Bhavani Revanna case : ಸಂತ್ರಸ್ತೆ ಕಿಡ್ನಾಪ್ ಪ್ರಕರಣದಲ್ಲಿ ಭವಾನಿ ರೇವಣ್ಣಗೆ ತಾತ್ಕಾಲಿಕ ರಿಲೀಫ್ ಸಿಕ್ಕಿದೆ. ಪ್ರಕರಣದಲ್ಲಿ ಬಂಧನದ ಭೀತಿ ಎದುರಿಸುತ್ತಿದ್ದ ಭವಾನಿ ರೇವಣ್ಣ ಅವರು ನಿರೀಕ್ಷಣಾ ಜಾಮೀನು ಕೋರಿ ಹೈಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದ್ದರು. ಇಂದು ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ಏಕಸದಸ್ಯ ಪೀಠ ಭವಾನಿ ಅವರಿಗೆ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ.
Karnataka Assembly Election: ಹಾಸನ ಕ್ಷೇತ್ರ ಟಿಕೆಟ್ಗಾಗಿ ಭಾರೀ ಪೈಪೋಟಿ ನಡೆಸಿದ್ದ ಭವಾನಿ ರೇವಣ್ಣ ಅವರು ಚುನಾವಣೆ ಘೋಷಣೆಗೂ ಮುನ್ನವೇ ಕಾರ್ಯಕ್ರಮವೊಂದರಲ್ಲಿ ನಾನೇ ಅಭ್ಯರ್ಥಿಯಾಗಲಿದ್ದೇನೆ ಎಂದು ಸ್ವಯಂ ಘೋಷಣೆ ಮಾಡಿಕೊಳ್ಳುವ ಮೂಲಕ ಟಿಕೆಟ್ ಗೊಂದಲಕ್ಕೆ ಕಿಡಿ ಹೊತ್ತಿಸಿದ್ದರು. ಜೊತೆಗೆ ತಮ್ಮ ಕುಟುಂಬದೊಂದಿಗೆ ಮೂರು ದಿನಗಳ ಕಾಲ ಬಿಡುವಿಲ್ಲದಂತೆ ಪ್ರತಿ ಗ್ರಾಮ ಪಂಚಾಯಿತಿವಾರು ಚುನಾವಣೆ ಪ್ರಚಾರ ನಡೆಸುವ ಮೂಲಕ ತಾವೇ ಅಭ್ಯರ್ಥಿ ಎಂದು ಬಿಂಬಿಸಿಕೊಂಡಿದ್ದರು.
Karnataka Assembly Election 2023: ಹಾಸನ ನಗರ ಟಿಕೆಟ್ ಕುರಿತ ಎಲ್ಲಾ ಊಹಾಪೋಹಗಳಿಗೆ ತೆರೆ ಎಳೆದಿರುವ ಎಚ್ಡಿಕೆ, ಭವಾನಿ ರೇವಣ್ಣರಿಗೆ ಟಿಕೆಟ್ ನಿರಾಕರಿಸಿದ್ದಾರೆ. ತಾವು ಬಯಸಿದಂತೆ ಎಚ್.ಪಿ.ಸ್ವರೂಪ್ ಪ್ರಕಾಶ್ ಅವರನ್ನು ಕಣಕ್ಕಿಳಿಸುವುದಾಗಿ ಘೋಷಿಸಿದ್ದಾರೆ.
ಭವಾನಿ ರೇವಣ್ಣಗೆ ಟಿಕೆಟ್ ನೀಡಲು ನಿರಾಕರಣೆ ಹಿನ್ನೆಲೆಯಲ್ಲಿ ಹಾಸನ ಸಿಂಹಾಸನಕ್ಕೆ ಹೆಚ್ಡಿ ರೇವಣ್ಣ ಹೊಸ ಬೇಡಿಕೆ ಇಟ್ಟಿದ್ದಾರೆ.. 2 ಕ್ಷೇತ್ರದಲ್ಲಿ ನಾನೇ ನಿಲ್ತೀನಿ, ಟಿಕೆಟ್ ಕೊಡಿ ಎಂದು ರೇವಣ್ಣ ಬೇಡಿಕೆ ಇಟ್ಟಿದ್ದಾರೆ ಎನ್ನಲಾಗ್ತಿದೆ..
ವಿಧಾನಸಭಾ ಕ್ಷೇತ್ರದ ಜೆಡಿಎಸ್ ಟಿಕೆಟ್ ವಿಚಾರದಲ್ಲಿ ಎಲ್ಲ ನಿರ್ಧಾರವನ್ನೂ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ. ದೇವೇಗೌಡರು ತೆಗೆದುಕೊಳ್ಳುತ್ತಾರೆ ಎನ್ನುವ ಮೂಲಕ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಹಾಸನ ಕ್ಷೇತ್ರದ ಟಿಕೆಟ್ ಹಂಚಿಕೆ ವಿಚಾರದಲ್ಲಿ ಹಿಂದೆ ಸರಿದಿದ್ದಾರೆ.
ಬಗೆಹರಿಯದ ಹಾಸನ ಜೆಡಿಎಸ್ ಟಿಕೆಟ್ ಗೊಂದಲ. ಟಿಕೆಟ್ಗಾಗಿ ದೇವರ ಮೊರೆ ಹೋದ ಭವಾನಿ ರೇವಣ್ಣ. ಕುಮಾರಸ್ವಾಮಿಗೆ ಭವಾನಿ ರೇವಣ್ಣ ಪರೋಕ್ಷ ಟಾಂಗ್. ಹಾಸನ ಕ್ಷೇತ್ರದ ದೊಡ್ಡಪುರದಲ್ಲಿ ಜೆಡಿಎಸ್ ಮತಬೇಟೆ. ಮಾಜಿ ಸಚಿವ ರೇವಣ್ಣ ಕುಟುಂಬಕ್ಕೆ ಭರ್ಜರಿ ಸ್ವಾಗತ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.