ಬಾಂಬ್ ಸ್ಪೋಟದ ವಿಷಯವನ್ನು ರಾಜಕೀಯವಾಗಿ ದುರ್ಬಳಕೆ ಮಾಡಿಕೊಳ್ತಿದ್ದಾರೆ ಅಂತ ನಾನು ಹೇಳಿದ್ದೇನೆ. ಇಂತ ರಾಜಕಾರಣದಿಂದ ಎಲ್ಲರಿಗೂ ದ್ರೋಹ ಬಗೆಯುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ನಮ್ಮ ಗೌರವ ನಾವೇ ಹಾಳು ಮಾಡಿಕೊಳ್ತಿದ್ದೀವಿ ಅನ್ನುವ ಅಭಿಪ್ರಾಯದಲ್ಲಿ ನಾನು ಹೇಳಿಕೆ ಕೊಟ್ಟಿದ್ದೇನೆ ಎಂದರು.
ಭ್ರಷ್ಟಾಚಾರವನ್ನು ಹುಟ್ಟಿಹಾಕಿದ್ದೇ ಕಾಂಗ್ರೆಸ್ ಪಕ್ಷ. ಲೋಕಾಯುಕ್ತವನ್ನು ಮುಚ್ಚಿ ಎಸಿಬಿಯನ್ನು ಪ್ರಾರಂಭಿಸಿದರು. 50 ಕ್ಕಿಂತ ಹೆಚ್ಚು ಪ್ರಕರಣಗಳು ಕಾಂಗ್ರೆಸ್ ನವರ ಮೇಲಿತ್ತು. ಅವುಗಳನ್ನು ಮುಚ್ಚಿಹಾಕಿದರು ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದರು.
ಮುರುಘಾಶ್ರೀಗಳು ಫೋಕ್ಸೋ ಪ್ರಕರಣದಲ್ಲಿ ಜೈಲು ಸೇರಿದ್ದು. ಹೀಗಾಗಿ, ಮುರುಘಾ ಮಠದ ಪೀಠ ತ್ಯಾಗಕ್ಕೆ ತುಂಬಾ ಒತ್ತಡ ಹೆಚ್ಚಾಗಿದೆ. ಇದರ ಮಧ್ಯ ಮಾಜಿ ಸಚಿವೆ ರಾಣಿ ಸತೀಶ ಸಂಭಾಷಣೆಯ ಆಡಿಯೋ ಒಂದು ಭಾರಿ ವೈರಲ್ ಆಗಿದೆ.
ಅ.14 ರಂದು ಮಹಾ ಕುಂಭಮೇಳದ ಉದ್ಘಾಟನಾ ಕಾರ್ಯಕ್ರಮ ನಡೆಯಲಿದೆ. ಕಾರ್ಯಕ್ರಮವನ್ನು ರಾಜ್ಯಸಭಾ ಸದಸ್ಯರು ಹಾಗೂ ಶ್ರೀ ಕ್ಷೇತ್ರ ಧರ್ಮಸ್ಥಳ ಧರ್ಮಾಧಿಕಾರಿಗಳಾದ ಡಾ.ಡಿ ವೀರೇಂದ್ರ ಹೆಗ್ಗಡೆ ರವರು ಉದ್ಘಾಟನೆಯನ್ನು ಮಾಡಲಿದ್ದಾರೆ. ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ರಾಜ್ಯ ಸಚಿವರಾದ ಎ.ನಾರಾಯಣಸ್ವಾಮಿ ರವರು ಧ್ವಜಾರೋಹಣ ನೆರವೇರಿಸಲಿದ್ದಾರೆ. ರೇಷ್ಮೆ, ಯುವಸಬಲೀಕರಣ ಹಾಗೂ ಕ್ರೀಡಾ ಸಚಿವರಾದ ಡಾ. ನಾರಾಯಣಗೌಡ ರವರು ಅಧ್ಯಕ್ಷತೆಯನ್ನು ವಹಿಸಲಿದ್ದಾರೆ.
ಮಲೆ ಮಹದೇಶ್ವರ ಬೆಟ್ಟದಿಂದ ಹೊರಟಿರುವ 3 ಜ್ಯೋತಿಗಳು ಇಂದು (ಅ. 13) ತ್ರೀವೇಣಿ ಸಂಗಮದಲ್ಲಿ ಸೇರಲಿವೆ. ಇಂದು ಬೆಳಗ್ಗೆ 5ಗಂಟೆಗೆ ಬ್ರಾಹ್ಮಿ ಮುಹೂರ್ತದಲ್ಲಿ ದೇವಾಲಯ ಪ್ರವೇಶ, ಭಗವಾಧ್ವಜ ಸ್ಥಾಪನೆ, ಹೋಮ ಹವನಗಳ ಮೂಲಕ ದೇವಾಲಯದಲ್ಲಿ ಪೂಜಾ ಕಾರ್ಯಕ್ರಮಗಳು ಆರಂಭವಾಗಿವೆ. ಮಧ್ಯಾಹ್ನ 2.30ಕ್ಕೆ ಕೆ.ಆರ್.ಪೇಟೆ ಪಟ್ಟಣದಲ್ಲಿ ಕರ್ನಾಟಕ ಹಾಗೂ ಹೊರ ರಾಜ್ಯಗಳ 112 ಸಾಂಸ್ಕೃತಿಕ ಕಲಾತಂಡಗಳೊಂದಿಗೆ 3 ಜ್ಯೋತಿ ರಥಗಳ ಮೆರವಣಿಗೆ ಜರುಗಲಿದೆ.
ಬಚ್ಚಾ ಅಮಿತ್ ಶಾ ಎದುರು ನೀವು ಕೈಕಟ್ಟಿ ನಿಲ್ಲುವುದು ಸರಿಯೇ.. ಮೋದಿಯೂ ನಿಮ್ಮ ಮುಂದೆ ಬಚ್ಚಾ ಅಲ್ಲವೇ ಎಂದು ರಾಜ್ಯ ಕಾಂಗ್ರೆಸ್ ಮಾಜಿ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ವಿರುದ್ಧ ಗುಡುಗಿದೆ.
ಪಿಎಂ ಮೋದಿಯವರ ಭದ್ರತೆಯ ಹಿನ್ನೆಲೆಯಲ್ಲಿ ಮತ್ತು ಜನರಿಗೆ ಸಮಸ್ಯೆಯಾಗದಂತೆ ಮಂಗಳೂರಲ್ಲಿ ಸಂಚಾರ ವ್ಯವಸ್ಥೆಯಲ್ಲಿ ಬದಲಾವಣೆ ಮಾಡಲಾಗಿದೆ. ವಿವಿಧೆಡೆಯಿಂದ ಸಮಾವೇಶಕ್ಕೆ ಆಗಮಿಸುವ ವಾಹನಗಳಿಗೂ ಪ್ರತ್ಯೇಕ ಪಾರ್ಕಿಂಗ್ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ.
ಬೇಬಿ ಗ್ರಾಮದಲ್ಲಿ ಇಂದು ಮರಿಶಿವ ಯೋಗಿ ರಥೋತ್ಸವ ಸಮಾರಂಭಕ್ಕೆ ಆಗಮಿಸಿದ ಬಿ.ಎಸ್.ಯಡಿಯೂರಪ್ಪ ಅವರು ಸಂಸದೆ ಸುಮಲತಾ ಅವರನ್ನು ಪ್ರೀತಿಯಿಂದ ಕೆನ್ನೆ ಮಾತನಾಡಿಸಿ ಸಭೆಯಿಂದ ಹೊರಟು ಹೋದರು.