ಪಕ್ಕದ ಮಹಾರಾಷ್ಟ್ರದಲ್ಲಿ ಒಮಿಕ್ರಾನ್ ರೂಪಾಂತರಿ BQ.1 ತಳಿ ಪತ್ತೆ ಹಿನ್ನೆಲೆ ರಾಜ್ಯದಲ್ಲಿ ಕಟ್ಟೆಚ್ಚರ ವಹಿಸಲು ಆರೋಗ್ಯ ಇಲಾಖೆ ಸೂಚನೆ ನೀಡಿದೆ. ಬೀದರ್, ಬೆಳಗಾವಿ, ಬಾಗಲಕೋಟೆ, ಕಲಬುರಗಿ, ವಿಜಯಪುರ ಗಡಿಗಳಲ್ಲಿ ಕೋವಿಡ್ ಕಟ್ಟೆಚ್ಚರ ವಹಿಸಲಾಗಿದೆ. ಅದರಲ್ಲೂ ಮಹಾರಾಷ್ಟ್ರದಿಂದ ಬರುವವರ ಮೇಲೆ ಹೆಚ್ಚಿನ ನಿಗಾ ಇಡಲು ಸೂಚಿಸಲಾಗಿದೆ.
KPTCL illegal recruitment case : ಕೆಪಿಟಿಸಿಎಲ್ ಅಕ್ರಮ ನೇಮಕಾತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೆ ಇಬ್ಬರು ಆರೋಪಿಗಳನ್ನ ಬಂಧಿಸಿದ ಪೊಲೀಸರು, ನ್ಯಾಯಾಂಗ ತನಿಖೆಗೆ ಒಪ್ಪಿಸಿದ್ದು ಬಂಧಿತರ ಸಂಖ್ಯೆ ಇಪ್ಪತ್ತೆರಡಕ್ಕೆ ಏರಿಕೆಯಾಗಿದೆ.
ಬೆಳಗಾವಿ ಜಿಲ್ಲೆಯಲ್ಲಿ ಮತ್ತೆ ಮುಂದುವರೆದ ಮಳೆರಾಯನ ಆರ್ಭಟ. ಕಳೆದ ಎರಡ್ಮೂರು ದಿನಗಳಿಂದ ಮಳೆ ಅಬ್ಬರ ಜೋರಾಗಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ಕಷ್ಟ ಪಟ್ಟು ಬೆಳೆದ ವಿವಿಧ ಬೆಳೆಗಳ ಹಾನಿಯಾಗುವ ಭೀತಿಯಲ್ಲಿ ರೈತರಿದ್ದಾರೆ.
ಮನೆಯಲ್ಲಿ ಜಾರಿಬಿದ್ದು ಗಂಭೀರವಾಗಿ ಗಾಯಗೊಂಡ ಯುವಕನ ಮೆದುಳು ನಿಷ್ಕ್ರೀಯಗೊಂಡಿದ್ದು ಹೀಗಾಗಿ ಆತನ ಕುಟುಂಬಸ್ಥರು ಅಂಗಾಂಗ ದಾನ ಮಾಡಿ, ಯುವಕನ ಸಾವಿನಂಚಿನಲ್ಲೂ ಸಾರ್ಥಕತೆ ಮೆರೆದು, ನಾಲ್ವರ ಬಾಳಿಗೆ ಬೆಳಕಾಗಿರುವ ಮಾದರಿ ಕಾರ್ಯ ಜರುಗಿದೆ. ಬೆಳಗಾವಿ ಜಿಲ್ಲೆಯ ಅಥಣಿ ಪಟ್ಟಣದಲ್ಲಿ ಮಂಗಳವಾರ ದಿನಾಂಕ 27 ರಂದು ಪ್ರಶಾಂತ ವಿಠ್ಠಲ ಮಲ್ಲೆವಾಡಿ (ಪೂಜಾರಿ)ಎನ್ನುವ 30 ವರ್ಷದ ಯುವಕ ಮನೆಯಲ್ಲಿ ಶೌಚಗ್ರಹಕ್ಕೆ ಹೋಗಿ ಮರಳುವ ವೇಳೆಯಲ್ಲಿ ಕಾಲು ಜಾರಿ ಬಿದ್ದು ಗಂಭೀರ ಗಾಯಗೊಂಡಿದ್ದು ಆತನನ್ನು ಪೋಷಕರು ಅಥಣಿಯ ಅನ್ನಪೂರ್ಣ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಿಸಿದ್ದರು. ಗಂಭೀರವಾಗಿ ಗಾಯಗೊಂಡಿದ್ದ ಕಾರಣ ಯುವಕ ಕೋಮಾಗೆ ತಲುಪಿದ್ದ ಎಷ್ಟೇ ಚಿಕಿತ್ಸೆ ನೀಡಿದರೂ ಆತ ಚೇತರಿಸಿಕೊಳ್ಳಲಿಲ್ಲ. ಅಲ್ಲದೆ ಆತನ ಮಿದುಳು ಕೂಡ ನಿಷ್ಕ್ರಿಯಗೊಂಡಿತ್ತು.
ಬೆಳಗಾವಿಯಲ್ಲಿ ಸಾರ್ವಜನಿಕ ಗಣೇಶ ಮೂರ್ತಿಗಳ ವಿಸರ್ಜನೆ ಹಿನ್ನೆಲೆ ಪ್ರತಿ ಗಲ್ಲಿ ಗಲ್ಲಿಯಲ್ಲೂ ಪೊಲೀಸ್ ಸರ್ಪಗಾವಲು. ಪೊಲೀಸ್ ಕಮಿಷನರ್ ಡಾ. ಬೋರಲಿಂಗಯ್ಯಾ ನೇತೃತ್ವದಲ್ಲಿ ರೂಟ್ ಮಾರ್ಚ್. ಸೂಕ್ಷ್ಮ, ಅತೀಸೂಕ್ಷ್ಮ ಪ್ರದೇಶದಲ್ಲಿ ಪೊಲೀಸರ ಹದ್ದಿನ ಕಣ್ಣು, ಬಿಗಿ ಭದ್ರತೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.