Bengaluru Latest News: ಬೆಂಗಳೂರಿನ ಹೃದಯ ಭಾಗದಲ್ಲಿ ವೈಟ್ ಟಾಪಿಂಗ್ ಕಾಮಗಾರಿ ಆರಂಭವಾಗಿ ಸುಮಾರು ತಿಂಗಳುಗಳೇ ಕಳೆದಿವೆ. ವೈಟ್ ಟ್ಯಾಪಿಂಗ್ ಗುರುತಿಸಿದ ಹಲವು ರಸ್ತೆಗಳನ್ನ ಬಿಬಿಎಂಪಿ ಅಗೆದು ಹಾಕಿದ್ದು ಕಾಮಗಾರಿ ಆಮೆಗತಿಯಲ್ಲಿ ಸಾಗುತ್ತಿರುವ ಹಿನ್ನಲೆಯಲ್ಲಿ ಒಂದೆಡೆ ಟ್ರಾಫಿಕ್ ಸಮಸ್ಯೆ ಹೆಚ್ಚಾಗಿದ್ದರೆ, ಮತ್ತೊಂದೆಡೆ ವಾಣಿಜ್ಯ ಚಟುವಟಿಕೆಗಳಿಗೂ ಪೆಟ್ಟು ಬಿದ್ದಿದೆ.
ಗ್ರೇಟರ್ ಬೆಂಗಳೂರು ಪ್ರಾಧಿಕಾರ ವ್ಯಾಪ್ತಿಯಲ್ಲಿ 5 ನಗರ ಪಾಲಿಕೆಗಳ ಅಧಿಕಾರಿಗಳ ಜೊತೆ ಇಂದು ಮಲ್ಲೇಶ್ವರಂನ ಐ.ಪಿ.ಪಿ ಕೇಂದ್ರದಲ್ಲಿ ಮೊದಲ ಸಭೆ ನಡೆಸಿದ ವೇಳೆ ಮಾತನಾಡಿದ ಅವರು, ಬೆಂಗಳೂರಿನಲ್ಲಿ ನಾಗರಿಕರಿಗೆ ಉತ್ತಮ ಆಡಳಿತ ಹಾಗೂ ಪರಿಣಾಮಕಾರಿಯಾಗಿ ಯೋಜನೆಗಳನ್ನು ಜಾರಿಗೊಳಿಸುವ ಸಲುವಾಗಿ ಜಿ.ಬಿ.ಎ ಜಾರಿಗೆ ತಂದು 5 ನಗರ ಪಾಲಿಕೆಗಳನ್ನು ಅಸ್ತಿತ್ವಕ್ಕೆ ತರಲಾಗಿದೆ. ಹೊಸದಾಗಿ ನೇಮಕಗೊಂಡ ಎಲ್ಲಾ ಅಧಿಕಾರಿಗಳಿಗೂ ಎಲ್ಲಾ ರೀತಿಯ ಸಹಕಾರ ಮತ್ತು ಸೌಲಭ್ಯಗಳನ್ನು ನೀಡಲಾಗುವುದೆಂದು ತಿಳಿಸಿದರು.
Dengue in Bangalore: ಮಳೆ ಹೆಚ್ಚಾದಂತೆ ರಾಜ್ಯದಲ್ಲಿ ಡೆಂಗ್ಯೂ ಪ್ರಕರಣಗಳ ಸಂಖ್ಯೆ ವೇಗವಾಗಿ ಹೆಚ್ಚಾಗುತ್ತಿದ್ದು ಜನರಲ್ಲಿ ಆತಂಕ ಹುಟ್ಟಿಸಿದೆ. ಬಿಬಿಎಂಪಿ ನೀದ್ರುವ ಮಾಹಿತಿಯ ಪ್ರಕಾರ, ಕೇವಲ ಜುಲೈ ತಿಂಗಳೊಂದರಲ್ಲೇ 442ಡೆಂಗ್ಯೂ ಪ್ರಕರಣಗಳು ವರದಿಯಾಗಿವೆ.
ತುಂಬಿರುವ ಎಲ್ಲಾ ಕೆರೆಗಳ ತೂಬುಗಳ ಬಳಿ ಹಾಗೂ ಕೆರೆಯಲ್ಲಿ ಸ್ವಚ್ಛತಾ ಕಾರ್ಯವನ್ನು ಮಾಡಲಾಗುತ್ತಿದೆ. ಕೆರೆಗಳು ನೀರು ಹೋಗುವ ಕಾಲುವೆಗಳಲ್ಲಿ ಕಸ-ಕಡ್ಡಿ, ಪ್ಲಾಸ್ಟಿಕ್ ಸೇರಿದಂತೆ ಇನ್ನಿತರೆ ತ್ಯಾಜ್ಯವನ್ನು ತೆರವುಗೊಳಿಸಲು ಸಿಬ್ಬಂದಿಗಳನ್ನು ನಿಯೋಜಿಸಿ ಸ್ವಚ್ಛತಾ ಕಾರ್ಯವನ್ನು ಮಾಡಲಾಗುತ್ತಿದೆ.