ರಾಜ್ಯದಲ್ಲಿ ವಿಧಾನಸಭೆ ಚುನಾವಣೆ ದಿನೆ ದಿನೆ ರಂಗೇರುತ್ತಿದೆ. ನಾಮಪತ್ರ ಸಲ್ಲಿಕೆಯ ದಿನ ಕೊನೆ ಆಗ್ತಿರೋ ಕಾರಣ ಪ್ರತೀ ಕ್ಷೇತ್ರದಲ್ಲೂ ಆಡಳಿತ ಪಕ್ಣ ಸೇರಿ ಹಲವಾರು ಪಕ್ಷದ ಅಭ್ಯರ್ಥಿಗಳು ನಾಮಪತ್ರ ಸಲ್ಲಿಕೆ ಮಾಡುತ್ತಿದ್ದಾರೆ. ಅದರಂತೆ ಬೆಂಗಳೂರಿನ ಮಲ್ಲೇಶ್ವರ ಕ್ಷೇತ್ರದಲ್ಲಿ ನಿನ್ನೆ ಬಿಜೆಪಿ ಬಲಿಷ್ಠ ನಾಯಕ ಸಚಿವ ಡಾ. ಅಶ್ವಥ್ ನಾರಾಯಣ ನಾಮ ಪತ್ರ ಸಲ್ಲಿಸಿದ್ರೆ, ಇತ್ತ ಕಾಂಗ್ರೆಸ್ ಪಕ್ಷದಿಂದಲೂ ಅಭ್ಯರ್ಥಿ ಸವಾಲೆಂಬತೆ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ.
ಭ್ರಷ್ಟಾಚಾರ ಮತ್ತು ಅಕ್ರಮಗಳಲ್ಲೇ ಮುಳುಗಿರುವ ಕಾಂಗ್ರೆಸ್ ನಾಯಕರಿಗೆ ಮಾಡಲು ಏನೂ ಕೆಲಸವಿಲ್ಲ. ಹೀಗಾಗಿ ಅವರೆಲ್ಲ ಹೊಂಬಾಳೆ ಎನ್ನುವ ಯಾವುದೋ ಒಂದು ಸಂಸ್ಥೆಯ ಹೆಸರನ್ನು ಹಿಡಿದುಕೊಂಡು ನನ್ನ ಮೇಲೆ ನಿರಾಧಾರ ಆರೋಪ ಮಾಡುತ್ತಿದ್ದಾರೆ. ಇಂದು ಎಂದಿನಂತೆ ಗಾಳಿಯಲ್ಲಿ ಗುಂಡು ಹೊಡೆಯುವ ಚಾಳಿಯಾಗಿದೆ. ಪದೇಪದೇ ನನ್ನ ಹೆಸರಿಗೆ ಮಸಿ ಬಳಿಯಲು ಹೊಂಚು ಹಾಕುತ್ತಿರುವ ಇವರೆಲ್ಲರ ಮೇಲೆ ಮಾನನಷ್ಟ ಮೊಕದ್ದಮೆ ಹೂಡುತ್ತೇನೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ ಎನ್ ಅಶ್ವತ್ಥನಾರಾಯಣ ಎದುರೇಟು ಕೊಟ್ಟಿದ್ದಾರೆ.
ರಾಜ್ಯದ ಯುವಜನರಿಗೆ ಸೂಕ್ತ ಉದ್ಯೋಗಾವಕಾಶಗಳು ಸಿಗುವಂತಾಗಬೇಕು ಎನ್ನುವ ಗುರಿಯೊಂದಿಗೆ ಈವರಗೆ 10 ಲಕ್ಷಕ್ಕೂ ಹೆಚ್ಚು ಯುವಜನರಿಗೆ ಕೌಶಲ್ಯ ತರಬೇತಿ ನೀಡಲಾಗಿದೆ ಎಂದು ಉನ್ನತ ಶಿಕ್ಷಣ ಮತ್ತು ಕೌಶಲ್ಯಾಭಿವೃದ್ಧಿ ಸಚಿವ ಡಾ.ಸಿ ಎನ್ ಅಶ್ವತ್ಥನಾರಾಯಣ ಅವರು ಶುಕ್ರವಾರ ಹೇಳಿದ್ದಾರೆ.
‘ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಸುಮಾರು 85 ಕೋಟಿ ರೂ.ನಷ್ಟು ಹಣವನ್ನು ಉನ್ನತ ಶಿಕ್ಷಣ ಸಚಿವ ಅಶ್ವತ್ಥ್ ನಾರಾಯಣ ಅವರ ಪ್ರಭಾವದಿಂದ ಇತರೆ ಕಾಮಗಾರಿಗಳಿಗೆ ವರ್ಗಾವಣೆ ಮಾಡಲಾಗಿದೆ.
ಇದೇ ತಿಂಗಳ 12 ರಂದು ಕರ್ನಾಟಕ ಕೌಶಲ್ಯಾಭಿವೃದ್ಧಿ ನಿಗಮದ ವತಿಯಿಂದ ಕಲಬುರಗಿಯಲ್ಲಿ ನಡೆಸಿದ ಉದ್ಯೋಗ ಮೇಳದಲ್ಲಿ ಒಟ್ಟು 2,240 ಜನರಿಗೆ ಉದ್ಯೋಗ ಸಿಕ್ಕಿದೆ ಎಂದು ಉನ್ನತ ಶಿಕ್ಷಣ ಮತ್ತು ಕೌಶಲ್ಯಾಭಿವೃದ್ಧಿ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ತಿಳಿಸಿದ್ದಾರೆ.
ಡಿಜಿಟಲ್ ಮನೋರಂಜನಾ ಕ್ಷೇತ್ರವು ಅಗಾಧವಾಗಿ ಬೆಳೆಯುತ್ತಿದ್ದು, ಒಂದು ವರ್ಷದಲ್ಲಿ ನೂತನ `ಅನಿಮೇಷನ್, ವಿಷುಯಲ್ ಎಫೆಕ್ಟ್ಸ, ಗೇಮಿಂಗ್ ಮತ್ತು ಕಾಮಿಕ್ಸ್ ನೀತಿ’ (ಎವಿಜಿಸಿ ಪಾಲಿಸಿ) ಯನ್ನು ರಾಜ್ಯದಲ್ಲಿ ಜಾರಿಗೆ ತರಲಾಗುವುದು ಎಂದು ಐಟಿ, ಬಿಟಿ ಮತ್ತು ಕೌಶಲ್ಯಾಭಿವೃದ್ಧಿ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಹೇಳಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.