ಪಕ್ಷ ಸಂಕಟದಲ್ಲಿದ್ದಾಗಲೆಲ್ಲ ವಿದೇಶ ಪ್ರವಾಸ ಮಾಡುತ್ತಿದ್ದ ರಾಹುಲ್ ಗಾಂಧಿ ಈಗ ಕಾಶ್ಮೀರದಿಂದ ಕನ್ಯಾಕುಮಾರಿಯವರೆಗೆ ‘ಭಾರತ್ ಜೋಡೋ’ ಪಾದಯಾತ್ರೆಗೆ ಹೊರಟಿದ್ದಾರೆ ಎಂದು ಬಿಜೆಪಿ ವ್ಯಂಗ್ಯವಾಡಿದೆ.
ತೆಲಂಗಾಣ ರಾಷ್ಟ್ರ ಸಮಿತಿ (ಟಿಆರ್ಎಸ್) ಕಾರ್ಯಾಧ್ಯಕ್ಷ ಹಾಗೂ ರಾಜ್ಯ ಸಚಿವ ಕೆ.ಟಿ. ರಾಮರಾವ್ ಅವರು ಶುಕ್ರವಾರ ತೆಲಂಗಾಣಕ್ಕೆ ಭೇಟಿ ನೀಡುವ ಮುನ್ನಾ ದಿನದಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಬಹಿರಂಗ ಪತ್ರ ಬರೆದಿದ್ದಾರೆ.
ಜೀ ಎಂಟರ್ಟೈನ್ಮೆಂಟ್ ಎಂಟರ್ಪ್ರೈಸಸ್ ಲಿಮಿಟೆಡ್ (ZEE) ಇಂದು ನಗರದ ಬೆಳ್ಳಂದೂರಿನ ಆರ್ ಎಂಜಿ ಇಕೋ ಸ್ಪೇಸ್ ಟೆಕ್ ಪಾರ್ಕ್ ನಲ್ಲಿ ತನ್ನ ಜೀ ತಂತ್ರಜ್ಞಾನ ಮತ್ತು ಸಂಶೋಧನಾ ಕೇಂದ್ರವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಉದ್ಘಾಟಿಸಿದರು.
ಸುಪ್ರೀಂ ಕೋರ್ಟ್ ಆದೇಶದನ್ವಯ ಬಿಬಿಎಂಪಿ ಚುನಾವಣೆ ಶೀಘ್ರ ನಡೆಸುವಂತೆ ಶಾಸಕ ರಾಮಲಿಂಗಾ ರೆಡ್ಡಿ ನೇತೃತ್ವದಲ್ಲಿ ಕಾಂಗ್ರೆಸ್ ಮುಖಂಡರು ರಾಜ್ಯ ಚುನಾವಣಾ ಆಯೋಗಕ್ಕೆ ಭೇಟಿ ಮಾಡಿ ಮನವಿ ಸಲ್ಲಿಸಿದರು.
ಸ್ವಾತಂತ್ರ್ಯ ಪಡೆದು ಇಷ್ಟು ವರ್ಷಗಳಾದರೂ ಕೇಂದ್ರದ ನಿರ್ಲಕ್ಷ್ಯ ಧೋರಣೆಯಿಂದಾಗಿ ನಮ್ಮ ನೀರು ನಾವು ಪಡೆಯಲು ಆಗಲಿಲ್ಲ. ಭವಿಷ್ಯದಲ್ಲಿ ನೀರು ಪೂರೈಕೆ ಬಹಳ ಕಷ್ಟವಾಗಲಿದೆ. ಈಗಲೇ ನಾವು ಸಮಸ್ಯೆ ಪರಿಹರಿಸಿಕೊಳ್ಳದಿದ್ದರೆ ಮುಂದೆ ನೀರಿನ ಹಾಹಾಕಾರ ಎದುರಿಸಬೇಕಾಗಲಿದೆ
ಬೋಧಕರ ನಿಯೋಜನೆಯನ್ನು ಏಕಾಏಕಿ ಮಾಡಲಾಗಿದೆ ಎಂದು ಎಂಎಲ್ಸಿ ಮರಿತಿಬ್ಬೇಗೌಡ ಅವರು ಮಾಡಿರುವ ಆರೋಪ ಸತ್ಯಕ್ಕೆ ದೂರವಾದುದು. ಈ ಕುರಿತು ಹಲವು ಸುತ್ತಿನ ಮಾತುಕತೆಗಳ ನಡೆದಿವೆ ಎಂದು ಸಚಿವರು ಪ್ರತಿಕ್ರಿಯಿಸಿದರು. ಮರಿತಿಬ್ಬೇಗೌಡರು ನಡೆಸಿರುವ ಧರಣಿ ಬಗ್ಗೆ ಸೋಮವಾರ ಪ್ರತಿಕ್ರಿಯಿಸಿರುವ ಅವರು ಹೀಗೆಂದಿದ್ದಾರೆ.
ಯಾರು ನಿಂತರೂ ನನಗೇನು ಪ್ರಶ್ನೇ ಇಲ್ಲ.ನನ್ನ ಗುರಿಯೊಂದೇ ಮಹಾಭಾರತ ಇದು.ಎದುರು ಸೈನ್ಯ ಕೌರವರ ಸೈನ್ಯ, ನಮ್ಮದು ಪಾಂಡವರ ಸೈನ್ಯ. ಅರ್ಜುನರಾಗಿ ಕುಮಾರಸ್ವಾಮಿ ಇದ್ದಾರೆ, ಅವರಿಗೆ ಸಾರಥಿಯಾಗಿ ನಾನಿದ್ದೇನೆ. ಕುದುರೆ ಹೊಡೆಯೋದು ನನ್ನ ಕೆಲಸ, ಬಾಣ ಬಿಡೋದು ಅವರ ಕೆಲಸ.