ಬೋರ್ಡ್ ನಲ್ಲಿ ಕಾಗೆಯೊಂದು ಸಿಲುಕಿರುವುದನ್ನು ಕಂಡ ಟ್ರಾಫಿಕ್ ಪೊಲೀಸ್ ಸುರೇಶ್ ತನ್ನ ಜೀವದ ಹಂಗನ್ನು ತೊರೆದು ಅದರ ರಕ್ಷಣೆಗೆ ಮುಂದಾಗಿದ್ದಾರೆ. ಸುರಕ್ಷತಾ ಸಿಬ್ಬಂದಿ ಇಲ್ಲದೆ ಎತ್ತರದ ಹೋಲ್ಡಿಂಗ್ ಬೋರ್ಡ್ ಮೇಲೆ ಹತ್ತಿ ಆ ಕಾಗೆಯನ್ನು ರಕ್ಷಿಸಿದ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ಸಾಕಷ್ಟು ವೈರಲ್ ಆಗಿದೆ.
ಅಪಘಾತವಾಗಿರುವ ವಾಹನಗಳನ್ನ ಇನ್ನು ಮುಂದೆ ಸಂಚಾರಿ ಪೊಲೀಸ್ ಠಾಣೆಗಳ ಮುಂದೆ ತಿಂಗಳುಗಟ್ಟಲೇ ಇರಿಸಿಕೊಳ್ಳುವಂತಿಲ್ಲ. ತಪಾಸಣೆ ನೆಪದಲ್ಲಿ ಠಾಣೆಗಳ ಮುಂದೆ ವಾಹನ ಇರಿಸಿಕೊಳ್ಳುವುದು ಸರಿಯಲ್ಲ. ಆ್ಯಕ್ಸಿಡೆಂಟ್ ಆದ ವಾಹನಗಳನ್ನ 24 ಗಂಟೆಯೊಳಗೆ ಅಧಿಕಾರಿಗಳಿಂದ ವರದಿ ತರಿಸಿಕೊಂಡು ಮಾಲೀಕರಿಗೆ ಹಿಂತಿರುಗಿಸಲಾಗುವುದು ನಗರ ಸಂಚಾರ ವಿಭಾಗದ ವಿಶೇಷ ಆಯುಕ್ತ ಎಂ.ಎ.ಸಲೀಂ ತಿಳಿಸಿದ್ದಾರೆ.
ಸಾಮಾಜಿಕ ಜಾಲತಾಣವನ್ನು ಸದ್ಬಳಕೆ ಮಾಡಿಕೊಳ್ಳುತ್ತಿರುವ ಸರ್ಕಾರಿ ಸಂಸ್ಥೆಗಳ ಸಂಖ್ಯೆ ದಿನೇ ದಿನೇ ಹೆಚ್ಚಾಗುತ್ತಿದೆ. 2017ರ ಜನವರಿ 1 ರಿಂದ ಡಿಸೆಂಬರ್ 31ರ ಅವಧಿಯಲ್ಲಿ ಫೇಸ್ಬುಕ್ ಪೇಜ್ ಗಳ ಜನಪ್ರಿಯತೆಯಲ್ಲಿ ಬೆಂಗಳೂರು ಟ್ರಾಫಿಕ್ ಪೊಲೀಸ್ ಪೇಜ್ ನಂ.1