ಬೆಂಗಳೂರು ಅಂತರಾಷ್ಟ್ರೀಯ ನಗರವಾಗಿ ಬೆಳೆದಿದೆ. ದೇಶದ ತಂತ್ರಜ್ಞಾನ ನವೋದ್ಯಮದಲ್ಲಿ ಮುಂಚೂಣಿಯಲ್ಲಿ ಇದೆ. ಬೆಂಗಳೂರಿಗೆ ಇನ್ನೊಂದು ವಿಮಾನ ನಿಲ್ದಾಣದ ಅವಶ್ಯಕತೆ ಇದೆ ಎಂದು ಸಚಿವ ಎಂ.ಬಿ.ಪಾಟೀಲ್ ತಿಳಿಸಿದರು.
Bengaluru's 2nd airport: 2ನೇ ವಿಮಾನ ನಿಲ್ದಾಣ ಅಭಿವೃದ್ಧಿ ಕುರಿತು ಮೂಲಸೌಕರ್ಯ ಅಭಿವೃದ್ಧಿ ಇಲಾಖೆಯಲ್ಲಿ ಒಂದು ಸಭೆ ನಡೆದಿದೆ. ಸದ್ಯಕ್ಕೆ ಬಿಐಎಎಲ್ ಜೊತೆ ಚಾಲ್ತಿಯಲ್ಲಿರುವ ಒಪ್ಪಂದದ ಪ್ರಕಾರ, 2033ರವರೆಗ 150KM ಅಂತರದಲ್ಲಿ ಮತ್ತೊಂದು ವಿಮಾನ ನಿರ್ಮಿಸಬಾರದು ಎಂಬ ಷರತ್ತಿದೆ. ನಾವು ಈಗಿನಿಂದಲೇ ಕಾರ್ಯಪ್ರವೃತ್ತರಾದರೆ ಇನ್ನು 8 ವರ್ಷಗಳಲ್ಲಿ ಪ್ರಗತಿ ಸಾಧಿಸಬಹುದು ಎಂದು ಸಚಿವ ಎಂ.ಬಿ.ಪಾಟೀಲ್ ಹೇಳಿದ್ದಾರೆ.
ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವು (Bengaluru Kempegowda International Airport) ತನ್ನ ಗ್ರಾಹಕ-ಕೇಂದ್ರಿತ ವಿಧಾನಕ್ಕೆ ಪ್ರಶಂಸೆಗೆ ಒಳಗಾಗಿದ್ದು, ಸ್ಮಾರ್ಟ್ ಆವಿಷ್ಕಾರ ಮತ್ತು ಅತ್ಯಾಧುನಿಕ ತಂತ್ರಜ್ಞಾನದ ಅಳವಡಿಕೆಗೆ ವಿಂಗ್ಸ್ ಇಂಡಿಯಾ ಅವಾರ್ಡ್ಸ್ 2022ರಲ್ಲಿ ಎರಡು ಪ್ರಮುಖ ಪುರಸ್ಕಾರಗಳನ್ನು ತನ್ನದಾಗಿಸಿಕೊಂಡಿದೆ.
ಇದೀಗ ಉಕ್ರೇನ್ ನಲ್ಲಿ ಸಿಲುಕಿದ್ದ ರಾಜ್ಯದ ವಿದ್ಯಾರ್ಥಿಗಳು ಬೆಂಗಳೂರಿಗೆ ವಾಪಸಸಾಗಿದ್ದಾರೆ. ಹೆಚ್ಚಿನ ವಿದ್ಯಾಭ್ಯಾಸಕ್ಕಾಗಿ ಉಕ್ರೇನ್ ಗೆ ತೆರಳಿದ್ದ ರಾಜ್ಯದ ಏಳು ವಿದ್ಯಾರ್ಥಿಗಳು ಇಂದು ಬೆಂಗಳೂರು ತಲುಪಿದ್ದಾರೆ.
ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಮುಂಭಾಗದಲ್ಲಿ ಸ್ಥಾಪನೆ ಮಾಡಲು ಉದ್ದೇಶಿಸಿರುವ 108 ಅಡಿ ಎತ್ತರದ ನಾಡಪ್ರಭು ಕೆಂಪೇಗೌಡರ ಪ್ರತಿಮೆಯ ನಿರ್ಮಾಣ ಕಾರ್ಯದ ಪ್ರಗತಿಯನ್ನು ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಹಾಗೂ ಆದಿಚುಂಚನಗಿರಿ ಮಠದ ಪೀಠಾಧ್ಯಕ್ಷರಾದ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಅವರು ಶನಿವಾರ ಪರಿಶೀಲಿಸಿದರು.
ಚಳಿಗಾಲವು ಹೆಚ್ಚಾಗುತ್ತಿದ್ದಂತೆ, ದಟ್ಟಣೆಯ ನಿರ್ವಹಣೆ ಕೂಡ ಟ್ರಾಫಿಕ್ ಮ್ಯಾನೇಜ್ಮೆಂಟ್ ಸಿಸ್ಟಮ್ನಲ್ಲಿ ಕಂಡುಬರುತ್ತದೆ. ಶನಿವಾರ ಬೆಂಗಳೂರಿನ ವಿಮಾನ ನಿಲ್ದಾಣದಲ್ಲಿ ದಟ್ಟವಾದ ಮಂಜಿನ ದೊಡ್ಡ ಪರಿಣಾಮ ಕಂಡುಬಂದಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.