ಕೃಷಿ ಕಾನೂನಿನ ವಿರುದ್ಧ ರೈತ ಸಮುದಾಯದ ಆಕ್ರೋಶ, ಸಂಪುಟ ವಿಸ್ತರಣೆ ಗೊಂದಲ, ಗೋ ಹತ್ಯೆ ನಿಷೇಧ ಸುಗ್ರೀವಾಜ್ಞೆ, ಕರೋನಾ ಸಂಕಟಗಳ ನಡುವೆ ವಿಧಾನಮಂಡಲದ ಅಧಿವೇಶನ ಇಂದಿನಿಂದ ಆರಂಭವಾಗಲಿದೆ.
ಯಡಿಯೂರಪ್ಪ ಸಚಿವ ಸಂಪುಟದಲ್ಲಿ ಖಾತೆ ಬಿಕ್ಕಟ್ಟು ಸದ್ಯಕ್ಕೆ ಬಗೆ ಹರಿಯುವ ಯಾವ ಲಕ್ಷಣಗಳೂ ಕಾಣುತ್ತಿಲ್ಲ. ಮೂಲಗಳ ಪ್ರಕಾರ ಸಚಿವ ಮುನಿಸು ನಿವಾರಣೆಗೆ ಯಡಿಯೂರಪ್ಪ ಮತ್ತೊಂದು ಸರ್ಕಸ್ ಮಾಡಲಿದ್ದಾರೆ.
'ಅಕ್ರಮ ಗಣಿಗಾರಿಕೆ ನಡೆಸುತ್ತಿರುವವರು ಅರ್ಜಿ ಸಲ್ಲಿಸಿ ಪರವಾನಿಗೆ ಪಡೆಯಬಹುದು ಎಂದು ಸ್ವತಃ ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿದ್ದಾರೆ. ಅಕ್ರಮ ಗಣಿಗಾರಿಕೆಯೇ ಅಪರಾಧ. ಅದಕ್ಕೆ ಏನು ಶಿಕ್ಷೆ ? ಅರ್ಜಿ ಹಾಕಿಕೊಂಡು ಅಕ್ರಮವನ್ನು ಸಕ್ರಮ ಮಾಡಿಕೊಳ್ಳಿ ಎಂದು ಜವಾಬ್ದಾರಿಯುತ ಸ್ಥಾನದಲ್ಲಿ ಇರುವವರು ಹೇಳಬಹುದೇ?' ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.
ಮುಖ್ಯಮಂತ್ರಿ ಯಡಿಯೂರಪ್ಪ ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಲು ಹಾಲಿ ಸಚಿವರ ಖಾತೆಯಲ್ಲೂ ಕೆಲ ಬದಲಾವಣೆ ಮಾಡಿದ್ದಾರೆ. ಮುಖ್ಯಮಂತ್ರಿ ಯಡಿಯೂರಪ್ಪ ಹೊರಡಿಸಿರುವ ಆದೇಶದ ಪ್ರಕಾರ ಸಚಿವರು ಮತ್ತು ಅವರ ಖಾತೆಗಳು ಈ ಕೆಳಕಂಡಂತಿವೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.