ಬಜೆಟ್ ನಲ್ಲಿ ನಿರ್ಮಲಾ ಸೀತಾರಾಮನ್ 75 ವರ್ಷ ಮೇಲ್ಪಟ್ಟವರ ಆದಾಯ ತೆರಿಗೆಗೆ ಸಂಬಂಧಿಸಿದಂತೆ ಮಹತ್ವದ ಘೋಷಣೆ ಮಾಡಿದ್ದಾರೆ. ನಿರ್ಮಲಾ ಸೀತಾರಾಮನ್ ಘೋಷಣೆ ನಂತ್ರ ಈ ಬಗ್ಗೆ ಸಾಕಷ್ಟು ಚರ್ಚೆಯಾಗ್ತಿದೆ. ಇದ್ರ ಷರತ್ತಿನ ಬಗ್ಗೆ ತಿಳಿಯುವ ಅಗತ್ಯವಿದೆ.
7th Pay Commission - ಈ ಬಾರಿಯ ಬಜೆಟ್ ನಲ್ಲಿ ಮೋದಿ ಸರ್ಕಾರ ಸರ್ಕಾರಿ ನೌಕರರಿಗೆ ಭಾರಿ ನೆಮ್ಮದಿಯ ಸುದ್ದಿ ನೀಡಿದೆ. LTC Cash Voucher Scheme ಮೇಲೆ ಆದಾಯ ತೆರಿಗೆ ವಿನಾಯ್ತಿ ನೀಡುವುದಾಗಿ ಸರ್ಕಾರ ಹೇಳಿದೆ. ಲಕ್ಷಾಂತರ ಸರ್ಕಾರಿ ನೌಕರರಿಗೆ ಇದರ ನೇರ ಆರ್ಥಿಕ ಲಾಗ ಸಿಗಲಿದೆ. ಇದಲ್ಲದೆ ನಿಂತು ಹೋಗಿರುವ DAಗೂ ಕೂಡ ಮರು ಚಾಲನೆ ಸಿಗುವ ಸಾಧ್ಯತೆ ಇದೆ.
7th Pay Commission - ಕೊರೊನಾ ಪ್ರಕೋಪದ ಹಿನ್ನೆಲೆ LTC ಲಾಭ ಪಡೆಯದ ಕೇಂದ್ರ ಸರ್ಕಾರಿ ನೌಕರರಿಗೆ ಮೋದಿ ಸರ್ಕಾರ ನೆಮ್ಮದಿಯ ಸುದ್ದಿಯೊಂದನ್ನು ಪ್ರಕಟಿಸಿದೆ. ಈ ಕುರಿತು ಈ ಬಾರಿಯ ಬಜೆಟ್ ನಲ್ಲಿ ಘೋಷಣೆ ಮಾಡಿರುವ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ LTC (Leave Travel Concession) ಕ್ಯಾಶ್ ವೌಚರ್ ಮೇಲೆ ತೆರಿಗೆ ವಿಧಿಸಲಾಗುವುದಿಲ್ಲ ಎಂದು ಘೋಷಿಸಿದೆ.
Budget 2021 - ಫೆಬ್ರವರಿ 1 ರಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಬಜೆಟ್ (Budget 2021) ಮಂಡಿಸಿದ್ದಾರೆ. ಕರೋನಾ ಬಿಕ್ಕಟ್ಟಿನಿಂದ ಚೇತರಿಸಿಕೊಳ್ಳುತ್ತಿರುವ ಆರ್ಥಿಕತೆಗೆ ಹೊಸ ಉತ್ತೇಜನ ನೀಡುವ ಪ್ರಯತ್ನ ಅವರು ತಮ್ಮ ಬಜೆಟ್ ನಲ್ಲಿ ಮಾಡಿದ್ದಾರೆ, ಆರೋಗ್ಯ, ಕೃಷಿ, ಮೂಲಸೌಕರ್ಯ ಇವೆಲ್ಲ ಕ್ಷೇತ್ರಗಳಿಗೆ ಅವರು ಭರಪೂರ ಒತ್ತು ನೀಡಿದ್ದಾರೆ. ಆದರೆ ಶ್ರೀಸಾಮಾನ್ಯ ಹಾಗೂ ವೇತನ ಪಡೆಯುವ ವರ್ಗದ ಕೈಗಳನ್ನು ಮಾತ್ರ ಖಾಲಿ ಇರಿಸಲಾಗಿದೆ ಎಂಬ ಮಾತುಗಳು ಕೇಳಿಬರಲಾರಂಭಿಸಿವೆ. ಆದರೆ ಇದು ನಿಜಾನಾ?
2020-21ರಲ್ಲಿ 9.5% ಮತ್ತು 2022ರಲ್ಲಿ 6.8% ವಿತ್ತೀಯ ಕೊರತೆ ಇರುವುದಾಗಿ ಕೇಂದ್ರ ಸರ್ಕಾರ ಹೇಳಿದೆ. ಇದು ಒಂದು ಅರ್ಥವ್ಯವಸ್ಥೆಯಲ್ಲಿನ ಭೀಕರ ಪರಿಸ್ಥಿತಿಯೇ ಸರಿ. ಈ ಕೊರತೆಯನ್ನು ಸರ್ಕಾರ ಎಲ್ಲಿಂದ ತುಂಬಿಸಿಕೊಳ್ಳುತ್ತದೆ? ಎಂದು ಹೆಚ್ ಡಿಕೆ ಪ್ರಶ್ನಿಸಿದ್ದಾರೆ
Defence Budget 2021: 2021-22ರ ಬಜೆಟ್ ಅನ್ನು ಸಂಸತ್ತಿನಲ್ಲಿ ಮಂಡಿಸುವಾಗ ವಿತ್ತ ಸಚಿವ ನಿರ್ಮಲಾ ಸೀತಾರಾಮನ್ (Nirmala Sitharaman), 2021-22ರಲ್ಲಿ ರಕ್ಷಣಾ ಬಜೆಟ್ಗಾಗಿ 4 ಲಕ್ಷ 78 ಸಾವಿರ 196 ಕೋಟಿ ಹಂಚಿಕೆ ಮಾಡಲಾಗಿದೆ ಎಂದು ಹೇಳಿದ್ದಾರೆ.
ವಿತ್ತ ಸಚಿವರಾದ ನಿರ್ಮಲಾ ಸೀತಾರಾಮನ್ ಬಜೆಟ್ (Budget 2021) ಭಾಷಣ ಮುಗಿಸುತ್ತಿದ್ದಂತೆ ಚಿನ್ನ ಬೆಳ್ಳಿ ದರದಲ್ಲಿ ಭಾರೀ ಕುಸಿತ ದಾಖಲಾಗಿದೆ. 10 ಗ್ರಾಂ ಚಿನ್ನದ ಬೆಲೆಯಲ್ಲಿ ಸುಮಾರು 1500 ರೂ ಇಳಿಮುಖವಾಗಿದೆ
Budget 2021: ಈ ಬಜೆಟ್ನಲ್ಲಿ ಮನೆ ಖರೀದಿದಾರರ ಬಗ್ಗೆ ಒಳ್ಳೆಯ ಸುದ್ದಿ ಇದೆ. ಆದಾಯ ತೆರಿಗೆ ಕಾಯ್ದೆಯ ಸೆಕ್ಷನ್ 80 ಇಇಎ ಅಡಿಯಲ್ಲಿ ನೀಡಲಾಗುತ್ತಿದ್ದ ಹೆಚ್ಚುವರಿ ತೆರಿಗೆ ವಿನಾಯಿತಿಯನ್ನು ಸರ್ಕಾರ ಒಂದು ವರ್ಷ ವಿಸ್ತರಿಸಿದೆ.
Budget 2021: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮುಂದಿನ ಆರ್ಥಿಕ ವರ್ಷ 2021-22 ರ ಬಜೆಟ್ ನಲ್ಲಿ ಮದ್ಯಕ್ಕೆ ಸಂಬಂಧಿಸಿದ ಪೇಯಗಳ ಸೆಸ್ ದರವನ್ನು ಶೇ.100 ರಷ್ಟು ಹೆಚ್ಚಿಸಿದ್ದಾರೆ. ಕೇಂದ್ರ ಸರ್ಕಾರದ ಈ ನಿರ್ಧಾರದಿಂದ ಮದ್ಯದ ದರದಲ್ಲಿ ಏರಿಕೆಯಾಗಲಿದೆ ಎಂದು ತಜ್ಞರು ಅಭಿಪ್ರಾಯವ್ಯಕ್ತಪಡಿಸಿದ್ದಾರೆ.
20 ವರ್ಷ ಹಳೆಯದ್ದಾಗಿದ್ದರೆ ನಿಮಗೊಂದು ಕೆಟ್ಟ ಸುದ್ದಿಯಿದೆ. ಈ ಬಾರಿಯ ಬಜೆಟ್ ನಲ್ಲಿ (Budget) ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮ್ ಹಳೆಯ ವಾಹನಗಳಿಗೆ ಸಂಬಂಧಪಟ್ಟಂತೆ ಮಹತ್ವದ ಘೋಷಣೆಯೊಂದನ್ನು ಮಾಡಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.