ಈ ಹಿಂದೆ ಬಿಜೆಪಿ ಅಧಿಕಾರದಲ್ಲಿದ್ದಾಗ ನಡೆದಿದೆ ಎನ್ನಲಾದ ಸಾವಿರಾರು ಕೋಟಿ ರೂಪಾಯಿ ಕೋವಿಡ್ ಹಗರಣದ ತನಿಖೆಗೆ ವಿಶೇಷ ತನಿಖಾ ತಂಡ ರಚನೆ ಮಾಡಲು ರಾಜ್ಯ ಸಚಿವ ಸಂಪುಟ ಗುರುವಾರ ಒಪ್ಪಿಗೆ ನೀಡಿದೆ. ನಿನ್ನೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ವಿಧಾನಸೌಧದಲ್ಲಿ ನಡೆದ ಸಚಿವ ಸಂಪುಟ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್ ಕೆ ಪಾಟೀಲ್ ಅವರು, ಕೋವಿಡ್ ಹಗರಣ ಸಂಬಂಧ ರಾಜ್ಯ ಸರ್ಕಾರ ನೇಮಿಸಿದ್ದ ನ್ಯಾ. ಮೈಕಲ್ ಡಿ ಕುನ್ಹಾ ಆಯೋಗವು ತನ್ನ ಮಧ್ಯಂತರ ವರದಿ ನೀಡಿದ್ದು, ಈ ಕುರಿತು ತನಿಖೆಗೆ ಎಸ್ಐಟಿ ರಚನೆ ಮಾಡಲಾಗುವುದು.
Jharkhand assembly election 2024: ಜಾರ್ಖಂಡ್ನಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ರಾಜ್ಯದ ಪ್ರತಿಯೊಬ್ಬ ಮಹಿಳೆಗೆ ತಿಂಗಳಿಗೆ 2,100 ರೂ., ವರ್ಷಕ್ಕೆ 2 ಉಚಿತ LPG ಸಿಲಿಂಡರ್ ನೀಡುವುದು ಸೇರಿದಂತೆ ಹಲವಾರು ಗ್ಯಾರಂಟಿ ಯೋಜನೆಗಳನ್ನು ಪ್ರಕಟಿಸಿದ್ದಾರೆ.
Bhagyalakshmi Yojana Scam: 2011ರಲ್ಲಿ ಭಾಗ್ಯಲಕ್ಷ್ಮಿ ಯೋಜನೆಯಲ್ಲಿ 23 ಕೋಟಿ ರೂ. ಅಕ್ರಮ ನಡೆದಿರುವ ಬಗ್ಗೆ ಬಿಜೆಪಿ ಮೌನವಾಗಿರುವುದೇಕೆ? ಈ ಹಗರಣದಲ್ಲಿ ಲೆಹರ್ ಸಿಂಗ್ ಪಾತ್ರವೇನು? ಭ್ರಷ್ಟ ಹಣದಲ್ಲಿ ಪಾಲೆಷ್ಟು? ಎಂದು ಕಾಂಗ್ರೆಸ್ ಪ್ರಶ್ನಿಸಿದೆ.
LPG cylinder: ಕಾಲ ಬದಲಾದಂತೆ ಬೆಲೆ ಏರಿಕೆಯಾಗುತ್ತಲೇ ಇದೆ. ಆಗೊಂದು ಕಾಲದಲ್ಲಿ ಸಿಲಿಂಡರ್ ಅನ್ನು ಬಳಸುವವರ ಸಂಖ್ಯೆ ಬಹಳ ಕಡಿಮೆ ಇತ್ತು. ಒಲೆಯಲ್ಲಿ ಅಡುಗೆ ಬೇಯಿಸಿ ತಿನ್ನುತ್ತದ್ದ ಕಾಲವೊಂದಿತ್ತು. ಆದರೆ ಈಗ ಆಗಲ್ಲ ಪ್ರತಿಯೊಬ್ಬರ ಮನೆಯಲ್ಲಿಯೂ ಸಿಲಿಂಡರ್ ಇದ್ದೆ ಇದೆ. ಈ ಸಿಲಿಂಡರ್ಗೆ ಡಿಮ್ಯಾಂಡ್ ಜಾಸ್ತಿ ಆಗುತ್ತಿದ್ದಂತೆ, ಬೆಲೆ ಏರಿಕೆಯೂ ಅಷ್ಟೆ ಆಗುತ್ತಿದೆ.
Pm modi: ಕೇಂದ್ರ ಸರ್ಕಾರದ ಅಡಿಯಲ್ಲಿ ಕೆಲಸ ಮಾಡುತ್ತಿರುವ ಮಹಿಳಾ ಉದ್ಯೋಗಿಗಳಿಗೆ ಪ್ರಧಾನಿ ನರೇಂದ್ರ ಮೋದಿ ಸಿಹಿ ಸುದ್ದಿ ನೀಡಿದ್ದಾರೆ. ಇಲ್ಲಿಯವರೆಗೆ ಗರ್ಭಿಣಿಯರಿಗೆ ಆರು ತಿಂಗಳ ಕಾಲ ಹೆರಿಗೆ ರಜೆ ನೀಡಲಾಗುತ್ತಿತ್ತು. ಸಧ್ಯ ಬಾಡಿಗೆ ತಾಯ್ತನದ ಬಗ್ಗೆಯೂ ಮೋದಿ ಮಹತ್ವದ ನಿರ್ಧಾರ ಪ್ರಕಟಿಸಿದ್ದಾರೆ.
Mohammed Shami murder plan : ಡಿಯಾದ ಸ್ಟಾರ್ ಬೌಲರ್ ಮೊಹಮ್ಮದ್ ಶಮಿ ಕ್ರಿಕೆಟ್ ಜಗತ್ತಿನಲ್ಲಿ ದೊಡ್ಡ ಹೆಸರನ್ನು ಮಾಡಿದರೂ ಸಹ, ತಮ್ಮ ವೈಯಕ್ತಿಕ ಜೀವನದಲ್ಲಿ ಏಳುಬೀಳುಗಳಿಂದ ಯಾವಾಗಲೂ ಸುದ್ದಿಯಲ್ಲಿದ್ದಾರೆ. ಶಮಿ 2018 ರಲ್ಲಿ ಪತ್ನಿ ಹಸಿನ್ ಜಹಾನ್ನಿಂದ ಬೇರ್ಪಟ್ಟಿದ್ದರೂ ಸಹ ಇವರಿಬ್ಬರ ನಡುವೆ ಆಗಾಗ ಜಗಳವಾಗುತ್ತಲೇ ಇವೆ. ಇದೀಗ 6 ವರ್ಷಗಳ ನಂತರ ಹಸಿನ್ ನೀಡಿರುವ ಸ್ಪೋಟಕ ಹೇಳಿಕೆ ಮತ್ತೇ ಚರ್ಚೆಗೆ ಗ್ರಾಸವಾಗಿದೆ.
ತನಿಖೆಗೆ ಸಂಬಂಧಿಸಿದಂತೆ ಸಂಬಂಧಪಟ್ಟ ಅಗತ್ಯವಾದ ಕಡತಗಳು, ದಾಖಲಾತಿಗಳನ್ನು ಆಯಾ ಸಂಬಂಧಿತ ಇಲಾಖೆಯ ಅಧಿಕಾರಿಗಳು ತನಿಖಾ ಸಮಿತಿಗೆ ಒದಗಿಸಬೇಕು. ಸ್ಥಳ ಪರಿಶೀಲನೆ ವೇಳೆ ಅಧಿಕಾರಿಗಳು ಖುದ್ದಾಗಿ ಹಾಜರಿದ್ದು ತನಿಖೆಗೆ ಸಂಪೂರ್ಣ ಸಹಕಾರವನ್ನು ನೀಡಬೇಕು ಎಂದು ಲೋಕೋಪಯೋಗಿ ಇಲಾಖೆ ಆದೇಶದಲ್ಲಿ ತಿಳಿಸಿದೆ.
Contractors commission allegation: ರಾಜ್ಯದ ಜನತೆಗೆ ಪಂಚ ಗ್ಯಾರಂಟಿ ಭರವಸೆ ನೀಡಿ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಈ ಗ್ಯಾರಂಟಿ ಯೋಜನೆಗಳ ಪ್ರಯೋಜನವನ್ನು ಪಡೆಯಲು 26 ಕಂಡಿಷನ್ ಗಳನ್ನು ಹಾಕಿದೆ. ಈ 26 ಕಂಡಿಷನ್ ಪೂರೈಸಬೇಕಾದರೆ ಕನಿಷ್ಠ 26 ವರ್ಷಗಳು ಬೇಕಾಗುತ್ತದೆ- ಕಾಂಗ್ರೆಸ್ ಸರ್ಕಾರದ ವಿರುದ್ಧ ಮಾಜಿ ಸಚಿವ ಆರ್. ಅಶೋಕ್
ವಿಧಾನಸೌಧದಲ್ಲಿ ಗುರುವಾರ ಮಾಧ್ಯಮ ಮಿತ್ರರೊಂದಿಗೆ ಮಾತನಾಡಿದ ಸಚಿವ ರಾಮಲಿಂಗಾ ರೆಡ್ಡಿ, ಗುತ್ತಿಗೆದಾರರಿಗೆ ಬಿಲ್ ಬಾಕಿ ಬಗ್ಗೆ ತನಿಖೆಗೆ ನಾಲ್ಕು ತಂಡ ರಚನೆ ಮಾಡಲಾಗಿದೆ. ಅವರ ವರದಿ ಬಳಿಕ ಬಿಲ್ ಕ್ಲಿಯರ್ ಮಾಡುತ್ತೇವೆ ಎಂದರು.
ಅಹಿಂದ ಚಳವಳಿ ಆರಂಭಿಸಿ ಮುಖ್ಯಮಂತ್ರಿಯಾದ ಸಿದ್ದರಾಮಯ್ಯರವರು ಹಿಂದುಳಿದ ಸಮಾಜಗಳಿಗೆ ನ್ಯಾಯವನ್ನೇ ಕೊಡಲಿಲ್ಲ. ಆಗ ಅಹಿಂದಕ್ಕೆ ನ್ಯಾಯ ಕೊಡದ ಅವರು ಈಗ ನಾವು ಕೊಟ್ಟಾಗ ಅಸಮಾಧಾನ ತೋರಿಸುವುದು ಯಾವ ನ್ಯಾಯ? - ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ಕುಮಾರ್ ಕಟೀಲ್
ರಾಜ್ಯದಲ್ಲಿ SC, ST ಮೀಸಲಾತಿ ಕ್ರೆಡಿಟ್ ವಾರ್ ಜೋರಾಗಿದೆ.. ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಇದನ್ನೇ ಪ್ಲಸ್ ಮಾಡಿಕೊಳ್ಳೋಕೆ ಮೂರು ಪಕ್ಷಗಳಲ್ಲೂ ಸಮಬಲದ ಟಾಕ್ ವಾರ್ ನಡೆದಿದೆ.. ಈ ಮಧ್ಯೆ ಸ್ವಪಕ್ಷೀಯ ಬಿಜೆಪಿ ನಾಯಕರಲ್ಲೇ ಕ್ರೆಡಿಟ್ಗಾಗಿ ಪೈಪೋಟಿ ಶುರುವಾಗಿದೆ.
ಲಿಂಗಾಯತರು, ಒಕ್ಕಲಿಗರು, ಈಡಿಗರು ಎಲ್ಲರೂ ಮೀಸಲಾತಿ ಹೆಚ್ಚಳಕ್ಕೆ ಮನವಿ ಕೊಟ್ಟಿದ್ದಾರೆ. ಖಂಡಿತ ಕಾನೂನು ಪ್ರಕಾರ ಪರಿಶೀಲನೆ ಮಾಡಿ ಮುಂದಡಿ ಇಡುತ್ತೇವೆ. ಎಲ್ಲರನ್ನೂ ಸಮಾನ ದೃಷ್ಟಿಯಿಂದ ನೋಡುವ ಸರ್ಕಾರ, ಬಿಜೆಪಿ ಸರ್ಕಾರ ಎಂದು ಕಂದಾಯ ಸಚಿವ ಆರ್. ಅಶೋಕ್ ಹೇಳಿದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.