ಬೆಂಗಳೂರಿನಲ್ಲಿ ಕಳೆದೊಂದು ವಾರದಿಂದ ಭಾರೀ ಮಳೆಯಾಗುತ್ತಿದ್ದು, ಇದರಿಂದಾಗಿ ನಗರವೆಲ್ಲಾ ಜಲಾವೃತವಾಗಿದೆ. ವರದಿಯ ಪ್ರಕಾರ, ಬಂಗಾಳಕೊಲ್ಲಿಯಲ್ಲಿ ಕಡಿಮೆ ಒತ್ತಡದಿಂದಾಗಿ ಈ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿದೆ. ಉದ್ಯಾನನಗರಿಯಲ್ಲಿ ಅಕ್ಟೋಬರ್ 25ರವರೆಗೆ ಒಂದು ವಾರ ಮಳೆಯಾಗುವ ನಿರೀಕ್ಷೆಯಿದೆ.
Weather Update: ಮಾರ್ಚ್ 19 ರಿಂದ 20 ರ ಅವಧಿಯಲ್ಲಿ ದೇಶದ ಹಲವೆಡೆ ಲಘು ಮಳೆಯಾಗುವ ಸಾಧ್ಯತೆ ಇದ್ದು, ಇನ್ನೂ ಕೆಲವು ಭಾಗಗಳಲ್ಲಿ ಆಲಿಕಲ್ಲು ಮಳೆಯಾಗುವ ಸಂಭವವಿದೆ ಎಂದು ಭಾರತೀಯ ಹವಾಮಾನ ಇಲಾಖೆ ಭವಿಷ್ಯ ನುಡಿದಿದೆ.
ರಾಜ್ಯದಲ್ಲಿ ದಿನದಿಂದ ದಿನಕ್ಕೆ ಹವಾಮಾನದಲ್ಲಿ ಭಾರಿ ಬದಲಾವಣೆಯಾಗುತ್ತಿದೆ. ಇಂದು ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಕೊಡಗು, ಹಾಸನ ಮತ್ತು ಶಿವಮೊಗ್ಗ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿ, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಒಣಹವೆ ಮುಂದುವರೆಯಲಿದೆ.
ಬೆಂಗಳೂರು ಮೈಸೂರು ಎಕ್ಸ್ ಪ್ರೆಸ್ ಹೆದ್ದಾರಿಯ ಸರ್ವೀಸ್ ರಸ್ತೆ ನಿರ್ಮಾಣ ಸೇರಿ ಎಲ್ಲಾ ಬಾಕಿ ಕಾಮಗಾರಿಗಳು ಮುಗಿಯುವ ತನಕ ಟೋಲ್ ಸಂಗ್ರಹ ಮಾಡಬಾರದು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಒತ್ತಾಯ ಮಾಡಿದ್ದಾರೆ. ಅಂಡರ್ ಪಾಸ್ ಗಳಲ್ಲಿ ನೀರು ನಿಲ್ಲದಂತೆ ಮಾಡಬೇಕು ಹಾಗೂ ಇಡೀ ರಸ್ತೆಯ ಕಾಮಗಾರಿಗಳು ಮುಗಿಯುವ ತನಕ ಜನರು ಕೂಡ ಟೋಲ್ ಕಟ್ಟುವ ಅಗತ್ಯ ಇಲ್ಲ ಎಂದಿದ್ದಾರೆ.
Bengaluru Rains: ರಾಜ್ಯದ ಕೆಲವು ಭಾಗಗಳಲ್ಲಿ ಬೇಸಿಗೆಗಾಲದ ಮೊದಲ ಮಳೆ ಆರಂಭವಾಗಿದೆ. ಹವಾಮಾನ ಇಲಾಖೆಯ ಮುನ್ಸೂಚನೆ ಪ್ರಕಾರ, ಮುಂದಿನ 48ಗಂಟೆಗಳ ಕಾಲ ರಾಜ್ಯದ ಹಲವು ಭಾಗಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಮುಂದಿನ ನಾಲ್ಕು ದಿನಗಳವರೆಗೆ ಕೆಲವೆಡೆ ಸಾಧಾರಣ ಮಳೆಯಾಗಲಿದೆ ಎಂದು ಮಾಹಿತಿ ಲಭ್ಯವಾಗಿದೆ.
ನಗರದ ಕೆಲವಡೆ ದಟ್ಟವಾಗಿ ಆವರಿಸಿರುವ ಮಂಜು
ಗರಿಷ್ಠ ಉಷ್ಣಾಂಶ 26 ಮತ್ತು ಕನಿಷ್ಠ 15 ಡಿಗ್ರಿ ಸೆಲ್ಸಿಯಸ್
ಮುಂದಿನ 48 ಗಂಟೆಗಳಲ್ಲಿ ಮೋಡ ಕವಿದ ವಾತಾವರಣವಿರುತ್ತದೆ
ಹಗುರ ಮಳೆಯಾಗುವ ಸಾಧ್ಯತೆಯೂ ಇದೆ
Karnataka Rain Update: ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಿಗೆ ಮಳೆಯ ಮುನ್ಸೂಚನೆ ನೀಡಲಾಗಿದ್ದು ಈ ಭಾಗಗಳಲ್ಲಿ ಸಾಮಾನ್ಯದಿಂದ ಹಗುರ ಮಳೆ ಆಗಲಿದೆ. ಅಲ್ಲದೇ ಕೆಲವು ಕಡೆಗಳಲ್ಲಿ ಮಂಜು ಕವಿದ ವಾತಾವರಣ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಚಳಿಗಾಲವು ಹೆಚ್ಚಾಗುತ್ತಿದ್ದಂತೆ, ದಟ್ಟಣೆಯ ನಿರ್ವಹಣೆ ಕೂಡ ಟ್ರಾಫಿಕ್ ಮ್ಯಾನೇಜ್ಮೆಂಟ್ ಸಿಸ್ಟಮ್ನಲ್ಲಿ ಕಂಡುಬರುತ್ತದೆ. ಶನಿವಾರ ಬೆಂಗಳೂರಿನ ವಿಮಾನ ನಿಲ್ದಾಣದಲ್ಲಿ ದಟ್ಟವಾದ ಮಂಜಿನ ದೊಡ್ಡ ಪರಿಣಾಮ ಕಂಡುಬಂದಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.