ಬೆಂಗಳೂರಿನ ಬೃಹತ್ ಡ್ರಗ್ಸ್ ಮಾಫಿಯಾಕ್ಕೆ ಸಂಬಂಧಿಸಿದಂತೆ ಈಗಾಗಲೇ ಸಿಸಿಬಿ ಪೊಲೀಸರು ಚಿತ್ರನಟಿ ರಾಗಿಣಿ ದ್ವಿವೇದಿ (Ragini Dwivedi) ಗೆಳೆಯ ರವಿಶಂಕರ್ ವಿಚಾರಣೆ ನಡೆಸುತ್ತಿದ್ದಾರೆ.
ಸ್ಯಾಂಡಲ್ ವುಡ್ ನಲ್ಲಿ ಡ್ರಗ್ಸ್ ಬಳಕೆ ಸಂಬಂಧ ತನಿಖೆಯನ್ನು ತೀವ್ರಗೊಳಿಸಿರುವ ಸಿಸಿಬಿ ಪೊಲೀಸರು ಕಳೆದ ಸೋಮವಾರದ ವಿಚಾರಣೆ ವೇಳೆ ಇಂದ್ರಜಿತ್ ಲಂಕೇಶ್ ಕೊಟ್ಟಿರುವ ಮಾಹಿತಿ ಮತ್ತು ದಾಖಲೆಗಳು ಸಮರ್ಪಕವಾಗಿಲ್ಲ ಎಂದು ಇಂದು ಮತ್ತೊಮ್ಮೆ ವಿಚಾರಣೆಗೆ ಕರೆದಿದ್ದಾರೆ.
ಸ್ಯಾಂಡಲ್ ವುಡ್ ಡ್ರಗ್ಸ್ ಮಾಫಿಯಾದಲ್ಲಿ ರಾಗಿಣಿ ಹೆಸರು ತಳುಕು ಹಾಕಿಕೊಂಡಿದೆ ಎಂದು ಗೊತ್ತಾಗಿದ್ದೆ ತಡ ಈ ಪ್ರಕರಣದ ವಿಚಾರಣೆ ನಡೆಸುತ್ತಿರುವ ಸಿಸಿಬಿ ಪೊಲೀಸರು ನಿನ್ನೆ ರಾಗಿಣಿಯವರ ಗೆಳೆಯ ರವಿಶಂಕರ್ ಅವರನ್ನು ವಿಚಾರಣೆಗೆ ಒಳಪಡಿಸಲಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.