ಬೆಕ್ಕು ಕಣ್ಮುಚ್ಚಿ ಹಾಲು ಕುಡಿದ್ರೆ ಗೊತ್ತಾಗಲ್ವೇ? ನೇರವಾಗಿ ನಾವೇ ಕುದುರೆ ವ್ಯಾಪಾರ ಮಾಡಿದ್ದು ಅಂತ ಹೇಳಿ. ಯಡಿಯೂರಪ್ಪನವರೇ, ಕುದುರೆಗಳನ್ನು ಕಟ್ಕೊಂಡು ಸರ್ಕಾರ ರಚನೆ ಮಾಡಲು ಆಗಲ್ಲ ಎಂದು ವಿಧಾನಸಭೆಯಲ್ಲಿ ಸಿದ್ದರಾಮಯ್ಯ ಹೇಳಿದರು.
ವಿಶ್ವಾಸ ಮತ ಚಲಾಯಿಸುವುದಾಗಿ ಹೇಳಿದ್ದ ಸಿಎಂ ಕುಮಾರಸ್ವಾಮಿಯವರ ಮಾತಿಗೆ ಪ್ರತಿಕ್ರಿಯಿಸಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವಿಶ್ವಾಸ ನಿರ್ಣಯವನ್ನು ಎದುರಿಸಲು ಸಿದ್ಧ ಎಂದು ಹೇಳಿದರು.
ಡಿ.ಕೆ.ಶಿವಕುಮಾರ್ ಸ್ಪೀಕರ್ ಕಚೇರಿಯಲ್ಲಿ ಶಾಸಕರು ನೀಡಿರುವ ರಾಜೀನಾಮೆ ಪತ್ರಗಳನ್ನು ಹರಿದು ಹಾಕಿದ್ದಾರೆ ಇದು ಖಂಡನೀಯ ಎಂದು ಬಿ.ಎಸ್ ಯಡಿಯೂರಪ್ಪ ವಾಗ್ದಾಳಿ ನಡೆಸಿದ್ದಾರೆ. "ಜನರು ಡಿ.ಕೆ.ಶಿವಕುಮಾರ್ ವರ್ತಿಸುತ್ತಿರುವ ರೀತಿ ನೋಡುತ್ತಿದ್ದಾರೆ. ಅವರು ರಾಜೀನಾಮೆ ನೀಡಲು ಹೋಗಿದ್ದ ಸ್ಪೀಕರ್ ಕಚೇರಿಯೊಳಗಿನ ಕೆಲವು ಶಾಸಕರ ರಾಜೀನಾಮೆ ಪತ್ರಗಳನ್ನು ಹರಿದು ಹಾಕಿದರು. ಇದು ಖಂಡನೀಯ" ಎಂದು ಯಡಿಯೂರಪ್ಪ ಸುದ್ದಿಗಾರರಿಗೆ ಹೇಳಿದರು.
ಹಳ್ಳಿಗಳಲ್ಲಿ ನಿಷೇಧಾಜ್ಞೆ ಜಾರಿ ಮಾಡಿ ಜನರ ಭಾವನೆಗಳನ್ನು ಹತ್ತಿಕ್ಕಿ ಸಿಎಂ ಗ್ರಾಮ ವಾಸ್ತವ್ಯ ಮಾಡುತ್ತಿರುವುದು ಪ್ರಜಾಪ್ರಭುತ್ವ ವಿರೋಧಿ ಮತ್ತು ಜನ ವಿರೋಧಿ ಕ್ರಮ ಎಂದು ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.
ಗ್ರಾಮ ವಾಸ್ತವ್ಯ ಪ್ರಚಾರದ ಗಿಮಿಕ್ ಅಲ್ಲ. ಅಂತಃಕರಣ, ಮಾನವೀಯತೆ, ತಾಯಿ ಹೃದಯದಿಂದ ಸಮಸ್ಯೆ ಬಗೆಹರಿಸುವ ಇಚ್ಛಾಶಕ್ತಿ ಇದ್ದಲ್ಲಿ ಮಾತ್ರ ಗ್ರಾಮ ವಾಸ್ತವ್ಯ ಸಾಧ್ಯ ಎಂದು ಸಿಎಂ ಹೇಳಿದ್ದಾರೆ.
ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರ ಗ್ರಾಮವಾಸ್ತವ್ಯವನ್ನು ಕಟುವಾಗಿ ಟೀಕಿಸಿರುವ ಕರ್ನಾಟಕ ಬಿಜೆಪಿ 'ಗ್ರಾಮವಾಸ್ತವ್ಯ-ಶೂನ್ಯ ಸಾಧನೆ' ಎಂಬ ಪುಸ್ತಕವನ್ನು ಸೋಮವಾರ ಬಿಡುಗಡೆ ಮಾಡಿತು.
ಗ್ರಾಮದ ಜನರ ಸಮಸ್ಯೆಗಳ ಬಗ್ಗೆ ಗಮನಹರಿಸದ ಸಿಎಂ ಕುಮಾರಸ್ವಾಮಿ ಅವರ ಗ್ರಾಮ ವಾಸ್ತವ್ಯ ಒಂದು ಗಿಮಿಕ್ ಆಗಿದೆ. ಮೊದಲು ಇದನ್ನು ಬಿಟ್ಟು ಜನರ ಸಮಸ್ಯೆಗಳ ಬಗ್ಗೆ ಗಮನಹರಿಸಲಿ ಎಂದು ಹೇಳಿದರು.
ರಾಜ್ಯದಲ್ಲಿ ನೀರಿನ ಬಿಕ್ಕಟ್ಟಿನ ಸಮಸ್ಯೆ ಇದೆ ಆದರ ಬಗ್ಗೆ ಯಾವುದೇ ಕ್ರಮಗೊಳ್ಳದೆ ರಾಜಕೀಯ ನಾಟಕವಾಡುತ್ತಿದ್ದಾರೆ ಎಂದು ಮಾಜಿ ಸಿಎಂ ಯಡಿಯೂರಪ್ಪ ಮುಖ್ಯಮಂತ್ರಿ ಕುಮಾರಸ್ವಾಮಿ ವಿರುದ್ಧ ಆರೋಪಿಸಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.