Karnataka Politics : ಕಳೆದ ಮೂರು ನಾಲ್ಕು ದಿನಗಳ ಬೆಳವಣಿಗೆ ಗಮನಿಸಿದರೆ ಬಿಜೆಪಿಗೆ ಸಂಪೂರ್ಣ ಬಹುಮತ ದೊರೆಯಲಿದೆ ಎಂದು ಸಿಎಂ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಕೆಲವು ಕ್ಷೇತ್ರದಲ್ಲಿ ಆಶ್ಚರ್ಯಕರ ಫಲಿತಾಂಶ ಬರಲಿದೆ ಎಂದು ಹೇಳಿದ್ದಾರೆ.
ಕಾರ್ಮಿಕ ಮಹಿಳೆಯರಿಗೆ ಬಸ್ ಪಾಸ್ ಕೊಡದ ವಿಚಾರ ಪ್ರತಿಕ್ರಿಯೆ ನೀಡಿದ ಡಿಕೆಶಿ ಸಿಎಂ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.. ಬೊಮ್ಮಾಯಿಯದ್ದು ಯಾವಾಗಲೂ ಫೂಲ್ ಮಾಡುವ ಕೆಲಸ ಎಂದು ಕಿಡಿಕಾರಿದ್ದಾರೆ..
ಇಂದು ಸಿಎಂ ಬಸವರಾಜ ಬೊಮ್ಮಾಯಿ ಹಾವೇರಿ ಜಿಲ್ಲಾ ಪ್ರವಾಸ. ಬೆಳಗ್ಗೆ 11ಕ್ಕೆ ಯಲಬುರ್ಗಾದಿಂದ ರಾಣೇಬೆನ್ನೂರುನತ್ತ ಪ್ರಯಣ. ಅಭಿವೃದ್ಧಿ ಕಾಮಗಾರಿ.. ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ಭಾಗಿ.
ನಂದಿಗಿರಿದಾಮದ ರೋಪ್ ವೇ ನಿರ್ಮಾಣಕ್ಕೆ ಸಿಎಂ ಬೊಮ್ಮಾಯಿ ಶಂಕುಸ್ಥಾಪನೆ ನೆರವೇರಿಸಿದ್ದಾರೆ.. 93.4 ಕೋಟಿ ವೆಚ್ಚದ 2.9 KM ಮೀಟರ್ ಉದ್ದದ ರೋಪ್ ವೇ ನಿರ್ಮಾಣಕ್ಕೆ ಸಿಎಂ ಚಾಲನೆ ನೀಡಿದ್ದಾರೆ.
ಬಂಜಾರ ಸಮುದಾಯ ನಡೆಸುತ್ತಿರುವ ಪ್ರತಿಭಟನೆಗೆ ಸಂಬಂಧಿಸಿದಂತೆ ಇಂದು ಚಿಕ್ಕಬಳ್ಳಾಪುರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಇದಕ್ಕೆಲ್ಲ ಸ್ಥಳೀಯ ಕಾಂಗ್ರೆಸ್ ನಾಯಕರ ಪ್ರಚೋದನೆಯಿದೆ ನಾವು ಎಲ್ಲರಿಗೂ ಸಾಮಾಜಿಕ ನ್ಯಾಯ ಕೊಟ್ಟ ಮೇಲೆ ಕಾಂಗ್ರೆಸ್ ನವರಿಗೆ ತಡೆದುಕೊಳ್ಳಲಾಗದೇ, ಈ ರೀತಿಯ ಹಿಂಸೆಗೆ ಪ್ರಚೋದನೆ ನೀಡುತ್ತಿದ್ದಾರೆ. ಈ ಪ್ರಚೋದನೆಗೆ ಬಂಜಾರ ಸಮುದಾಯ ಒಳಗಾಗಬಾರದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ಒಂದೇ ವರ್ಷದಲ್ಲಿ ಯೋಜನೆಯನ್ನು ಸಂಪೂರ್ಣ ಮಾಡಿ, ಈ ತಾಲ್ಲೂಕಿನ ಜನತೆಗೆ ಲೋಕಾರ್ಪಣೆ ಮಾಡುವ ಸೌಭಾಗ್ಯ ನನಗೆ ಸಿಕ್ಕಿದೆ. ಹಿಂದಿನ ಸರ್ಕಾರದ ಧೀಮಂತ ನಾಯಕ ಎನಿಸಿಕೊಂಡ ಈ ಜಿಲ್ಲೆಯ ಬಾದಾಮಿ ಶಾಸಕರು, ಮಾಜಿ ಮುಖ್ಯಮಂತ್ರಿಗಳು ಅಡಿಗಲ್ಲು ಹಾಕಿ, ಲೋಕಾರ್ಪಣೆ ಮಾಡಿದ ಒಂದೇ ಒಂದು ಯೋಜನೆಯನ್ನು ತೋರಿಸಿ ಎಂದು ಸಿಎಂ ಬೊಮ್ಮಾಯಿ ಸವಾಲು ಹಾಕಿದರು.ಒಂದೇ ವರ್ಷದಲ್ಲಿ ಯೋಜನೆಯನ್ನು ಸಂಪೂರ್ಣ ಮಾಡಿ, ಈ ತಾಲ್ಲೂಕಿನ ಜನತೆಗೆ ಲೋಕಾರ್ಪಣೆ ಮಾಡುವ ಸೌಭಾಗ್ಯ ನನಗೆ ಸಿಕ್ಕಿದೆ. ಹಿಂದಿನ ಸರ್ಕಾರದ ಧೀಮಂತ ನಾಯಕ ಎನಿಸಿಕೊಂಡ ಈ ಜಿಲ್ಲೆಯ ಬಾದಾಮಿ ಶಾಸಕರು, ಮಾಜಿ ಮುಖ್ಯಮಂತ್ರಿಗಳು ಅಡಿಗಲ್ಲು ಹಾಕಿ, ಲೋಕಾರ್ಪಣೆ ಮಾಡಿದ ಒಂದೇ ಒಂದು ಯೋಜನೆಯನ್ನು ತೋರಿಸಿ ಎಂದು ಸಿಎಂ ಬೊಮ್ಮಾಯಿ ಸವಾಲು ಹಾಕಿದರು.
ಇಲ್ಲಿನ ಗ್ರಾನೈಟ್ ಅಂತರರಾಷ್ಟ್ರೀಯ ಮಾರುಕಟ್ಟೆಗೆ ಹೋಗಿದೆ. ಕಳೆದ ಮೂರು ವರ್ಷಗಳಲ್ಲಿ ಔದ್ಯೋಗಿಕವಾಗಿ, ಕೃಷಿಗೆ ಪ್ರಸಿದ್ಧವಾಗಿರುವ ಕ್ಷೇತ್ರದ ಸಮಗ್ರ ಅಭಿವೃದ್ಧಿ, ದಾಖಲೆ ಪ್ರಮಾಣದಲ್ಲಿ ಆಗಿದೆ. ಇದಕ್ಕೆ ಕಾರಣ ನಮ್ಮ ಸರ್ಕಾರ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ಸ್ವಗ್ರಾಮ ಕಮಡೊಳ್ಳಿಯಲ್ಲಿ ಬೊಮ್ಮಾಯಿಗೆ ಸನ್ಮಾನ. ಕಮ್ಮಡೊಳ್ಳಿ ಗ್ರಾಮಸ್ಥರಿಂದ ಸನ್ಮಾನ. ಧಾರವಾಡ ಜಿಲ್ಲೆ ಕುಂದಗೋಳ ತಾ. ಕಮ್ಮಡೊಳ್ಳಿ ಗ್ರಾಮ. ಕಲ್ಯಾಣಪುರ ಬಸವಣ್ಣ ಅಜ್ಜಠದ ಶ್ರೀಗಳಿಂದ ಆರ್ಶೀವಚನ. ಸಿಎಂ ಸನ್ಮಾನ ಕಾರ್ಯಕ್ರಮದಲ್ಲಿ ಬಾಲ್ಯದ ಸ್ನೇಹಿತರು ಭಾಗಿ.
ಸ್ನೇಹಿತರು, ಸಂಬಂಧಿಕರನ್ನ ನೋಡಿ ಸಿಎಂ ಭಾವುಕ. ಕಮ್ಮಡೊಳ್ಳಿಯ ತಮ್ಮ ನಿವಾಸದಲ್ಲಿ ಸಿಎಂ ಕಣ್ಣೀರು. ತಮ್ಮ ತಂದೆ ತಾಯಿ ಜನಿಸಿ ಬಾಳಿ ಬದುಕಿದ ಗ್ರಾಮ. ತಮ್ಮ ಬಾಲ್ಯದ ನೆನಪು ಮೆಲುಕು ಹಾಕಿದ ಸಿಎಂ. ಸಿಎಂ ಹುದ್ದೆಗೆ ಏರಲು ಸ್ನೇಹಿತರ ಸಹಾಯ ನೆನೆದ ಸಿಎಂ.
ನನ್ನ ಕ್ಷೇತ್ರದಲ್ಲಿ ಸಾರ್ವಜನಿಕ ಸಹಭಾಗಿತ್ವದಲ್ಲಿ ಪ್ರಸ್ತುತ ವರ್ಷ 151 ಶಾಲಾ ಕೊಠಡಿಗಳನ್ನು ನಿರ್ಮಿಸಲಾಗುತ್ತಿದ್ದು, ಮುಂದಿನ ಮೂರು ವರ್ಷಗಳ ಅವಧಿಯಲ್ಲಿ 500 ಶಾಲಾ ಕೊಠಡಿಗಳನ್ನು ನಿರ್ಮಿಸಲಾಗುತ್ತದೆ. ಬರುವ ಅಗಸ್ಟ್ 15ರ ಒಳಗಾಗಿ ರಾಜ್ಯದ ಎಲ್ಲ ಸರಕಾರಿ ಶಾಲೆಗಲ್ಲಿ ವಿದ್ಯಾರ್ಥಿ ಹಾಗೂ ವಿದ್ಯಾರ್ಥಿನಿಯರಿಗೆ ಪ್ರತ್ಯೇಕ ಶೌಚಾಲಯ ನಿರ್ಮಿಸಲು 280 ಕೋಟಿ ರೂಪಾಯಿ ಅನುದಾನ ಬಿಡುಗಡೆ ಮಾಡಲಾಗಿದೆ.
ರೋಣದಲ್ಲಿ 46 ಕೋಟಿ ವೆಚ್ಚದಲ್ಲಿ ಕುಡಿಯುವ ನೀರಿನ ಯೋಜನೆಯಾಗಿದೆ. ನರೆಗಲ್ ಮತ್ತು ಗಜೇಂದ್ರ ಗಡಕ್ಕೆ 69 ಕೋಟಿ ರೂ.ಗಳ ವೆಚ್ಚದಲ್ಲಿ ಚಕಲ್ಪಿಸಲಾಗಿದೆ. ಮೂರೂ ನಗರಗಳಿಗೆ ಶುದ್ಧವಾದ ಸಂಸ್ಕರಿಸಿದ ನೀರು ಒದಗಿಸುವ ಯೋಜನೆಯನ್ನು ಉದ್ಘಾಟಿಸಿರುವುದು ಸಂತಸ ತಂದಿದೆ ಎಂದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.