ಬೆಂಗಳೂರು ನಿವೇಶನದಾರರಿಗೆ ಎಚ್ಚರಿಕೆ ಕೊಟ್ಟ ಬಿಡಿಎ
ಸೈಟ್ ಖರೀದಿಸಿ ಮನೆ ಕಟ್ಟದಿದ್ದರೆ ದಂಡ ಹಾಕಲು ಪ್ಲ್ಯಾನ್
ನಿಗದಿತ ಅವಧಿಯೊಳಗೆ ಮನೆ ಕಟ್ಟದವರಿಗೆ ದಂಡ ಫಿಕ್ಸ್
BDA ಸೈಟಿನ ಮಾರ್ಗಸೂಚಿ ದರದ ಮೇಲೆ ಶೇ. 10ರಷ್ಟು ದಂಡ
ಕಾಂಗ್ರೆಸ್ ಸರ್ಕಾರ ಪಾಪರ್ ಆಗಿ ದಿವಾಳಿಯ ಪರಮಾವಧಿಗೆ ತಲುಪಿದೆ. ಕೇರಳ ಸರ್ಕಾರ ದಿವಾಳಿಯಾಗಿ ಸಾಲವೂ ಸಿಗುತ್ತಿಲ್ಲ. ಅದೇ ರೀತಿ ನಮ್ಮ ರಾಜ್ಯವೂ ಆರ್ಥಿಕತೆಯಲ್ಲಿ ಕೊನೆಯ ಸ್ಥಾನಕ್ಕೆ ಬರಲಿದೆ. ಸರ್ಕಾರದ ಆಸ್ತಿಗಳನ್ನು ಮಾರಾಟ ಮಾಡಿ ದುಡ್ಡು ಹೊಡೆಯುವ ಕೆಲಸವನ್ನು ಸರ್ಕಾರ ಮಾಡುತ್ತಿದೆ ಎಂದು ವಿಪಕ್ಷ ನಾಯಕ ಆರ್. ಅಶೋಕ್ ಹೇಳಿದರು.
Eviction of unauthorized buildings: ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರಕ್ಕೆ ಸೇರಿರುವ ಜಾಗದಲ್ಲಿ ಅನಧಿಕೃತವಾಗಿ ನಿರ್ಮಾಣವಾಗಿದ್ದ ಕಟ್ಟಡಗಳನ್ನು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಅಧಿಕಾರಿಗಳು ತೆರವುಗೊಳಿಸಿದರು.
ನಾಡಪ್ರಭು ಕೆಂಪೇಗೌಡ ಬಡಾವಣೆಗೆ ಹಾಗೂ ಉದ್ದೇಶಿತ MAR ಗೆ ಭೂಸ್ವಾಧೀನಪಡಿಸಿಕೊಂಡಿದ್ದು, ಇದರಲ್ಲಿ ಅನಧಿಕೃತವಾಗಿ ಕಂದಾಯ ನಿವೇಶನದಾರರು ಒತ್ತುವರಿ ಮಾಡಿಕೊಂಡು ಕಾಮಗಾರಿಗೆ ಅಡಚಣೆ ಉಂಟುಮಾಡುತ್ತಿದ್ದರಿಂದ ಸುಮಾರು 5 ಎಕರೆ ಜಮೀನನ್ನು ತೆರವುಗೊಳಿಸಿ ಪ್ರಾಧಿಕಾರವು ತನ್ನ ಸುಪರ್ಧಿಗೆ ತೆಗೆದುಕೊಂಡಿದೆ.
ಬಿಡಿಎನಲ್ಲಿ ಅವ್ಯಾಹತವಾಗಿ ಭ್ರಷ್ಟಾಚಾರ ನಡೆಯುತ್ತಿರುವ ಬಗ್ಗೆ ಲೋಕಾಯುಕ್ತಕ್ಕೆ ಸಾಲು-ಸಾಲು ದೂರುಗಳು ಬರುತ್ತಿದ್ದವು. ಹೀಗಾಗಿ ಲೋಕಾಯುಕ್ತ ನ್ಯಾ.ಬಿ.ಎಸ್.ಪಾಟೀಲ್ ನೇತೃತ್ವದ ಆರು ತಂಡವಿರುವ 35 ಮಂದಿ ಅಧಿಕಾರಿ ಹಾಗೂ ಸಿಬ್ಬಂದಿ ನೇತೃತ್ವದ ತಂಡ ದಾಳಿ ನಡೆಸಿ ಮಹತ್ವದ ದಾಖಲೆಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ಅಭಿವೃದ್ಧಿಪಡಿಸುತ್ತಿರುವ ಡಾ. ಶಿವರಾಮ ಕಾರಂತ ಬಡಾವಣೆಗಾಗಿ ಜಮೀನು ನೀಡಿದ್ದ 21ಫಲಾನುಭವಿಗಳಗೆ 60:40 ಅನುಪಾತದಡಿ ಅರ್ಹತಾ ಪ್ರಮಾಣ ಪತ್ರವನ್ನು ನೀಡಲಾಗಿದೆ.
ಇತ್ತೀಚೆಗೆ ಬಿಡಿಎ ಅಧ್ಯಕ್ಷರಾದ ಎಸ್.ಆರ್.ವಿಶ್ವನಾಥ್ ಅವರು ಸದರಿ ಜಾಗ ಸೇರಿದಂತೆ ಇನ್ನಿತರೆ ಒತ್ತುವರಿ ಮತ್ತು ಬಿಡಿಎ ಜಾಗವನ್ನು ಕಬ್ಜ ಮಾಡಿಕೊಂಡಿರುವ ಪ್ರದೇಶಗಳಿಗೆ ಭೇಟಿ ನೀಡಿ, ಕೂಡಲೇ ಇಂತಹ ಜಾಗಗಳನ್ನು ಮರುವಶಕ್ಕೆ ಪಡೆದುಕೊಳ್ಳಬೇಕೆಂದು ಬಿಡಿಎ ಅಧಿಕಾರಿಗಳು ಮತ್ತು ಎಂಜಿನಿಯರ್ ಗಳಿಗೆ ಸೂಚನೆ ನೀಡಿದ್ದರು.
CM Basavaraj Bommai : ಬಿಬಿಎಂಪಿ ಹಾಗೂ ಬಿಡಿಎಗಳ ಆಸ್ತಿಗಳು ಜನರ ಸೇವೆಗೆ ಬಳಕೆಯಾಗಬೇಕು. ಸರ್ಕಾರದ ಆಸ್ತಿಗಳಾದ ವಾಣಿಜ್ಯ ಸಂಕೀರ್ಣಗಳು ಕೇವಲ ವಾಣಿಜ್ಯ ಚಟುವಟಿಕೆಗಳಿಗೆ ಮೀಸಲಿರಿಸದೇ, ಸರ್ಕಾರಿ ಕಚೇರಿಗಳು ಹಾಗೂ ಸಾರ್ವಜನಿಕರ ಸೇವೆಗೆ ಮೀಸಲಿಡುವುದು ಬಹಳ ಮುಖ್ಯ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ನಾಡಪ್ರಭು ಕೆಂಪೇಗೌಡರು ಕಟ್ಟಿದ ಬೆಂಗಳೂರು ನಗರದ ಇಂದಿನ ಎಲ್ಲ ಕರ್ಮಕಾಂಡಕ್ಕೆ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ) ವೇ ಕಾರಣ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ನೇರ ಆರೋಪ ಮಾಡಿದರು.
ಸುಪ್ರೀಂಕೋರ್ಟ್ ಸೂಚನೆ ನೀಡಿರುವ ಬೆನ್ನಲ್ಲೇ ಈಗ ಬಿಡಿಎ ಆಯುಕ್ತ ಎಂ.ಬಿ.ರಾಜೇಶ್ ಗೌಡ ಅವರನ್ನು ವರ್ಗಾವಣೆ ಮಾಡಿ ಪ್ರಭಾರ ಆಯುಕ್ತರಾಗಿ ಐಎಎಸ್ ಅಧಿಕಾರಿ ಜಿ.ಕುಮಾರ್ ನಾಯಕ್ ಅವರನ್ನು ರಾಜ್ಯ ಸರ್ಕಾರ ನೇಮಕ ಮಾಡಿ ಆದೇಶ ಹೊರಡಿಸಿದೆ.
ಬಿಟಿಎಂ ಬಡಾವಣೆ ನಿರ್ಮಾಣಕ್ಕೆ ಬಿಡಿಎ ಸ್ವಾಧೀನಪಡಿಸಿಕೊಳ್ಳಲಾಗಿದ್ದ ಮುಕ್ಕಾಲು ಎಕರೆ ಪ್ರದೇಶದ ಅತಿಕ್ರಮಣವನ್ನು ಶುಕ್ರವಾರ ತೆರವುಗೊಳಿಸಿರುವ ಬಿಡಿಎ ಅಧಿಕಾರಿಗಳು ಸದರಿ ಜಾಗವನ್ನು ವಶಕ್ಕೆ ತೆಗೆದುಕೊಂಡಿದ್ದಾರೆ.
ಕೊಳಚೆ ನೀರು, ಕಳೆ ಸಸ್ಯಗಳು ಮತ್ತು ಕಟ್ಟಡ ತ್ಯಾಜ್ಯದಿಂದಾಗಿ ಅಳಿವಿನ ಅಂಚಿಗೆ ತಲುಪಿದ್ದ ಕೆರೆಗಳಿಗೆ ಬಿಬಿಎಂಪಿ ಕಾಯಕಲ್ಪ ನೀಡುತ್ತಿದೆ. ಮತ್ತೊಂದೆಡೆ ಅತಿಕ್ರಮಣ ತೆರವಿಗೂ ತಯಾರಿ ಮಾಡಿಕೊಳ್ಳುತ್ತಿದ್ದು, ಆ ಮೂಲಕ ಜಲಮೂಲಗಳ ಸಂರಕ್ಷಣೆಗೆ ಮುಂದಾಗಿದೆ.
ಬಿಡಿಎಯಲ್ಲಿ ಮತ್ತೊಂದು ಭಾರೀ ಹಗರಣ ಬೆಳಕಿಗೆ ಬಂದಿದೆ. ಪ್ರಾಧಿಕಾರ ಸ್ವಾಧೀನಪಡಿಸಿಕೊಂಡ ಜಾಗಕ್ಕೆ ಕಾನೂನು ಬಾಹಿರವಾಗಿ ಬದಲಿ ಜಾಗವನ್ನು ಪಡೆದು ಮಾರಾಟ ಮಾಡಿ ಪ್ರಾಧಿಕಾರಕ್ಕೆ ಬರೋಬ್ಬರಿ 100 ಕೋಟಿ ರೂಪಾಯಿಗಳ ನಷ್ಟ ಉಂಟು ಮಾಡಿರುವ ನಾಗರಾಜ್ ಎಂಬ ವ್ಯಕ್ತಿ ಮತ್ತು ಇದಕ್ಕೆ ಕಾರಣರಾದ ಬಿಡಿಎ ಅಧಿಕಾರಿಗಳು ಮತ್ತು ಸಿಬ್ಬಂದಿ ವಿರುದ್ಧ ಬಿಎಂಟಿಎಫ್ ನಲ್ಲಿ ಶನಿವಾರ ಎಫ್ಐಆರ್ ದಾಖಲಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.