ಸಿಎಂ ಸಿದ್ದರಾಮಯ್ಯರ 4 ದಶಗಳ ಸುದೀರ್ಘ ರಾಜಕೀಯದಲ್ಲಿ ಮೊದಲ ಬಾರಿ ಕಳಂಕವೊಂದು ಅಂಟಿಕೊಂಡಿದೆ.. ಇದೇ ಮೊದಲ ಬಾರಿಗೆ ಸಿದ್ದರಾಮಯ್ಯ ವಿರುದ್ಧ ದಾಖಲಾಗಿರೋ FIR ರಾಜ್ಯ ರಾಜಕೀಯದಲ್ಲಿ ತಲ್ಲಣ ಸೃಷ್ಟಿಸಿದೆ.. ಇದನ್ನೇ ಬ್ರಹ್ಮಾಸ್ತ್ರವಾಗಿಸಿಕೊಂಡಿರೋ ಬಿಜೆಪಿ ನಾಯಕರು ಸಿದ್ದರಾಮಯ್ಯರನ್ನು ಕುರ್ಚಿಯಿಂದ ಇಳಿಸಿಯೇ ಸಿದ್ಧ ಅಂತಾ ಪಣ ತೊಟ್ಟಿದ್ದಾರೆ..
ಬಿಜೆಪಿ ನಾಯಕರ ವಿರುದ್ಧ ಅತೃಪ್ತರು ಅಸಮಾಧಾನ ಮುಂದುವರೆದಿದೆ. ಈ ಹಿಂದೆ ಬೆಳಗಾವಿಯಲ್ಲಿ ಸಭೆ ನಡೆಸಿದ್ದ ರೆಬಲ್ ನಾಯಕರು, ದಾವಣಗೆರೆಯಲ್ಲಿ ಬಸನಗೌಡ ಯತ್ನಾಳ್ ನೇತೃತ್ವದಲ್ಲಿ ಮೀಟಿಂಗ್ ನಡೆಸಿದ್ರು. ಕೇಸರಿ ಬಂಡಾಯ ನಾಯಕರ ಸಭೆಯಲ್ಲಿ ಯಾರೆಲ್ಲ ಭಾಗಿಯಾಗಿದ್ರು, ಏನು ಚರ್ಚೆ ಮಾಡಿದ್ರು. ಅನ್ನೋದ್ರ ಬಗ್ಗೆ ಒಂದು ರಿಪೋರ್ಟ್ ಇಲ್ಲಿದೆ.. ನೋಡಿ..
ಕಾಂಗ್ರೆಸ್ ಪಕ್ಷಕ್ಕೆ ಹಾಗೂ ಸದಸ್ಯರಿಗೆ ಈ ಅಭಿಪ್ರಾಯ ಹಾಗೂ ಸಲಹೆಗಳು ಎಷ್ಟರ ಮಟ್ಟಿಗೆ ಅಗತ್ಯವಿದೆ, ಅವು ಯಾವ ಮಟ್ಟದಲ್ಲಿವೆ ಎಂಬುದನ್ನು ಪಕ್ಷ ಪರಿಶೀಲಿಸುತ್ತದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷರು ಹಾಗೂ ರಾಜ್ಯಸಭಾ ಸಂಸದರಾದ ಜಿ.ಸಿ. ಚಂದ್ರಶೇಖರ್ ಹೇಳಿದ್ದಾರೆ.
ಬಿಜೆಪಿಯ ರಕ್ತದಲ್ಲಿ ಹೇಗೆ ಕೋಮುವಾದ ಸೇರಿಕೊಂಡಿದೆಯೋ, ಅದೇ ರೀತಿ ಅಂತರ್ಕಲಹವೂ ಸೇರಿಕೊಂಡಿದೆ. ಇತ್ತೀಚಿನ ದಿನಗಳಲ್ಲಿ ಕರ್ನಾಟಕದ ಬಿಜೆಪಿ ನಾಯಕರು ಪರಸ್ಪರ ಕೆಸರೆರಚಾಟ ಮಾಡಿಕೊಳ್ಳದ ದಿನವೇ ಸಿಗಲಾರದು. ಪ್ರತಿನಿತ್ಯ ಬಿಜೆಪಿ ನಾಯಕರು ಆರೋಪ - ಪ್ರತ್ಯಾರೋಪ, ಪರಸ್ಪರ ದೂಷಣೆ - ನಿಂದನೆಯ ಧಾರವಾಹಿ ಮೂಲಕ ಜನರನ್ನು ರಂಜಿಸುತ್ತಿದ್ದಾರೆ ಎಂದಿದ್ದಾರೆ.
ಬಿಜೆಪಿ ಅನ್ನೋ ಪಕ್ಷ, ಹಿಂದೂ ಮಹಾಸಭಾಗಳಂತಹ ಸಂಘಟನೆಗಳು ಹುಟ್ಟುವುದಕ್ಕಿಂತ ಮೊದಲೇ ಈ ಧಾರ್ಮಿಕ ಆಚರಣೆಗಳು ಇವೆ. ಈ ಮೊದಲು ಗಂಗಾರತಿ, ಅಯೋಧ್ಯೆಯೂ ಇತ್ತು. ಇವೆಲ್ಲವೂ ಬಿಜೆಪಿ ಬಂದ ಮೇಲೆ ಬಂದಿದ್ದಲ್ಲ. ಸಂಪ್ರದಾಯ, ಧಾರ್ಮಿಕ ಆಚರಣೆಗಳು ಬಿಜೆಪಿ ಮತ್ತು ಅಶೋಕ್ ಅವರ ಗುತ್ತಿಗೆ ಅಲ್ಲ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.