ಪ್ರಜಾಧ್ವನಿ ಹೆಸರಿನಲ್ಲಿ ನಾಳೆಯಿಂದ ಆರಂಭವಾಗಲಿರುವ ಯಾತ್ರೆಗೆ ಬಸ್ ಸಿದ್ದವಾಗಿದೆ. ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಜಂಟಿ ಪ್ರವಾಸ ಮಾಡಲಿದ್ದಾರೆ.
ಪೊಲೀಸ್ ಗೃಹ ಮಂಡಳಿಯಿಂದ ರಾಜ್ಯಾದ್ಯಂತ ಒಳ್ಳೆಯ ಕೆಲಸ ಆಗುತ್ತಿದೆ. ರಾಜ್ಯದಲ್ಲಿ 2500 ಪೊಲೀಸ್ ಮನೆ ನಿರ್ಮಾಣ ಮಾಡುತ್ತಿದ್ದು, ಈಗಾಗಲೇ 16 ಪೊಲೀಸ್ ಠಾಣೆ ನಿರ್ಮಾಣ ಹಂತದಲ್ಲಿವೆ ಎಂದು ಬೊಮ್ಮಾಯಿ ಹೇಳಿದರು.
Belagavi Youths Murder: ಬೆಳಗಾವಿ ತಾಲೂಕಿನ ಶಿಂಧೋಳಿ ಗ್ರಾಮದಲ್ಲಿ ಭಾನುವಾರ ರಾತ್ರಿ ಹೊನಲು ಬೆಳಕಿನ ಕ್ರಿಕೆಟ್ ಪಂದ್ಯ ಏರ್ಪಡಿಸಲಾಗಿತ್ತು. ಕ್ರಿಕೆಟ್ ಆಡುತ್ತಿದ್ದ ವೇಳೆ ಅಪರಿಚಿ ವ್ಯಕ್ತಿಯೊಬ್ಬ ಮೈದಾನಕ್ಕೆ ವಾಹನ ನುಗ್ಗಿಸಿದ್ದ. ಇದನ್ನು ಪ್ರಶ್ನಿಸಿದ ಇಬ್ಬರು ಯುವಕರನ್ನು ಬರ್ಬರವಾಗಿ ಹತ್ಯೆ ಮಾಡಿದ್ದಾನೆ.
ಒಂದು ಕಡೆ ಕೊಲೆ ಆದರೆ ಸಿಎಂ ಪರಿಹಾರ ಕೊಡ್ತಾರೆ. ಮತ್ತೊಂದು ಕಡೆ ಮುಸ್ಲಿಂಮರ ಕೊಲೆ ಆದರೆ ಪರಿಹಾರ ಇಲ್ಲ. ಈ ತಾರತಮ್ಯ ಏಕೆ? ಪರಿಹಾರ ಎರಡೂ ಕಡೆಗೂ ಕೊಡಬೇಕು ಎಂದು ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.
ಅಧಿವೇಶನಕ್ಕೂ ಮುನ್ನ ಸುವರ್ಣಸೌಧದಲ್ಲಿ ಮಾತಾನಾಡಿದ ಸಚಿವ ಶ್ರೀರಾಮುಲು, ಜನಾರ್ಧನ್ ರೆಡ್ಡಿ ಹೊಸ ಪಕ್ಷ ಘೋಷಣೆ ಸಂಬಂಧ ಅವರ ಪ್ರಾಣ ಸ್ನೇಹಿತನ್ನಾಗಿ ಒಳ್ಳೆಯದಾಗಲಿ ಎಂದು ಬಯಸುತ್ತೇನೆ ಎಂದು ಶುಭಕೋರಿದರು.
ಸಿ.ಟಿ ರವಿ ಮೂರು ಸಾವಿರ ಕೋಟಿ ಆಸ್ತಿ ಬಗ್ಗೆ ಕಾಂಗ್ರೆಸ್ ಆರೋಪದಿಂದ ತಲೆ ಕೆಟ್ಟು ಕಳ್ಳಬಟ್ಟಿ ಕುಡಿದು ಮಾತಾನ್ನಾಡುತ್ತಾರೆ ಎಂಬ ಬಿಕೆ ಹರಿಪ್ರಸಾದ್ ಆರೋಪಕ್ಕೆ ಶಾಸಕ ಸಿಟಿ ರವಿ ತಿರುಗೇಟು ನೀಡಿದ್ದಾರೆ.
Basangouda Patil Yatnal: ಮುರುಗೇಶ್ ನಿರಾಣಿ ನನ್ನ ಮುಂದೆ ಬಚ್ಚಾ, ಇಂತಹವರನ್ನು ಸಿಎಂ ಮಾಡಿದರೆ ವಿಧಾನಸೌಧಕ್ಕೆ ಅವಮಾನಕರ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಏಕವಚನದಲ್ಲಿ ಸಚಿವ ಮುರುಗೇಶ್ ನಿರಾಣಿ ವಿರುದ್ಧ ವಾಗ್ದಾಳಿ ನಡೆಸಿದರು.
ಕೇಂದ್ರ ಗೃಹ ಸಚಿವ ಅಮಿತ್ ಶಾ ಇಂದು ಕರ್ನಾಟಕ -ಮಹಾರಾಷ್ಟ್ರ ರಾಜ್ಯ ಗಳ ಗಡಿ ವಿವಾದ ಸಭೆ ಬಳಿಕ ಸಭೆಯ ನಿರ್ಣಯ ಪ್ರಕಟಿಸಿ, ಸದ್ಯ ಸುಪ್ರೀಂ ಕೋರ್ಟಿನಲ್ಲಿ ಪ್ರಕರಣ ಇರುವ ಕಾರಣ ತೀರ್ಪು ಬರುವ ವರೆಗೆ ಯಾರು (ಉಭಯ ರಾಜ್ಯಗಳು ) ಬೆಳಗಾವಿಯನ್ನು ತಮ್ಮದು ಎಂದು ಹೇಳಬಾರದು ಎಂದು ತಿಳಿಸಿದರು.
ಕನ್ನಡಿಗರ ಅಭಿವೃದ್ಧಿ ಹಾಗೂ ರಕ್ಷಣೆ ಸರಕಾರದ ಜವಾಬ್ದಾರಿಯಾಗಿದೆ. ಕನ್ನಡಿಗರು ವಿಶ್ವದ ಯಾವುದೇ ಮೂಲೆಯಲ್ಲಿರಲಿ ಅಥವಾ ದೇಶದ ಯಾವುದೇ ರಾಜ್ಯದಲ್ಲಿರಲಿ ಅವರ ಅಭಿವೃದ್ಧಿಗೆ ಬದ್ಧವಾಗಿದ್ದು, ಈ ರಾಜ್ಯದ ನಾಡು-ನುಡಿ ಅಭಿವೃದ್ಧಿಪಡಿಸುವುದು ಸರಕಾರದ ಸಂಕಲ್ಪವಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ಈ ವೇಳೆ ಐವರು ಯುವತಿಯರು ಒಬ್ಬರಿಗೊಬ್ಬರು ಕೈ ಹಿಡಿದು ಸೆಲ್ಫಿ ಫೋಟೋ ತಗೆದುಕೊಳ್ಳುವ ವೇಳೆ ಆಯಾತಪ್ಪಿ ಕಾಲು ಜಾರಿ ಬಿದ್ದಿದ್ದಾರೆ. ಐವರು ಯುವತಿಯರ ಪೈಕಿ ನಾಲ್ವರ ಸಾವನ್ನಪ್ಪಿದ್ದಾರೆ, ಓರ್ವ ಯುವತಿಯ ಸ್ಥಿತಿ ಗಂಭೀರವಾಗಿದೆ.
ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ನಣದಿವಾಡಿ ಗ್ರಾಮದ ರುದ್ರ ಭೂಮಿಗೆ ಗ್ರಾಮದ ಯಕ್ಸಂಬಿ ಕುಟುಂಬಸ್ಥರು ಸ್ಮಶಾನ ಭೂಮಿಯ ದಾರಿಯನ್ನು ಬಂದ್ ಮಾಡಿದ್ದಾರೆ. ಇದರಿಂದಾಗಿ ಸ್ಮಶಾನಕ್ಕೆ ಹೋಗಲು ತೊಂದರೆ ಆಗುತ್ತಿದೆ ಎಂದು ಆರೋಪಿಸಿರುವ ಗ್ರಾಮಸ್ಥರು ಚಿಕ್ಕೋಡಿ-ಯಕ್ಸಂಬಾ ರಸ್ತೆ ಮಧ್ಯದಲ್ಲಿ ಶವ ಇಟ್ಟು ಬಜನಾ ಪದಗಳನ್ನು ಹಾಡುತ್ತಾ ರಸ್ತೆ ಬಂದ್ ಮಾಡಿ ಆಕ್ರೋಶ ವ್ಯಕ್ತಪಡಿಸಿ ಪ್ರತಿಭಟನೆ ನಡೆಸಿದರು.
CM Basavaraj Bommai : ಒಡೆದಾಳುವ ಬ್ರಿಟಿಷರ ನೀತಿಯನ್ನು ಬಳುವಳಿಯಾಗಿ ಕಾಂಗ್ರೆಸ್ ಪಕ್ಷಕ್ಕೆ ಬಿಟ್ಟುಕೊಟ್ಟಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಇಂದು ಖಾನಾಪುರದಲ್ಲಿ ಬಿಜೆಪಿ ಆಯೋಜಿಸಿದ್ದ ಜನಸಂಕಲ್ಪ ಯಾತ್ರೆಯಲ್ಲಿ ಮಾತನಾಡಿದರು.
Karagaon Irrigation Project : ಇಂದು ಬೆಳಗಾವಿ ಜಿಲ್ಲೆಯ ರಾಯಬಾಗದಲ್ಲಿ ಬಿಜೆಪಿ ವತಿಯಿಂದ ಏರ್ಪಡಿಸಿದ್ದ ಜನ ಸಂಕಲ್ಪ ಯಾತ್ರೆಗೆ ಚಾಲನೆ ನೀಡಿ ಮಾತನಾಡಿದರು. ಬಹುದಿನದ ಬೇಡಿಕೆಯಾದ ಕರಗಾಂವ್ ಏತ ನೀರಾವರಿ ಯೋಜನೆಗೆ ಮಂಜೂರಾತಿ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಆ ಜನ ಕೃಷ್ಣಾ ಪ್ರವಾಹಕ್ಕೆ ಸಿಲುಕಿ ನಿರಾಶ್ರಿತರಾಗಿದ್ದರು. ಸರ್ಕಾರ ನಿರಾಶ್ರಿತರಿಗೆ ಪರ್ಯಾಯ ವ್ಯವಸ್ಥೆಯನ್ನು ಮಾಡಿತ್ತು ಆದ್ರೆ ಮೂಲಭೂತ ಸೌಕರ್ಯ ಮಾತ್ರ ನೀಡಲಿಲ್ಲ ಕಳೆದ 15 ವರ್ಷಗಳಿಂದಲು ಕತ್ತಲಲ್ಲೆ ಆ ಜನ ಜೀವನ ನಡೆಸ್ತಾ ಇದಾರೆ.. ಜನ ಪ್ರತಿನಿಧಿಗಳು ಅಧಿಕಾರಿಗಳು ಕಂಡು ಕಾನದಂತೆ ಸುಮ್ಮನಿದ್ದಾರೆ.