BBMP Elections : ಶಾಸಕರ ಅಸಮಧಾನ ತಣ್ಣಗಾಗಿಸಲು ಸಿಎಂ ,ಡಿಸಿಎಂ ನಡೆಸುತ್ತಿರುವ ಸಭೆ ಇಂದು ಸಹ ಮಂದುವರೆದಿದೆ. ಇಂದು ಸಬೆಂಗಳೂರು ನಗರ ಜಿಲ್ಲೆ ಶಾಸಕರ ಸಭೆ ನಡೆಸಿದ ಅಹವಾಲುಗಳನ್ನು ಆಲಿಸಿದ್ದಾರೆ.ಜತೆಗೆ ಬಿಬಿಎಂಪಿ ಚುನಾವಣೆ, ಲೋಕಸಭಾ ಚುನಾವಣೆ,ಗುತ್ತಿಗೆದಾರರ ಬಿಲ್,ಕಸ ಸೇರಿದಂತೆ ವಿವಿಧ ಅಭಿವೃದ್ಧಿ ವಿಚಾರಗಳ ಬಗ್ಗೆಯೂ ಸಮಗ್ರ ಚೆರ್ಚೆ ನಡೆಸಿದ್ದಾರೆ.
ಬಿಬಿಎಂಪಿ ಚುನಾವಣೆಯನ್ನು ಡಿಸೆಂಬರ್ 31ರೊಳಗೆ ನಡೆಸಬೇಕು ಎಂಬ ಹೈಕೋರ್ಟ್ ಆದೇಶವನ್ನು ಆಮ್ ಆದ್ಮಿ ಪಾರ್ಟಿ ಸ್ವಾಗತಿಸಿದ್ದು, ಬಿಜೆಪಿಗೆ ತಾಕತ್ತಿದ್ದರೆ ಚುನಾವಣೆ ಮುಂದೂಡಲು ನೆಪ ಹುಡುಕುವ ಬದಲು ಈ ಆದೇಶವನ್ನು ಪಾಲಿಸಲಿ ಎಂದು ಎಎಪಿ ಬೆಂಗಳೂರು ಅಧ್ಯಕ್ಷ ಮೋಹನ್ ದಾಸರಿ ಸವಾಲು ಹಾಕಿದರು.
ಬಿಬಿಎಂಪಿ ಚುನಾವಣೆ ಪ್ರಕ್ರಿಯೆ ದಿನೆ ದಿನೆ ಗರಿಗೆದರುತ್ತಿದೆ. ಪಾಲಿಕೆ ವ್ಯಾಪ್ತಿಯ ಪ್ರತೀ ಕೆಲಸದಲ್ಲಿ ಪಾಲಿಕೆ ತೊಡಗಿದ್ದು, ಇಂದು ಅಧಿಕೃತವಾಗಿ ಆರಂಭಗೊಂಡಿದೆ. ಈ ಮೂಲಕ ರಾಜ್ಯ ಚುನಾವಣಾ ಆಯೋಗ ಇಂದು ಮತದಾರರ ಕರಡು ಪಟ್ಟಿಯನ್ನು ಪ್ರಕಟಿಸಿದ್ದು, 2022ರ ಅಂತ್ಯದೊಳಗೆ ಚುನಾವಣೆ ನಡೆಯಲಿದೆ ಎಂದು ರಾಜ್ಯ ಚುನಾವಣಾ ಆಯುಕ್ತ ಬಸವರಾಜ್ ತಿಳಿಸಿದರು.
ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ನೇತೃತ್ವದಲ್ಲಿ ಇಂದು ಬೆಳಗ್ಗೆ 10 ಗಂಟೆಯಿಂದ ಬಿಜೆಪಿ ಕಚೇರಿಯಲ್ಲಿ ಸರಣಿ ಸಭೆ ನಡೆಯಲಿದೆ. ರಾಜ್ಯದಲ್ಲಿ ಬರುವ ಮುಂದಿನ ಚುನಾವಣೆಗೆ ಬಿಜೆಪಿ ಭರ್ಜರಿ ಸಿದ್ಧತೆ ನಡೆಯುತ್ತಿದೆ. ಬಿಬಿಎಂಪಿ ಚುನಾವಣೆ ವಿಚಾರವಾಗಿಯೂ ಚರ್ಚೆ ನಡೆಯಲಿದೆ.
ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರಲು ಕಾರಣರಾದ ವಸಲೆ ಶಾಸಕರಿಗೂ ಅಭ್ಯರ್ಥಿಗಳ ಆಯ್ಕೆಯಲ್ಲಿ ಅವಕಾಶ ನೀಡಲಾಗಿದೆ. ಆದರೆ ಯಾವುದೇ ಶಾಸಕರು ನೇರವಾಗಿ ಯಾವುದೇ ಅಭ್ಯರ್ಥಿಯನ್ನು ಪ್ರಕಟಿಸುವಂತಿಲ್ಲ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.