ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರ ಕುಟುಂಬದ ಬಗ್ಗೆ ವೈಯಕ್ತಿಕ ನಿಂದನೆಯ ಹೇಳಿಕೆ ನೀಡಿದ್ದ ಬಿಜೆಪಿ ಶಾಸಕ ಬಸವನಗೌಡ ಯತ್ನಾಳ್ ಅವರಿಗೆ ರಾಜ್ಯ ಕಾಂಗ್ರೆಸ್ ತಿರುಗೇಟು ನೀಡಿದೆ.ಯತ್ನಾಳ್ ಅವರನ್ನ ಸ್ವತಃ ಬಿಜೆಪಿಯೇ ಎತ್ತಿ ಮೂಲೆಗೆ ಎಸೆದಿದೆ.. ಬಸವನಗೌಡ ಅವರ ಬಾಯಿ ಬಚ್ಚಲು ಎಂದು ಬಿಎಸ್ ವೈ ಬಣದ ನಾಯಕರೇ ಹೇಳುತ್ತಿದ್ದಾರೆ. ಯತ್ನಾಳ್ ಅವರ ಮಾನಸಿಕ ಹಾಗೂ ಬಾಯಿ ಚಿಕಿತ್ಸೆಗೆ ಕಾಂಗ್ರೆಸ್ ಸರ್ಕಾರ ಉಚಿತ ಚಿಕಿತ್ಸೆ ವ್ಯವಸ್ಥೆ ಕಲ್ಪಿಸಲು ಸಿದ್ಧ.. ಇದು ಕಾಂಗ್ರೆಸ್ ನ ಗ್ಯಾರಂಟಿ ಎಂದು ಕೆಪಿಸಿಸಿ ಟ್ವೀಟ್ ಮಾಡಿದೆ.
₹40,000 crore scam: ಸಚಿವ ಮಧು ಬಂಗಾರಪ್ಪರವರದ್ದು ವಯಕ್ತಿಕ ವ್ಯವಹಾರಕ್ಕೆ ಸಂಬಂಧಿಸಿದ ವಿಚಾರ, ಅವರು ಸಾರ್ವಜನಿಕರ ತೆರಿಗೆಯ ಹಣವನ್ನು ಲಾಪಟಾಯಿಸಿಲ್ಲ, ತಮ್ಮ ಇಲಾಖೆಯಲ್ಲಿ ಅವ್ಯವಹಾರ ಮಾಡಿಲ್ಲ, ಸರ್ಕಾರಕ್ಕೆ ಸಂಬಂಧಿಸಿದಂತೆ ಯಾವುದೇ ಹಗರಣ ನಡೆಸಿಲ್ಲ, ಸರ್ಕಾರದ ಹಣಕ್ಕೆ ನಷ್ಟ ಉಂಟುಮಾಡಿಲ್ಲವೆಂದು ಕಾಂಗ್ರೆಸ್ ಸ್ಪಷ್ಟಪಡಿಸಿದೆ.
ಬಸನಗೌಡ ಪಾಟೀಲ್ ಯತ್ನಾಳ್ ಅವರ 40 ಸಾವಿರ ಕೋಟಿ ರೂ.ಆರೋಪ ರಾಜ್ಯ ಬಿಜೆಪಿಯನ್ನ ತಲ್ಲಣಗೊಳಿಸಿದೆ. ಇಂದು ನಡೆದ ಬಿಜೆಪಿ ಹಿರಿಯ ನಾಯಕರ ಸಭೆಯಲ್ಲೂ ದೊಡ್ಡ ಮಟ್ಟದ ಚರ್ಚೆಗೆ ಕಾರಣವಾಗಿದೆ. ಎಷ್ಟರ ಮಟ್ಟಿಗೆ ಅಂದರೆ ಸರ್ಕಾರದ ವಿರುದ್ಧದ ಹೋರಾಟಕ್ಕೂ ಇದು ಅಡ್ಡಿಯಾಗಿದೆ. ಲೋಕಸಭಾ ಚುನಾವಣೆಯ ಮೇಲೂ ಇದರ ಪರಿಣಾಮ ಬೀರಲಿದೆ.ಆದ್ದರಿಂದ ಇಂದಿನ ಬಿಜೆಪಿ ಸಭೆಯಲ್ಲಿ ಯತ್ನಾಳ್ ಬಗ್ಗೆಯೇ ಹೆಚ್ಚು ಚರ್ಚೆ ನಡೆದಿದೆ.
ವಿಜಯಪುರ ಬಿಜೆಪಿ ಶಾಸಕ ಬಸನಗೌಡ್ ಯತ್ನಾಳ್ ಬಿಜೆಪಿ ಅವಧಿಯಲ್ಲಿ ನಡೆದಿರುವ ಕೋವಿಡ್ ಹಗರಣಗಳ ದಾಖಲಾತಿಗಳನ್ನು ವಿಚಾರಣಾ ಆಯೋಗದ ಮುಂದಿರಿಸಲಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಬಿಜೆಪಿ ಸರ್ಕಾರದ ಅವಧಿಯಲ್ಲಿ 40 ಸಾವಿರ ಕೋಟಿ ಕೋವಿಡ್ ಹಗರಣ ನಡೆದಿದೆ ಎಂದು ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಅವರು ಕೇವಲ ಬಾಯಿ ಮಾತಲ್ಲಿ ಹೇಳಿದರೆ ಸಾಲದು. ತಮ್ಮ ಬಳಿ ಇರುವ ಮಾಹಿತಿ ಹಾಗೂ ದಾಖಲೆಗಳನ್ನ ಜಸ್ಟಿಸ್ ಕುನ್ನಾ ಅವರ ತನಿಖಾ ಆಯೋಗಕ್ಕೆ ನೀಡಲಿ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.
Rs 40000 crore scam during covid 19: ನಾನು ಪ್ರಧಾನಿ ಮೋದಿಯವರಿಗಾಗಿ ಕೆಲಸ ಮಾಡುತ್ತಿದ್ದೇನೆ. ಹೀಗಾಗಿ ನನಗೆ ನೋಟಿಸ್ ಕೊಟ್ಟು ಪಕ್ಷದಿಂದ ಉಚ್ಚಾಟಿಸಿ ನೋಡಲಿ. ಆಗ ಇವರೆಲ್ಲರ ಬಣ್ಣ ಬಯಲು ಮಾಡುತ್ತೇನೆ’ ಅಂತಾ ಪರೋಕ್ಷವಾಗಿ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪರ ವಿರುದ್ಧ ಯತ್ನಾಳ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
BJP vs BJP: ಕಳ್ಳನ ಹುಳುಕು ಮತ್ತೊಬ್ಬ ಕಳ್ಳನಿಗೆ ಮಾತ್ರ ಗೊತ್ತಿರುತ್ತದೆ ಎಂಬಂತೆ ಬಿಜೆಪಿಯ ಭ್ರಷ್ಟಾಚಾರದ ಜಾತಕ ಯತ್ನಾಳ್ ಕೈಯ್ಯಲ್ಲಿದೆ. ಯತ್ನಾಳ್ ಅದೆಷ್ಟೇ ಪಕ್ಷ ವಿರೋಧಿ ಹೇಳಿಕೆ ಕೊಟ್ಟರೂ ಕ್ರಮ ಕೈಗೊಳ್ಳುವ ಧೈರ್ಯ ತೋರದಿರುವುದು ಇದೇ ಕಾರಣಕ್ಕಾ ಬಿಜೆಪಿ? ಎಂದು ಕಾಂಗ್ರೆಸ್ ಟೀಕಿಸಿದೆ.
ಶಕ್ತಿಗಿಂತ ಗ್ರಹಗತಿಗಳ ಬಲಾಬಲಗಳ ಆಧಾರದ ಮೇಲೆ ಬಿಜೆಪಿ ಮುಖಂಡ ಬಸನಗೌಡ ಪಾಟೀಲ್ ಯತ್ನಾಳ್ಗೆ ಆ ಯೋಗ ಇದೆ ಎಂದು ತುಮಕೂರಿನ ನೊಣವಿನಕೆರೆಯಲ್ಲಿ ಯಶ್ವಂತ ಗುರೂಜಿ ಸ್ಫೋಟಕ ಭವಿಷ್ಯ ನುಡಿದಿದ್ದಾರೆ.
ಸದನದಲ್ಲಿ ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾಗಿರುವ ಬಿಜೆಪಿ ಶಾಸಕ ಯತ್ನಾಳ್ ಅವರನ್ನು ಸಿಎಂ ಸಿದ್ದರಾಮಯ್ಯ ಭೇಟಿಯಾಗಿ, ಆರೋಗ್ಯ ವಿಚಾರಿಸಿದರು. ಈ ವೇಳೆ ಸ್ಪೀಕರ್ ಯು.ಟಿ.ಖಾದರ್ ಉಪಸ್ಥಿತರಿದ್ದರು.
ಯತ್ನಾಳ್ ಅವರೇ ನೀವೇನು ಮಾತನಾಡಿದ್ದೀರಿ ಎಂಬ ಇತಿಹಾಸ ನಮ್ಮ ಬಳಿ ಇದೆ. ನೀವು ನೀಡಿದ ಹೇಳಿಕೆಯನ್ನು ನಿಮ್ಮ ಮುಖ್ಯಮಂತ್ರಿಗಳು ಕೇಳಿಸಿಕೊಂಡು ಸುಮ್ಮನೆ ಕೂತಿರಬಹುದು. ಆದರೆ ನಾವು ಹಾಗೆ ಕೇಳಿಸಿಕೊಂಡಿರಲು ಸಾಧ್ಯವಿಲ್ಲ. ನೀನು ನಾಲಿಗೆ ಮೇಲೆ ಹಿಡಿತವಿಟ್ಟುಕೊಂಡು ಮಾತನಾಡಬೇಕು ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದರು.
ಬೆಂಗಳೂರು: ರಾಜ್ಯದಲ್ಲಿ ಸೌಹಾರ್ಧತೆ ಧಕ್ಕೆ ತರುವಂತಹ ಕೆಲಸವನ್ನು ಚಕ್ರವರ್ತಿ ಸೂಲಿಬೆಲೆ ಮುಂದುವರೆಸಿದ್ದೆ ಆದಲ್ಲಿ ಅವರನ್ನು ಜೈಲು ಕಂಬಿ ಎನಿಸುವ ಹಾಗೆ ಮಾಡುವುದಾಗಿ ಹೇಳಿದ್ದ ಸಚಿವ ಎಂ.ಬಿ ಪಾಟೀಲ್ ಹೇಳಿಕೆಗೆ ಶಾಸಕ ಯತ್ನಾಳ್ ಪ್ರತಿಕ್ರಿಯೆ ನೀಡಿದ್ದಾರೆ.
ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದಿರುವ ಬೆನ್ನಲ್ಲೇ ಈಗ ಪೋಲಿಸ್ ಇಲಾಖೆಗೆ ಹೊಸ ಆಯಾಮ ನೀಡಲು ಮುಂದಾಗಿರುವ ನಡೆಗೆ ಬಿಜೆಪಿ ನಾಯಕ ಬಸನಗೌಡ ಪಾಟೀಲ್ ಯತ್ನಾಳ್ ಆಕ್ರೋಶ ವ್ಯಕ್ತಪಡಿಸಿ ಡಿ.ಕೆ.ಶಿವಕುಮಾರ್ ಅವರು ಪೋಲಿಸ್ ಇಲಾಖೆಯನ್ನು ಹಸೀರಿಕರಣ ಮಾಡುತ್ತಾರಾ? ಎಂದು ಪ್ರಶ್ನಿಸಿದ್ದಾರೆ.
ಕಾಂಗ್ರೆಸ್ ಪಕ್ಷದ ಗೌರವಾನ್ವಿತ ನಾಯಕಿ ಸೋನಿಯಾ ಗಾಂಧಿಯವರನ್ನು ಅಶ್ಲೀಲ ಶಬ್ದಗಳಿಂದ ನಿಂದಿಸುತ್ತಿರುವ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು ತಕ್ಷಣ ಪಕ್ಷದಿಂದ ಉಚ್ಚಾಟಿಸುವಂತೆ ಪ್ರಧಾನಿ ನರೇಂದ್ರ ಮೋದಿ ಅವರು ಸೂಚನೆ ನೀಡಬೇಕು, ಇಲ್ಲದೆ ಇದ್ದರೆ ಅವರ ಬೆಂಬಲದಿಂದಲೇ ಯತ್ನಾಳ್ ಅವರು ಇಂತಹ ನೀಚತನದ ಪ್ರದರ್ಶನ ಮಾಡುತ್ತಿದ್ದಾರೆಂದು ತಿಳಿದುಕೊಳ್ಳಬೇಕಾಗುತ್ತದೆ ಎಂದು ಪ್ರತಿಪಕ್ಷದ ನಾಯಕ ಸಿದ್ಧರಾಮಯ್ಯ ಆಗ್ರಹಿಸಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.