ಕರ್ನಾಟಕ ರಾಜ್ಯ ಸರ್ಕಾರದ ಸಚಿವ ಸಂಪುಟವು ಕರ್ನಾಟಕ ಭೂ ಸುಧಾರಣಾ (ತಿದ್ದುಪಡಿ) ಸುಗ್ರೀವಾಜ್ಞೆ 2020 ಅನ್ನು ಕರ್ನಾಟಕ ಭೂ ಸುಧಾರಣಾ ಕಾಯ್ದೆ 1961 ಕ್ಕೆ ತಿದ್ದುಪಡಿ ಮಾಡಿ, ಕೃಷಿಕರಲ್ಲದವರಿಗೆ ಕೃಷಿಯನ್ನು ಖರೀದಿಸುವ ಮೇಲಿನ ನಿರ್ಬಂಧಗಳನ್ನು ತೆಗೆದುಹಾಕಿದೆ.
ರಾಜ್ಯದ ಕೆಲ ಜಿಲ್ಲೆಗಳಲ್ಲಿ ಮೂರು ದಿನಗಳಿಂದ ಸುರಿಯುತ್ತಿರುವ ಮಳೆಯಿಂದಾಗಿ ಪ್ರವಾಹ ಬಂದಿದ್ದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಪ್ರವಾಹ ಪೀಡಿತ ಜಿಲ್ಲೆಗಳ ಉಸ್ತುವಾರಿ ಸಚಿವರಿಗೆ 'ಕೂಡಲೇ ನಿಮ್ಮ ನಿಮ್ಮ ಉಸ್ತುವಾರಿ ಜಿಲ್ಲೆಗಳಿಗೆ ಹೋಗಿ ಪರಿಹಾರ ಕಾರ್ಯದಲ್ಲಿ ತೊಡಗಿಸಿಕೊಳ್ಳಿ' ಎಂದು ಸೂಚನೆ ನೀಡಿದ್ದರು.
ಸದ್ಯ ಕೋವಿಡ್-19 (COVID-19) ಪಾಸಿಟಿವ್ ಬಂದು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಯಡಿಯೂರಪ್ಪ, ಆಸ್ಪತ್ರೆಯಿಂದಲೇ ಉಸ್ತುವಾರಿ ಸಚಿವರಿಗೆ ಪ್ರವಾಹ ಪರಿಸ್ಥಿರಿ ಎದುರಿಸಲು ಸಜ್ಜಾಗುವಂತೆ ಸೂಚನೆ ನೀಡಿದ್ದಾರೆ.
ಮಣಿಪಾಲ್ ಆಸ್ಪತ್ರೆಯ ತಾವಿರುವ ವಾರ್ಡಿನಲ್ಲೇ ಟಿವಿ ವ್ಯವಸ್ಥೆ ಮಾಡಲಾಗಿದ್ದು ಮುಖ್ಯಮಂತ್ರಿ ಯಡಿಯೂರಪ್ಪ ಅಲ್ಲಿಂದಲೇ ಶ್ರೀರಾಮ ಜನ್ಮಭೂಮಿಯ ಪೂಜಾವಿಧಾನಗಳನ್ನು ಕಣ್ಣು ತುಂಬಿಕೊಳ್ಳುತ್ತಿದ್ದಾರೆ.
COVID -19 ಪಾಸಿಟಿವ್ ಬಂದ ಹಿನ್ನಲೆಯಲ್ಲಿ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿರುವ ಮುಖ್ಯಮಂತ್ರಿ ಯಡಿಯೂರಪ್ಪ ಈಗಾಗಲೇ ಆಸ್ಪತ್ರೆಯಲ್ಲೇ ಮೂರು ರಾತ್ರಿ ಕಳೆದಿದ್ದಾರೆ. ಯೂರಿನರಿ ಇನ್ಫೆಕ್ಷನ್ ಆಗಿ ಇದೇ ಮಣಿಪಾಲ್ ಆಸ್ಪತ್ರೆಗೆ ದಾಖಲಾದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಎರಡು ರಾತ್ರಿಗಳನ್ನು ಕಳೆದಿದ್ದಾರೆ.
ಕವನದ ಮೂಲಕ ತಿರುಗೇಟು ನೀಡಿರುವ ಡಿ.ಕೆ. ಶಿವಕುಮಾರ್, ರಾಜ್ಯ ಬಿಜೆಪಿ ಸರ್ಕಾರದ್ದು ಬರೀ ಸುಳ್ಳಿನ ಸರಮಾಲೆ. ಮುಖ್ಯಮಂತ್ರಿ ಯಡಿಯೂರಪ್ಪ ಇಂದು ಕಿವಿಗೆ ಇಂಪಾದ ಮಾತುಗಳನ್ನು ಹೇಳಿದ್ದಾರೆ. ಆದರೆ ವಾಸ್ತವದಲ್ಲಿ ಹಾಗೆ ಮಾಡಿಲ್ಲ- ಡಿ.ಕೆ. ಶಿವಕುಮಾರ್
2018ರಲ್ಲಿ ಯಾರಿಗೂ ಬಹಮತ ಸಿಗದಿದ್ದಾಗ ರಾಜ್ಯದಲ್ಲಿ ಒಂದು ರೀತಿಯ ರಾಜಕೀಯ ಶೂನ್ಯತೆ, ಅಭಿವೃದ್ಧಿಹೀನ ವಾತಾವರಣ ಉಂಟಾಗಿತ್ತು. ಬಳಿಕ ಬಿಜೆಪಿ ಸರಕಾರ ಅಧಿಕಾರಕ್ಕೆ ಬಂದ ಕೂಡಲೇ ಉತ್ತರ ಕರ್ನಾಟಕದಲ್ಲಿ ಹಿಂದೆಂದೂ ಕಂಡರಿಯದ ಮಹಾ ಪ್ರವಾಹ ಉಂಟಾಯಿತು.
ರಾಜ್ಯ ಬಿಜೆಪಿ ಸರ್ಕಾರ ಒಂದು ವರ್ಷ ಪೂರೈಸಿದ ಹಿನ್ನಲೆಯಲ್ಲಿ 'ಸವಾಲುಗಳ ವರ್ಷ; ಪರಿಹಾರದ ಸ್ಪರ್ಶ' ಎಂಬ ಹೆಸರಿನಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಂದ ಹಿಡಿದು ಎಲ್ಲಾ ಸಚಿವರು ಪತ್ರಿಕಾಗೋಷ್ಠಿ ನಡೆಸಿ ಸರ್ಕಾರದ ಸಾಧನೆಯನ್ನು ಹೇಳುತ್ತಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.