ರಾಮನಗರದ ಹೆಸರನ್ನು ಬದಲಾಯಿಸಲು ಮುಂದಾಗಿರುವ ಯಡಿಯೂರಪ್ಪ ನೇತೃತ್ವದ ಸರ್ಕಾರದ ವಿರುದ್ಧ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ತಮ್ಮ ಅಧಿಕೃತ ಟ್ವಿಟ್ಟರ್ ಖಾತೆಯಲ್ಲಿ ಸರಣಿ ಟ್ವೀಟ್ ಮೂಲಕ ಟೀಕಾ ಪ್ರಹಾರ ನಡೆಸಿದ್ದಾರೆ. ಒಂದು ವೇಳೆ ಸರ್ಕಾರ ಹೆಸರು ಬದಲಾಯಿಸುವ ನಿರ್ಧಾರದಿಂದ ಹಿಂದೆ ಸರಿಯದಿದ್ದರೆ ಅನಿವಾರ್ಯವಾಗಿ ಹೋರಾಟ ಮಾಡಲಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.