ಬಂಡೂರಿ ನಾಲೆ ತಿರುವು ಯೋಜನೆಗೆ ಅಗತ್ಯವಿರುವ 28 ಹೆಕ್ಟೇರ್ ಅರಣ್ಯ ಪ್ರದೇಶದ ಸ್ವಾಧೀನಕ್ಕಾಗಿ 2024ರ ಆಗಸ್ಟ್ ನಲ್ಲಿಯೇ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಲಾಗಿದೆ. ಈ ಬೇಡಿಕೆಗೆ ಸಂಬಂಧಿಸಿದ ಇತರ ಪ್ರಕ್ರಿಯೆಗಳನ್ನು ರಾಜ್ಯ ಸರ್ಕಾರ ಸಂಪೂರ್ಣಗೊಳಿಸಲಾಗಿದ್ದು ಈ ನದಿ ತಿರುವು ಯೋಜನೆಗೆ ಕೇಂದ್ರ ಸರ್ಕಾರ ಅನುಮತಿ ನೀಡುವುದಷ್ಟೇ ಬಾಕಿ ಉಳಿದಿದೆ.ಕೃಷ್ಣಾ ಜಲವಿವಾದ ನ್ಯಾಯಮಂಡಳಿ ಕರ್ನಾಟಕಕ್ಕೆ 173 ಟಿಎಂಸಿ ನೀರಿನ ಪಾಲನ್ನು ನೀಡಿ 2010ರಲ್ಲಿಯೇ ಐತೀರ್ಪು ನೀಡಿದೆ.
ಸಾಲ ವಸೂಲಾತಿ ಸಂದರ್ಭದಲ್ಲಿ ಸಾಲ ಪಡೆದವರಿಗೆ ಯಾವುದೇ ಕಿರುಕುಳ ಉಂಟಾಗಬಾರದು ಎಂಬ ಉದ್ದೇಶದಿಂದ ಈ ಕಾಯ್ದೆಯನ್ನು ಜಾರಿಗೊಳಿಸಲಾಗಿದೆ. ಕಾಯ್ದೆಯ ಎಲ್ಲಾ ಅಂಶಗಳನ್ನು ಪ್ರತಿ ಜಿಲ್ಲೆಯಲ್ಲಿ ಕಟ್ಟುನಿಟ್ಟಿನಿಂದ ಜಾರಿಗೊಳಿಸಬೇಕು.
ಸದರಿ ದಾವೆಯಲ್ಲಿ ಪ್ರತಿವಾದಿಯು ತಮ್ಮ ಕುಟುಂಬದಲ್ಲಿ 1880 ನೇ ಇಸವಿಯಲ್ಲಿಯೇ ಕುಟುಂಬದ ಆಸ್ತಿಗಳ ವಿಭಾಗವಾಗಿದೆ ಹಾಗೂ ಇದೇ ಕುಟುಂಬದ ಆಸ್ತಿಗಳ ಬಗ್ಗೆ ಈ ದಾವೆಯ ಪ್ರತಿವಾದಿ ನಂ.1 ಇವರ ಅಜ್ಜನವರು ವಾದಿಯ ಮಾವನವರ ವಿರುದ್ದ 1898 ರಲ್ಲಿ ಅಥಣಿ ಸಿವಿಲ್ ಜಡ್ಜ್ ಜೂನಿಯರ ಡಿವಿಜನ್ ನ್ಯಾಯಾಲಯದಲ್ಲಿ ಸಹ ಕೆಲವು ಜಮೀನುಗಳ ಬಗ್ಗೆ ದಾವೆಯು ದಾಖಲಾಗಿ ಪ್ರತಿವಾದಿಯ ಅಜ್ಜನ ಪರವಾಗಿ ನಿಕಾಲಿಯಾಗಿತ್ತು ಎಂಬ ವಾದವನ್ನು ಮಂಡಿಸಿದ್ದರು.
ಕೇಂದ್ರ ಸರ್ಕಾರವು ಬಿಡುಗಡೆ ಮಾಡಿದ ಪ್ರತಿಯೊಂದು ರೂಪಾಯಿಯನ್ನು ರಾಜ್ಯ ಸರ್ಕಾರವು ಉದ್ದೇಶಿತ ಯೋಜನೆಗಳನ್ನು ಯಶಸ್ವಿಯಾಗಿ ಜಾರಿಗೊಳಿಸಲು ಸಂಪೂರ್ಣವಾಗಿ ಬಳಸಿಕೊಂಡಿದೆ. ಆದರೆ ಪ್ರಧಾನಿ ನರೇಂದ್ರ ಮೋದಿ ಸರ್ಕಾರವು ಕರ್ನಾಟಕಕ್ಕೆ ನ್ಯಾಯಬದ್ಧವಾಗಿ ಸಿಗಬೇಕಾದ ಅನುದಾನದ ಪಾಲನ್ನು ನೀಡಲು ನಿರಾಕರಿಸುತ್ತಾ ಬಂದಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.