ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡಗಳ ಸರ್ಕಾರಿ ನೌಕರರ ಬಡ್ತಿ ವಿಚಾರವು ಅನೇಕ ವರ್ಷಗಳಿಂದ ಬಿಡಿಸಲಾಗದ ಸಮಸ್ಯೆಯಾಗಿತ್ತು. ಹಿಂದೆ ಇದ್ದ ಕಾಯ್ದೆಗಳಲ್ಲಿನ ಕೆಲವು ನ್ಯೂನ್ಯತೆಗಳಿಂದಾಗಿ ನ್ಯಾಯಾಲಯಗಳೂ ಸಹ ಈ ಸಮಸ್ಯೆಯನ್ನು ಪರಿಹರಿಸಲು ದಶಕಗಟ್ಟಲೆ ಕಾಲಾವಧಿ ತೆಗೆದುಕೊಂಡಿದ್ದವು- ಸಿದ್ದರಾಮಯ್ಯ
ತಾಂತ್ರಿಕ ಸಲಹಾ ಸಮಿತಿ ಕೊಟ್ಟ ವರದಿ ಹಾಗೂ ತಜ್ಞರು ಕೊಟ್ಟ ಸಲಹೆ ಮೇರೆಗೆ ಜನವರಿ 1ರಿಂದ ಮೊದಲ ಹಂತದಲ್ಲಿ 10 ಮತ್ತು 12ನೇ ತರಗತಿಗಳು ಹಾಗೂ ಎರಡನೇ ಹಂತದಲ್ಲಿ ಹಂತದಲ್ಲಿ 9 ಮತ್ತು 11ನೇ ತರಗತಿಗಳನ್ನು ಆರಂಭಿಸುವ ತೀರ್ಮಾನ ಕೈಗೊಳ್ಳಲಾಗಿದೆ ಎಂದು ಸಿಎಂ ಯಡಿಯೂರಪ್ಪ ತಿಳಿಸಿದ್ದಾರೆ.
ನಾಳಿನ ಸಭೆಯಲ್ಲಿ ಶಿಕ್ಷಣ, ಆರೋಗ್ಯ, ಗ್ರಾಮೀಣಾಭಿವೃದ್ಧಿ, ಸಮಾಜ ಕಲ್ಯಾಣ, ಗೃಹ ಇಲಾಖೆಗಳಿಂದ ಹಾಗೂ ಶಾಲೆಗಳನ್ನು ಆರಂಭಿಸುವ ವಿಷಯಕ್ಕೆ ಸಂಬಂಧಿಸಿದಂತೆ ರಚಿಸಿರುವ ತಾಂತ್ರಿಕ ಸಮಿತಿಯ ಸಲಹೆಗಳನ್ನು ಪರಿಶೀಲಿಸಲಾಗುತ್ತದೆ.
ಇಂದು ಕರ್ನಾಟಕ ಬಂದ್ ಕರೆಯಲಾಗಿದೆ. ಆದರೂ ಎಂದಿನಂತೆ ಬೆಂಗಳೂರು ಮೆಟ್ರೋ ಕಾರ್ಯ ನಿರ್ವಹಿಸುತ್ತಿದೆ. ಸರ್ಕಾರಿ ಸಾರಿಗೆ ವ್ಯವಸ್ಥೆ ಇರಲಿದೆ ಎಂದು ಸರ್ಕಾರ ಹೇಳಿದೆ. ಆದರೆ ಆಟೋ, ಟ್ಯಾಕ್ಸಿ ಚಾಲಕರ ಸಂಘಗಳು ಬಂದ್ ಗೆ ಬೆಂಬಲ ನೀಡಿರುವುದರಿಂದ ಸಂಚಾರದಲ್ಲಿ ವ್ಯತ್ಯಯವಾಗುವ ಸಾಧ್ಯತೆ ಇದೆ.
ಕೋವಿಡ್ -19 ಎರಡನೇ ಅಲೆ ಬರುತ್ತಿದ್ದು ಅದನ್ನು ನಿಯಂತ್ರಿಸಲು ಮುಂದಿನ 45 ದಿವಸಗಳು ಬಹಳ ನಿರ್ಣಾಯಕವಾಗಿವೆ. 45 ದಿನಗಳ ಅವಧಿಯಲ್ಲಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವುದು ಅತ್ಯಗತ್ಯ ಎಂದು ತಜ್ಞರ ಸಮಿತಿ ಸಲಹೆ ನೀಡಿದೆ.
ಪ್ರತಿ ದಿನವೂ ಬೆಲೆ ಏರಿಕೆ ಆಗುತ್ತಿದೆ. ಜನ ಸಾಮಾನ್ಯರ ಜೀವನವೇ ದುಸ್ಸರವಾಗಿರುವಾಗ ರಾಜ್ಯ ಸರ್ಕಾರ ವಿದ್ಯುತ್ ದರವನ್ನು ಪ್ರತಿ ಯೂನಿಟ್ ಗೆ 40 ಪೈಸೆ ಹೆಚ್ಚಳ ಮಾಡಿದೆ. ಕೊರೊನಾ ವರ್ಷದಲ್ಲಿ ಜನರು ತುಂಬ ಸಂಕಷ್ಟ ಎದುರಿಸುತ್ತಿದ್ದಾರೆ. ಆದುದರಿಂದ ಕೂಡಲೇ ವಿದ್ಯುತ್ ದರ ಇಳಿಕೆ ಮಾಡುಬೇಕು ಎಂದು ಒತ್ತಾಯ ಮಾಡಿದರು.
ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ (BS Yediyurappa) ರಾಜ್ಯ ಸಚಿವ ಸಂಪುಟ ಪುನರ್ರಚನೆ ಬಗ್ಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡ (JP Nadda) ಅವರೊಂದಿಗೆ ಚರ್ಚಿಸಲು ನವೆಂಬರ್ 18ರಂದು ದೆಹಲಿಗೆ ಆಗಮಿಸಿದ್ದರು.
ನವದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಯಡಿಯೂರಪ್ಪ, ಮರಾಠ ಅಭಿವೃದ್ಧಿ ನಿಗಮ (Marathi development authority) ಮಾಡಿರುವುದನ್ನು ಬಲವಾಗಿ ಸಮರ್ಥಿಸಿಕೊಂಡರಲ್ಲದೆ ಯಾರಾದರೂ ಬಲವಂತದಿಂದ ಬಂದ್ ಮಾಡಲು ಪ್ರಯತ್ನಿಸಿದರೆ ಅಂಥವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.
ಮರಾಠ ಅಭಿವೃದ್ಧಿ ನಿಗಮ ಹಾಗೂ ವೀರಶೈವ-ಲಿಂಗಾಯತ ಅಭಿವೃದ್ಧಿ ನಿಗಮ ಸ್ಥಾಪಿಸಿರುವ ರಾಜ್ಯ ಸರ್ಕಾರದ ನಡೆಗೆ ವ್ಯಾಪಾಕ ಖಂಡನೆಯಾಗುತ್ತಿದ್ದು, ವಿಪಕ್ಷ ನಾಯಕ ಸಿದ್ದರಾಮಯ್ಯ ಸರಣಿ ಟ್ವೀಟ್ ಮಾಡಿ ಖಡಕ್ ಆಗಿ ಪ್ರಶ್ನಿಸಿದ್ದಾರೆ.
ರೈತರ ಆದಾಯ ದುಪ್ಪಟ್ಟುಗೊಳಿಸ್ತೀವಿ ಅಂತ ಭರವಸೆ ನೀಡಿ, ಈಗ ಭತ್ತ, ಮೆಕ್ಕೆಜೋಳ ಮುಂತಾದ ಬೆಳೆಗಳಿಗೆ ಸರ್ಕಾರ ಬೆಂಬಲ ಬೆಲೆಯನ್ನೂ ನೀಡದೆ ರೈತರನ್ನು ಕಷ್ಟಕ್ಕೆ ತಳ್ಳಿ ಕೈತೊಳೆದುಕೊಂಡಿದೆ ಎಂದು ರಾಜ್ಯ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ರಾಜ್ಯ ಬಿಜೆಪಿ ಸರ್ಕಾರದ ಮೇಲೆ ವಾಗ್ದಾಳಿ ನಡೆಸಿದ್ದಾರೆ.
ಬಿಜೆಪಿಯಲ್ಲಿ ನರೇಂದ್ರ ಮೋದಿ ಮತ್ತು ಅಮಿತ್ ಶಾ ಯುಗ ಆರಂಭವಾದ ಬಳಿಕ ದೆಹಲಿ ಹೊರತುಪಡಿಸಿ ಯಾವ ರಾಜ್ಯದಲ್ಲೂ ಮುಖ್ಯಮಂತ್ರಿ ಅಭ್ಯರ್ಥಿ ಎಂದು ಯಾರನ್ನು ಘೋಷಿಸಿರಲಿಲ್ಲ ಅಥವಾ ಬಿಂಬಿಸಿರಲಿಲ್ಲ.
ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಸಿಎಂ ಸಿದ್ದರಾಮಯ್ಯ, ಈ ವರ್ಷ ಶಾಲೆಗಳನ್ನ ಆರಂಭಿಸುವುದು ಬೇಡ. ಆನ್ಲೈನ್ ಕ್ಲಾಸ್ (Online Class) ಮಾಡಿ ಎಲ್ಲರನ್ನು ಪಾಸ್ ಮಾಡಲಿ. ಸಂಪೂರ್ಣ ಕೊರೊನಾ ಮುಕ್ತವಾದ ನಂತರ ಶಾಲೆಗಳನ್ನ ಆರಂಭಿಸಲಿ. ತರಾತುರಿಯಲ್ಲಿ ಶಾಲೆ ಆರಂಭಿಸೋದು ಬೇಡ ಎಂದು ಹೇಳಿದರು.
ಪಟಾಕಿ ಹಚ್ಚಿದರೆ ಅದರ ಧೂಳು ಮತ್ತು ಹೊಗೆಯಿಂದ COVID-19 ರೋಗಿಗಳ ಆರೋಗ್ಯದಲ್ಲಿ ಮತ್ತಷ್ಟು ಸಮಸ್ಯೆಯಾಗಲಿದೆ. ಇದು ಕೊರೋನಾ ವೈರಸ್ ಇನ್ನಷ್ಟು ತೀವ್ರವಾಗಿ ಹರಡಲು ಕಾರಣವಾಗಲಿದೆ. ಈಗಾಗಲೇ ರಾಜ್ಯದಲ್ಲಿ ಪ್ರತಿದಿನವೂ ಕೊರೋನಾಕ್ಕೆ ತುತ್ತಾಗುತ್ತಿರುವವರ, ಅದರಿಂದ ಸಾವನ್ನಪ್ಪುತ್ತಿರುವವರ ಸಂಖ್ಯೆ ಹೆಚ್ಚಾಗಿದೆ.
#ಉತ್ತರಕೊಡಿ_ಬಿಎಸ್ವೈ : ರಾಜ್ಯದಲ್ಲಿ ಎರಡು ಉಪಚುನಾವಣಾ ಮತದಾನಕ್ಕೆ ಕೆಲವೇ ಗಂಟೆಗಳು ಬಾಕಿ ಇರುವಂತೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಸರಣಿ ಟ್ವೀಟ್ ಮಾಡಿದ್ದಾರೆ. ಈ ಸರಣಿ ಟ್ವಿಟ್ ಗಳ ಮೂಲಕ ಮುಖ್ಯಮಂತ್ರಿ ಯಡಿಯೂರಪ್ಪ ಮತ್ತು ಅವರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.
2008-09ರಿಂದ 2013-14ರ ವರೆಗಿನ ಬಿಜೆಪಿ ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಸಾಲದ ಪ್ರಮಾಣ ಶೇಕಡಾ 212ರಷ್ಟು ಹೆಚ್ಚಿತ್ತು. 2013-14ರಿಂದ 2018-19ರ ನಮ್ಮ ಸರ್ಕಾರದ ಅವಧಿಯಲ್ಲಿ ಸಾಲದ ಪ್ರಮಾಣ ಹೆಚ್ಚಿದ್ದು ಕೇವಲ ಶೇಕಡಾ 65ರಷ್ಟು ಮಾತ್ರ- ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ
By accepting cookies, you agree to the storing of cookies on your device to enhance site navigation, analyze site usage, and assist in our marketing efforts.