ಶಿವಮೊಗ್ಗದಲ್ಲಿ ಚಾಕು ಇರಿತ ಘಟನೆ ನಡೆಯಬಾರದಿತ್ತು.ಯಾರೇ ತಪ್ಪು ಮಾಡಿದ್ದರೂ ಕಠಿಣ ಕ್ರಮ ತೆಗೆದುಕೊಳ್ಳಲು ನಾನು ಆದೇಶ ಮಾಡಿದ್ದೇನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹೇಳಿದರು.
ಇದು ಅಖಂಡ ಭಾರತದ ಕಥೆ. ಕೇವಲ ಭಾರತವಲ್ಲ. ಆಫ್ಘಾನಿಸ್ತಾನ, ಪಾಕಿಸ್ತಾನದಿಂದ ಹಿಡಿದು ಮ್ಯಾನ್ಮಾರ್‍ವರೆಗೆ ಹಾಗೂ ಹಿಮಾಲಯದಿಂದ ಹಿಡಿದು ಶ್ರೀಲಂಕಾದವರೆಗೆ ಹರಡಿಕೊಂಡಿದ್ದ ಅಖಂಡ ಭಾರತದ ಕಥೆ. ಈ ಅಖಂಡ ಭಾರತದ ಕಲ್ಪನೆಯೇ ನಮ್ಮ ಬದುಕನ್ನು ಎಷ್ಟು ವಿಶಾಲಗೊಳಿಸಿತು ಎಂದರೆ ಇಡೀ ವಿಶ್ವವನ್ನು ನಾವು ಒಂದು ಕುಟುಂಬವಾಗಿ ಕಾಣುತ್ತೇವೆ.ನಮ್ಮಲ್ಲಿ ಮಾತ್ರ ಕುಟುಂಬ - ತಾಯಿಯ ಕಲ್ಪನೆ ತಲೆ ತಲಾಂತರದಿಂದ ಮೂಡಿ ಬಂದಿದೆ. ಇದೇ ಇಂದಿಗೂ ನಮ್ಮ ದೇಶದ ಸಂಸ್ಕøತಿಯನ್ನು ಕಾಪಾಡಲು ಕಾರಣವಾಗಿದೆ.
ರಾಜ್ಯ ಬಿಜೆಪಿ ಸರ್ಕಾರ ದಿನಪತ್ರಿಕೆಗಳಿಗೆ ನೀಡಿರುವ ಜಾಹೀರಾತಿನಲ್ಲಿ ಪಂಡಿತ್ ಜವಹರಲಾಲ್ ನೆಹರು ಫೋಟೊ ಕೈಬಿಟ್ಟಿರುವುದಕ್ಕೆ ವಿಪಕ್ಷ ನಾಯಕ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಜನರನ್ನು ನರಕಕ್ಕೆ ತಳ್ಳುವುದು ರಾಷ್ಟ್ರ ದ್ರೋಹವಾಗುತ್ತದೆ ಎಂಬ ಕನಿಷ್ಠ ತಿಳುವಳಿಕೆ ಇಲ್ಲದಂತೆ ಬಿಜೆಪಿಯವರು ವರ್ತಿಸುತ್ತಿದ್ದಾರೆ ಎಂದು ಸಿದ್ಧರಾಮಯ್ಯ ಬಿಜೆಪಿ ಸರ್ಕಾರದ ಮೇಲೆ ವಾಗ್ದಾಳಿ ನಡೆಸಿದ್ದಾರೆ.
ರಾಜ್ಯಕ್ಕೆ ಬಿಜೆಪಿಯ ಮೂರನೇ ಮುಖ್ಯಮಂತ್ರಿ ಬರಲಿದ್ದಾರೆ ಎಂಬ ಕಾಂಗ್ರೆಸ್ ಟ್ವೀಟ್‌ನ ಹಿನ್ನೆಲೆಯಲ್ಲಿ ಮಂಗಳೂರಲ್ಲಿ ಮಾತನಾಡಿದ ಅವರು, ಮುಂದಿನ ಚುನಾವಣೆಯನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ, ಹಿರಿಯರಾದ ಯಡಿಯೂರಪ್ಪನವರ ಮಾರ್ಗದರ್ಶನದಲ್ಲಿ ಎದುರಿಸುತ್ತೇವೆ ಎಂದಿದ್ದಾರೆ.
ಸಿಎಂ ಬೊಮ್ಮಾಯಿ ದೆಹಲಿ ಪ್ರವಾಸ ಕೈಗೊಂಡಿದ್ದರೆ ಶನಿವಾರ ರಾಷ್ಟ್ರಪತಿ ಭವನದಲ್ಲಿ ಪ್ರಧಾನಿ ಮೋದಿ ಅಧ್ಯಕ್ಷತೆಯಲ್ಲಿ ನಡೆಯಲಿರುವ ‘ಅಜಾದಿ ಕಾ ಅಮೃತ್ ಮಹೋತ್ಸವ’ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಿದ್ದರು.
ಚಿತ್ರನಟ ಡಾ: ಪುನೀತ್ ರಾಜ್ ಕುಮಾರ್ ಅವರಿಗೆ ಕರ್ನಾಟಕ ರತ್ನ ಪ್ರಶಸ್ತಿಯನ್ನು ನವೆಂಬರ್ 1 ರಂದು ಪ್ರದಾನ ಮಾಡಲು ತೀರ್ಮಾನಿಸಲಾಗಿದೆ ಎಂದು ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಆಸ್ಪತ್ರೆಯು ಕಳೆದ 45 ವರ್ಷಗಳಿಂದ ಸುಮಾರು 10ಕ್ಕಿಂತಲೂ ಹೆಚ್ಚು ಜಿಲ್ಲೆಗಳ ಬಡರೋಗಿಗಳ ಆಶಾಕಿರಣವಾಗಿದೆ. ಆಯುಷ್ಮಾನ್ ಭಾರತ, ಆರೋಗ್ಯ ಕರ್ನಾಟಕ, ಇಎಸ್‌ಐ, ರೇಲ್ವೆ, ಇಸಿಎಚ್‌ಎಸ್ ಯೋಜನೆಯಡಿ ಪ್ರತಿ ತಿಂಗಳು ಸುಮಾರು 200 ಕ್ಕೂ ಹೆಚ್ಚು ಬಡ ರೋಗಿಗಳು ಹಾಗೂ ವರ್ಷಕ್ಕೆ 2,000 ಬಡರೋಗಿಗಳು ಚಿಕಿತ್ಸೆ ಪಡೆಯುತ್ತಿದ್ದಾರೆ.
ಮಕ್ಕಳಲ್ಲಿ ಕನ್ನಡದ ಭಾಷೆ, ಸಂಸ್ಕೃತಿ, ಇತಿಹಾಸ ಹಾಗೂ ಪರಂಪರೆ ಕುರಿತು ಅಭಿಮಾನ ಮೂಡಿಸುವ ಕೆಲಸವನ್ನು ಸರ್ಕಾರ ಹಾಗೂ ಕನ್ನಡ ಸಾಹಿತ್ಯ ಪರಿಷತ್ತು ಜೊತೆಯಾಗಿ ಮಾಡಬೇಕಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಅಭಿಪ್ರಾಯಪಟ್ಟರು.