ಕಳೆದ ಕೆಲ ದಿನಗಳಿಂದ ರಾಜ್ಯದ ಕೈ ನಾಯಕರಲ್ಲಿ ಒಳಗೊಳಗೆ ಮುಸುಕಿನ ಗುದ್ದಾಟ, ಕಾಲೆಳೆಯುವ ತಂತ್ರಗಳು ನಡೆಯುತ್ತಿದೆ. ಈ ಕಚ್ಚಾಟವನ್ನು ಇಡೀ ರಾಜ್ಯವೇ ಗಮನಿಸಿದೆ. ಈ ಮಧ್ಯೆ ಬೆಳಗಾವಿ ಜಿಲ್ಲೆಯಲ್ಲಿ ಕೇಸರಿ ಬ್ರಿಗೇಡ್ನಲ್ಲಿ ಒಡಕಿನ ಮಾತು ಕೇಳಿ ಬರ್ತಿದೆ.
ಮಾಜಿ ಉಪಮುಖ್ಯಮಂತ್ರಿ ಲಕ್ಷ್ಮಣ್ ಸವದಿ ಹಾಗೂ ಸಚಿವ ಸಿಸಿ ಪಾಟೀಲ್ ನೇತೃತ್ವದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಲಕ್ಷ್ಮಣ್ ಸವದಿ ಅಚ್ಚರಿಯ ಹೇಳಿಕೆಯನ್ನು ನೀಡಿದ್ದಾರೆ. ಇನ್ನು ಇದೇ ಕಾರ್ಯಕ್ರಮದಲ್ಲಿ ಲೋಕೋಪಯೋಗಿ ಸಚಿವ ಸಿಸಿ ಪಾಟೀಲ್ ಕಣ್ಣೀರಿಟ್ಟಿದ್ದು ಏಕೆ ಗೊತ್ತಾ..!
ವಾಯುವ್ಯ ಮತಕ್ಷೇತ್ರ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾದ ಅರುಣ್ ಶಹಾಪುರ ಪರಾಭವಗೊಂಡಿದ್ದಾರೆ.. ಕಾಂಗ್ರೆಸ್ ಅಭ್ಯರ್ಥಿ ಪ್ರಕಾಶ್ ಹುಕ್ಕೇರಿ ಎದುರು ಸೋತಿದ್ದಾರೆ. ಫಲಿತಾಂಶ ಹೊರಬರುತ್ತಿದ್ದಂತೆ ಬೆಳಗಾವಿ ರಾಜಕಾರಣದಲ್ಲಿ ಹೊಸ ಸಂಚಲನ ಮೂಡಿಸಿದೆ. ಬೆಳಗಾವಿಯಲ್ಲಿರುವ ಬಿಜೆಪಿಯ ಭಿನ್ನಮತವೇ ಬಿಜೆಪಿ ಅಭ್ಯರ್ಥಿ ಅರುಣ್ ಶಹಾಪುರ್ ಸೋಲಿಗೆ ಕಾರಣವಾಗಿದೆ ಎಂಬ ಮಾತುಗಳು ಸದ್ಯ ಕೇಳಿಬರುತ್ತಿದ್ದು, ಬಿಜೆಪಿಗೆ ಭಾರಿ ಮುಖಭಂಗವಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.