿಸದಸ್ಯ ಪೀಠ ನಾಳೆ ಕಾವೇರಿ ತೀರ್ಪನ್ನು ಪ್ರಕಟಿಸಲಿದೆ.
ಸುಪ್ರೀಂಕೋರ್ಟ್ನಲ್ಲಿ ಕರ್ನಾಟಕ, ಕೇರಳ, ತಮಿಳುನಾಡು ರಾಜ್ಯಗಳು ಸಲ್ಲಿಸಿರುವ ವಿಶೇಷ ಮೇಲ್ಮನವಿ ಅರ್ಜಿ ವಿಚಾರಣೆ ಸಂದರ್ಭದಲ್ಲಿ ಕರ್ನಾಟಕ ಪರ ವಕೀಲ ಮೋಹನ್ ಕಾತರಕಿ ಬೆಂಗಳೂರಿಗೆ ನೀರು ಹಂಚಿಕೆ ಮಾಡಿದ ವಿಚಾರವನ್ನು ಪ್ರಸ್ತಾಪಿಸಿದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.