ಬಿಜೆಪಿಯ ವಿಜಯ ಸಂಕಲ್ಪ ಯಾತ್ರೆಗೆ ಅಪಾರ ಜನ ಬೆಂಬಲ ಸಿಗುತ್ತಿದೆ. ಮುಂದಿನ ವಿಧಾನಸಭಾ ಚುನಾವಣೆಯಲ್ಲಿ 135-140 ಸ್ಥಾನಗಳನ್ನು ಗೆದ್ದು ನಾವೇ ಸರ್ಕಾರ ರಚನೆ ಮಾಡುತ್ತೇವೆ ಎಂದು ಬಿಎಸ್‍ವೈ ಹೇಳಿದರು.
ಜೇವರ್ಗಿಯಲ್ಲಿ ಬಿಜೆಪಿ ವಿಜಯ ಸಂಕಲ್ಪ ಯಾತ್ರೆಗೆ ಚಾಲನೆ ನೀಡಲು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪನವರು ಹೆಲಿಕಾಪ್ಟರ್‌ನಲ್ಲಿ ಆಗಮಿಸಿದ್ದರು. ವಿಜಯಪುರ-ಕಲಬುರಗಿ ರಸ್ತೆ ಬದಿಯ ಜಮೀನಿನಲ್ಲಿರುವ ಹೆಲಿಪ್ಯಾಡ್‌ನಲ್ಲಿ ಹೆಲಿಕಾಪ್ಟರ್ ಲ್ಯಾಂಡಿಂಗ್ ಆಗುತ್ತಿದ್ದ ವೇಳೆ ಈ ಘಟನೆ ನಡೆದಿದೆ.
ತಮ್ಮ ಹಾಗೂ ಯಡಿಯೂರಪ್ಪ ಅವರ ನಡುವೆ ಭಿನ್ನಾಭಿಪ್ರಾಯ ಇದೆ ಎಂಬ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿ “ನಮ್ಮದು ತಂದೆ ಮಕ್ಕಳ ಸಂಬಂಧ. ಯಾವುದೇ ಕಾರಣಕ್ಕೂ ಯಾವುದೇ ಸಂದರ್ಭದಲ್ಲಿಯೂ ಭಿನ್ನಾಭಿಪ್ರಾಯ ಬರುವುದಿಲ್ಲ. ನಿರೀಕ್ಷೆ ಮಾಡುವವರಿಗೆ ನಿರಾಸೆಯಾಗುತ್ತದೆ” ಎಂದರು.
ವೇದಿಕೆಯಲ್ಲಿ ಅಳವಾಡಿಸಿದ್ದ ಎಲ್ ಸಿ ಡಿ ಪರದೆಯಲ್ಲಿ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಪೋಟೋ ಇಲ್ಲದ್ದಕ್ಕೆ ಕುಪಿತಗೊಂಡ ಅಭಿಮಾನಿಗಳು ಯಡಿಯೂರಪ್ಪಗೆ ಜೈಕಾರ ಹಾಕಿ ಫೋಟೋ ಹಾಕುವಂತೆ ಒತ್ತಾಯಿಸಿದರು. ಕೆಲಹೊತ್ತು ಇದು ಗೊಂದಲಕ್ಕೂ ಕಾರಣವಾಯಿತು.
ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪಗೆ ಮತ್ತೆ ಸಂಕಷ್ಟ ಎದುರಾಗಿದೆ. ಬಿಎಸ್‌ವೈ ಕುಟುಂಬದ ವಿರುದ್ಧದ ಭ್ರಷ್ಟಾಚಾರ ಆರೋಪ ಪ್ರಕರಣ ಸಂಬಂಧ ಲೋಕಾಯುಕ್ತದಲ್ಲಿ ಎಫ್ಐಆರ್ ದಾಖಲಿಸುವಂತೆ ಜನಪ್ರತಿನಿಧಿ ವಿಶೇಷ ನ್ಯಾಯಾಲಯದಿಂದ ಆದೇಶಿಸಿದೆ.
ಇಂದು ಸಿದ್ದಗಂಗಾ ಮಠದ ಶ್ರೀಗಳ ಸಮ್ಮುಖದಲ್ಲಿ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಹುಟ್ಟುಹಬ್ಬ(BS Yeddyurappa Birthday) ಆಚರಣೆ ಮಾಡಲಿದ್ದು, ಕಾವೇರಿ ನಿವಾಸದಲ್ಲಿ ಅಭಿಮಾನಿಗಳು ಸೇರಿದ್ದಾರೆ. ಹಾಗೂ ಬೃಹತ್ ಕೇಕ್ ಕಟ್ ಮಾಡಲಿದ್ದಾರೆ, ಇದೆ ಸಂದರ್ಭದಲ್ಲಿ ರೈತರಿಗೆ ಒಟ್ಟು 11 ಟ್ರಾಕ್ಟರ್ ಗಿಫ್ಟ್ ನೀಡಲಿದ್ದಾರೆ.
ಬಿಜೆಪಿಗೆ ಬಿ.ಎಸ್.ಯಡಿಯೂರಪ್ಪ ಬೇಡದ ಕೂಸಾಗಿದ್ದಾರೆ, ಅವರನ್ನು ಕಿತ್ತುಹಾಕಲು ಹೈಕಮಾಂಡ್ ಸಿದ್ಧ ಇದೆ, ಮತ್ತು ರಾಜ್ಯದ ನಾಯಕರು ಕೂಡಾ ಕೊಡವಿಕೊಳ್ಳಲು ಸಿದ್ಧ ಇದ್ದಾರೆ ಎಂದು ರಾಜ್ಯ ಪ್ರತಿಪಕ್ಷದ ನಾಯಕ ಸಿದ್ಧರಾಮಯ್ಯ ಅಭಿಪ್ರಾಯಪಟ್ಟಿದ್ದಾರೆ.
ಯಡಿಯೂರಪ್ಪ ಅವರೇ ಸಿ.ಎಂ ಆಗಿ ಮುಂದುವರೆಯುತ್ತಾರೆ ಎಂದು ಅಮಿತ್ ಶಾ ಹೇಳಿರುವುದು ಬರೀ ಬಾಯಿಮಾತು. ಆರ್.ಎಸ್.ಎಸ್ ನಾಯಕರು ಹೇಳುವ ಪ್ರಕಾರ ಏಪ್ರಿಲ್ ನಂತರ ಯಡಿಯೂರಪ್ಪ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸ್ತಾರೆ ಎಂದು ಪ್ರತಿಪಕ್ಷದ ನಾಯಕ ಸಿದ್ಧರಾಮಯ್ಯ ಹೇಳಿದ್ದಾರೆ.
ರಾಜರಾಜೇಶ್ವರಿ ನಗರ ಶಾಸಕ ಮುನಿರತ್ನಗೆ ಸಚಿವ ಸ್ಥಾನ ಸಿಗಬೇಕಿತ್ತಾದರೂ, ಕಾರಣಾಂತರದಿಂದ ಸಿಕ್ಕಿಲ್ಲ. ಇನ್ನು ಒಂದೂವರೆ ತಿಂಗಳಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಮುನಿರತ್ನಗೆ ಸಚಿವ ಸ್ಥಾನ ನೀಡುವರೆಂಬ ವಿಶ್ವಾಸವಿದೆ
ಸಿ.ಡಿ ಮತ್ತು ಹಣ ಕೊಟ್ಟವರದ್ದು ಮತ್ತೊಂದು ಕೋಟಾ. ಮುಖ್ಯಮಂತ್ರಿ ಯಡಿಯೂರಪ್ಪ ಅವ್ರ ಸಿಡಿ ಇಟ್ಟುಕೊಂಡು ಯಾರೆಲ್ಲಾ ಬ್ಲ್ಯಾಕ್ ಮೇಲ್ ಮಾಡ್ತಾರೋ ಅವ್ರಿಗೆ ಮಂತ್ರಿಗಿರಿ ನೀಡಿದ್ದಾರೆ' ಎಂದು ಯತ್ನಾಳ್ ಆರೋಪಿಸಿದ್ದಾರೆ.