ಬೆಂಗಳೂರು ನಗರದ ಶ್ರೀ ವಶಿಷ್ಠ ಸೌಹಾರ್ದ ಸಹಕಾರ ಸಂಘದ ಅವ್ಯವಹಾರ ಪ್ರಕರಣದ ಸಿಐಡಿ ವಿಚಾರಣೆ ಪ್ರಗತಿಯಲ್ಲಿದೆ. ಠೇವಣಿದಾರರಿಗೆ ಠೇವಣಿ ಹಣ ಹಿಂದಿರುಗಿಸಲು ಸರ್ಕಾರದಿಂದ "ಸಕ್ಷಮ ಪ್ರಾಧಿಕಾರ" ನೇಮಕಾತಿ ಪ್ರಕ್ರಿಯೆ ಜಾರಿಯಲ್ಲಿರುತ್ತದೆ ಎಂದು ಸಚಿವರಾದ ಎಸ್.ಟಿ.ಸೋಮಶೇಖರ್ ತಿಳಿಸಿದ್ದಾರೆ.
ರಮೇಶ್ ಜಾರಕಿಹೊಳಿ ಹಾಗೂ ಕೆ.ಎಸ್. ಈಶ್ವರಪ್ಪ ಇಬ್ಬರೂ ಚಳಿಗಾಲದ ಅಧಿವೇಶನಕ್ಕೆ ಗೈರಾಗಿರುವ ಕುರಿತಂತೆ ಮಾಧ್ಯಮ ಮಿತ್ರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಬಿ.ಕೆ. ಹರಿಪ್ರಸಾದ್, ಇದು ಬಿಜೆಪಿಯ ಆಂತರಿಕ ವಿಚಾರವಾಗಿದೆ. ರಮೇಶ್ ಹಾಗೂ ಈಶ್ವರಪ್ಪ ಮಾತ್ರವಲ್ಲ, ಇತರರೂ ಸರ್ಕಾರಕ್ಕೆ ಬೆದರಿಕೆ ಒಡ್ಡುತ್ತಿದ್ದಾರೆ ಎಂದರು.
ಬೆಳಗಾವಿ ಪ್ರವೇಶಕ್ಕೆ ಮಹಾ ಪುಂಡರ ಯತ್ನ. ನಿರ್ಬಂಧದ ನಡುವೆಯೂ MES ಅಟ್ಟಹಾಸ. MES ಮೇಳಾವ್ಗೆ ಭಾವಹಿಸಲು ಪುಂಡರು ಸಜ್ಜು. ಗಡಿ ಪ್ರವೇಶ ಮಾಡುವ ಸಾಧ್ಯತೆ ಹಿನ್ನೆಲೆ ಭದ್ರತೆ. ಮಹಾ ಸಂಸದ ಮಾನೆ ಬೆಳಗಾವಿ ಪ್ರವೇಶಕ್ಕೆ ನಿಷೇಧ.
ಮಾಜಿ ಪ್ರಧಾನಮಂತ್ರಿ ಹೆಚ್.ಡಿ.ದೇವೆಗೌಡರ ಕುಟುಂಬ, ಜಾತ್ಯತೀತ ಜನತಾದಳ ಹಾಗೂ ಪಂಚರತ್ನ ಯೋಜನೆಗಳ ಬಗ್ಗೆ ಲಘುವಾಗಿ ಮಾತನಾಡಿರುವ ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಅವರ ವಿರುದ್ದ ಹೆಚ್.ಡಿ.ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದರು.
ಸಾವರ್ಕರ್ ವಿಚಾರದಲ್ಲಿ ಕಾಂಗ್ರೆಸ್ -ಬಿಜೆಪಿ ವಿರುದ್ಧ ಸೈದ್ಧಾಂತಿಕ ಭಿನ್ನಾಭಿಪ್ರಾಯ ಇದ್ದರೂ ಸುವರ್ಣ ಸೌಧದಲ್ಲಿ ಸಾವರ್ಕರ್ ಭಾವಚಿತ್ರ ಅಳವಡಿಕೆ ಸರ್ಕಾರ ಮಾಡಿದ್ದರೂ ಕಾಂಗ್ರೆಸ್ ಪಕ್ಷ ಸದ್ಯಕ್ಕೆ ದೊಡ್ಡ ಮಟ್ಟದ ಪ್ರತಿರೋಧ ವ್ಯಕ್ತಪಡಿಸದೆ ಸುಮ್ಮನ್ನಾಗಿದೆ.
ಸಿದ್ದರಾಮಯ್ಯನವರೇ ಕದ್ದುಮುಚ್ಚಿ #AntiConversionBill ಮಂಡನೆ ಮಾಡುವ ಅಗತ್ಯ ನಮಗಿಲ್ಲ. ಮಸೂದೆಯನ್ನು ಮಂಡನೆ ಮಾಡಬೇಕೆಂಬ ಉದ್ದೇಶದಿಂದಲೇ ಸಂಪುಟ ಸಭೆಯಲ್ಲಿ ಒಪ್ಪಿಗೆ ಪಡೆಯಲಾಗಿದೆ ಎಂದು ಬಿಜೆಪಿ ಟ್ವೀಟ್ ಮಾಡಿದೆ.
ರಾಜ್ಯಾದ್ಯಂತ ರೈತರು 78 ಲಕ್ಷದ 83 ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ವಿವಿಧ ಬೆಳೆಗಳ ಬಿತ್ತನೆ ಮಾಡಿದ್ದರು. ಇದರಲ್ಲಿ ಶೇ.75 ರಷ್ಟು ಬೆಳೆ ಹಾನಿಯಾಗಿದೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.
ದಿ. ನಟ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರಿಗೆ ಮುಂದಿನ ದಿನಗಳಲ್ಲಿ ಪದ್ಮಶ್ರೀ ಪ್ರಶಸ್ತಿ ನೀಡುವಂತೆ ಕೆಂದ್ರ ಸರ್ಕಾರಕ್ಕೆ ಶಿಫಾರಸು ಮಾಡ್ತೇವೆ ಎಂದು ವಿಧಾನಸಭೆಯಲ್ಲಿ ಸಂತಾಪ ಸೂಚನೆ ವೇಳೆ ಸಿಎಂ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.