ಅಧಿವೇಶನಕ್ಕೆ ಆಗಮಿಸುವ ಮುಖ್ಯಮಂತ್ರಿ, ಸಚಿವರು, ಶಾಸಕರುಗಳಿಗೆ ಯಾವುದೇ ರೀತಿಯ ಅನಾನೂಕುಲವಾಗದಂತೆ ನಿಗಾವಹಿಸಬೇಕು. ಅಧಿವೇಶನಕ್ಕೆ ಬರುವಂತಹ ಸಚಿವರು, ಶಾಸಕರು, ಸಚಿವಲಾಯದ ಅಧಿಕಾರಿ, ಸಿಬ್ಬಂದಿಗಳು, ಚಾಲಕರಿಗೆ ಹಾಗೂ ಪೋಲಿಸ್ ಅಧಿಕಾರಿ ಸಿಬ್ಬಂದಿಗಳಿಗೆ ವ್ಯವಸ್ಥಿತ ವಸತಿ, ಊಟೊಪಹಾರದ ವ್ಯವಸ್ಥೆಯಾಗಬೇಕು ಎಂದರು.
KAS officer recruitment 2023: ಎಷ್ಟು KAS ಹುದ್ದೆಗಳ ನೇಮಕಾತಿಗೆ ಆರ್ಥಿಕ ಇಲಾಖೆ ಒಪ್ಪಿಗೆ ನೀಡಿದೆ ಎನ್ನುವ ಪ್ರಶ್ನೆಗೆ ಉತ್ತರಿಸಿದ ಸಿದ್ದರಾಮಯ್ಯನವವರು, ಆಡಳಿತ ಇಲಾಖೆಗೆ 656 ಹುದ್ದೆಗಳ ಭರ್ತಿಗೆ ಕೋರಲಾಗಿತ್ತು. ಈ ಪೈಕಿ 504 ಹುದ್ದೆಗಳ ಭರ್ತಿಗೆ ಅನುಮತಿ ನೀಡಲಾಗಿದೆ ಅಂತಾ ಮಾಹಿತಿ ನೀಡಿದ್ದಾರೆ.
ರಾಜ್ಯದ 31 ಜಿಲ್ಲೆಯ 195 ಬ್ಲಾಕ್ಗಳಲ್ಲಿ ಬರಗಾಲ ಪರಿಸ್ಥಿತಿ ಇದ್ದು, ಮಹಾತ್ಮಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆಯಲ್ಲಿ ಕೃಷಿ ಕೂಲಿ ಕಾರ್ಮಿಕರಿಗೆ ಉದ್ಯೋಗ ನೀಡುವ 100 ದಿನಗಳನ್ನು 150 ದಿನಗಳಿಗೆ ಹೆಚ್ಚಿಸಿ, 18 ಕೋಟಿ ಮಾನವ ದಿನಗಳನ್ನು ನೀಡಲು ಕೇಂದ್ರಕ್ಕೆ ಈಗಾಗಲೇ ಹಲವಾರು ಬಾರಿ ಮನವಿ ಸಲ್ಲಿಸಲಾಗಿತ್ತು.
ಅನೇಕ ಹೋರಾಟಗಾರರ ತ್ಯಾಗ, ಬಲಿದಾನದ ಪ್ರತಿಫಲವಾಗಿ ಕರ್ನಾಟಕ ರಾಜ್ಯ ಏಕೀಕೃತವಾಗಿದೆ. ಅಭಿವೃದ್ಧಿಯ ಹಿನ್ನಡೆಯಲ್ಲಿ ರಾಜ್ಯ ಪ್ರತ್ಯೇಕತೆ ಬಗ್ಗೆ ಮಾತನಾಡುವುದು ಅಂತಹ ಮಹನೀಯರಿಗೆ ಅಪಮಾನ ಮಾಡಿದಂತೆ. ಸಮಗ್ರ ಕರ್ನಾಟಕದ ಅಭಿವೃದ್ಧಿಗೆ ಎಲ್ಲರಲ್ಲೂ ಇಚ್ಛಾಶಕ್ತಿ ಬೇಕು. ರಾಜ್ಯ ಸರ್ಕಾರವು ಕಿತ್ತೂರು ಕರ್ನಾಟಕ, ಕಲ್ಯಾಣ ಕರ್ನಾಟಕ ಸೇರಿದಂತೆ ಸಮಗ್ರ ಕರ್ನಾಟಕದ ಅಭಿವೃದ್ಧಿಗೆ ಬದ್ಧವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಕುಡತಿನಿ ಬಳಿ 361 ದಿನಗಳಿಂದ ಪ್ರತಿಭಟನಾ ನಿರತ ಭೂ ಸಂತ್ರಸ್ತರ ಹೋರಾಟದ ಕುರಿತ ವಿಧಾನಪರಿಷತ್ ಸದಸ್ಯ ವೈ.ಎಂ.ಸತೀಸ್ ಅವರು ಸುವರ್ಣಸೌಧದಲ್ಲಿ ಕೇಳಿದ ಪ್ರಶ್ನೆಗೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಸ್ಪಂದಿಸಿ, ಡಿಸೆಂಬರ್ 14ರ ಗುರುವಾರ ಮಧ್ಯಾಹ್ನ 3.30ಕ್ಕೆ ಕೊಠಡಿ ಸಂಖ್ಯೆ 315 ರಲ್ಲಿ ವಿಶೇಷ ಸಭೆ ಕರೆದಿದ್ದಾರೆ.
ಕರ್ನಾಟಕ ಸರಕು ಮತ್ತು ಸೇವೆಗಳ ತೆರಿಗೆ (ಎರಡನೇ ತಿದ್ದುಪಡಿ) ವಿಧೇಯಕ-2023, ಕರಾವಳಿ ಅಭಿವೃದ್ಧಿ ಮಂಡಳಿ ವಿಧೇಯಕ-2023 ಸೇರಿದಂತೆ ವಿಧಾನಸಭೆಯಿಂದ ಅಂಗೀಕೃತ ರೂಪದಲ್ಲಿರುವ ನಾಲ್ಕು ವಿವಿಧ ವಿಧೇಯಕಗಳಿಗೆ ವಿಧಾನ ಪರಿಷತ್ನಲ್ಲಿ ಡಿಸೆಂಬರ್ 13ರಂದು ಅಂಗೀಕಾರ ದೊರೆಯಿತು
ಬೆಳಗಾವಿ ತಾಲ್ಲೂಕಿನ ಯಳ್ಳೂರು ಗ್ರಾಮದ ಬಳಿಯ ಸರ್ಕಾರಿ ಜಾಗದಲ್ಲಿ, ಸುಸಜ್ಜಿತ ಅಂತರಾಷ್ಟ್ರೀಯ ಕ್ರೀಡಾಂಗಣ ನಿರ್ಮಾಣಕ್ಕೆ ಸರ್ಕಾರ ಸಿದ್ದವಿದೆ ಎಂದು ಪರಿಶಿಷ್ಟ ಪಂಗಡಗಳ ಕಲ್ಯಾಣ, ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವ ಬಿ.ನಾಗೇಂದ್ರ ಹೇಳಿದರು.
ಸುವರ್ಣಸೌಧದಲ್ಲಿ ನಡೆದ ರಾಜ್ಯ ಉನ್ನತ ಮಟ್ಟದ ಒಪ್ಪಿಗೆ ನೀಡುವ ಸಮಿತಿಯ ಸಭೆಯಲ್ಲಿ ಒಟ್ಟು ₹34,115 ಕೋಟಿ ಮೊತ್ತದ ಬಂಡವಾಳ ಹೂಡಿಕೆಯ 14 ಉದ್ಯಮಗಳ ಸ್ಥಾಪನೆಗೆ ಅನುಮೋದನೆ ನೀಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ಕಳೆದ 15 ದಿನಗಳಿಂದ ರಾಜ್ಯಾದ್ಯಂತ ಸರಕಾರಿ ಪದವಿ ಕಾಲೇಜುಗಳ ಅತಿಥಿ ಉಪನ್ಯಾಸಕರು ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿದ್ದು, ಇದರಿಂದ ವಿದ್ಯಾರ್ಥಿಗಳಿಗೆ ತೊಂದರೆ ಆಗುತ್ತಿರುವುದು ಸರಕಾರದ ಗಮನಕ್ಕಿದೆ. ಶೀಘ್ರವೇ ಈ ಬಗ್ಗೆ ಕ್ರಮ ಕೈಗೊಳ್ಳಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ ಭರವಸೆ ನೀಡಿದರು.
ಹುಬ್ಬಳ್ಳಿ-ಧಾರವಾಡ ಪಶ್ಚಿಮ ವಿಧಾನಸಭಾ ಮತಕ್ಷೇತ್ರದ ಶಾಸಕರಾದ ಅರವಿಂದ ಬೆಲ್ಲದ ಅವರು, ಇಂದು ಸಂಜೆ ವಿಧಾನಸಭೆಯಲ್ಲಿ ಗಮನ ಸೆಳೆಯುವ ಪ್ರಶ್ನೆ ಕೇಳಿ, ಧಾರವಾಡ ಮಹಾನಗರ ಪಾಲಿಕೆ ರಚನೆಗಾಗಿ ಅಗತ್ಯವಿರುವ ಎಲ್ಲಾ ಮಾನದಂಡಗಳು ಪೂರ್ಣವಾಗಿದ್ದು, ಮಹಾನಗರ ಪಾಲಿಕೆ ರಚನೆಗೆ ಕ್ರಮವಹಿಸಿ ಆದೇಶ ಹೊರಡಿಸಬೇಕೆಂದು ನಗರಾಭಿವೃದ್ಧಿ ಸಚಿವರಲ್ಲಿ ಗಮನ ಸೆಳೆದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.