ರಾಜ್ಯ ಸಚಿವ ಸಂಪುಟಕ್ಕೆ ಸೇರ್ಪಡೆಯಾದ ನೂತನ ಸಚಿವರಿಗೆ ಖಾತೆ ಹಂಚಿಕೆ ಬಹುತೇಕ ಫೈನಲ್ ಆಗಿದ್ದು, ಯಾರಿಗೆ ಯಾವ ಖಾತೆ ಎಂಬುದು ಪಟ್ಟಿ ನಾಳೆ ಪ್ರಕಟವಾಗಲಿದೆ ಎಂದು ಉನ್ನತ ಮೂಲಗಳು ತಿಳಿಸಿವೆ.
ಸಂಪುಟ ಸೇರುವ ನಿರೀಕ್ಷೆ ಇಟ್ಟುಕೊಂಡಿದ್ದ ಹಲವು ನಾಯಕರು ಹತಾಶರಾಗಿದ್ದು, ಮುಖ್ಯಮಂತ್ರಿ ಯಡಿಯೂರಪ್ಪ ವಿರುದ್ಧ ಹೇಳಿಕೆಗಳನ್ನು ನೀಡತೊಡಗಿದ್ದಾರೆ. ಇದರ ನಡುವೆ, ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ‘ಸೀಡಿ ಬಾಂಬ್’ ಸಿಡಿಸಿದ್ದಾರೆ.
ಸಂಪುಟ ವಿಸ್ತರಣೆಯಾಗಲಿ, ಪುನಾರಚನೆ ಯಾಗಲಿ ಬೆಂಗಳೂರು ಸಚಿವರನ್ನು ಯಾವುದೇ ಕಾರಣಕ್ಕೂ ಕೈಬಿಡದ ಸ್ಥಿತಿಯಲ್ಲಿದ್ದಾರೆ ಯಡಿಯೂರಪ್ಪ. ಜೊತೆಗೆ ಬೆಂಗಳೂರು ಖೋಟಾದಡಿ ಮತ್ತಿಬ್ಬರು ಶಾಸಕರನ್ನು ಸಂಪುಟಕ್ಕೆ ಸೇರಿಸಿಕೊಳ್ಳಬೇಕು. ಸಂಪುಟಕ್ಕೆ ಯಾರನ್ನು ಸೇರಿಸುವುದು, ಯಾರನ್ನು ಬಿಡೋದು ಎಂಬ ಟೆನ್ಶನ್ ನಲ್ಲಿ ಯಡಿಯೂರಪ್ಪ..
ನಾಳೆ ಸಂಜೆ 4 ಗಂಟೆಗೆ ಸಚಿವ ಸಂಪುಟ ವಿಸ್ತರಣೆಗೆ ಮುಹೂರ್ತ ಫಿಕ್ಸ್ ಆಗಿದ್ದು, ಈ ಹಿನ್ನೆಲೆಯಲ್ಲಿ ಸಿಎಂ ಬಿ. ಎಸ್. ಯಡಿಯೂರಪ್ಪ ಇಂದು ರಾಜ್ಯಪಾಲ ವಜುಭಾಯಿ ವಾಲಾ ಅವರನ್ನು ಭೇಟಿಯಾಗಿದ್ದಾರೆ.
ಅಬಕಾರಿ ಸಚಿವ ಹೆಚ್ ನಾಗೇಶ್ ಗೆ ಕೊಕ್ ಕೊಟ್ಟು, ಆ ಸ್ಥಾನಕ್ಕೆ ಬಿಎಸ್ ಪಿ ಉಚ್ಛಾಟಿತ ಶಾಸಕ ಎನ್ ಮಹೇಶ್ ಅವರನ್ನು ತರಲು ಯಡಿಯೂರಪ್ಪ ಸಿದ್ದತೆ ನಡೆಸಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದೆ. ಈ ನ್ಯೂಸ್ ಕೇಳಿ ಅಬಕಾರಿ ಸಚಿವ ಹೆಚ್ ನಾಗೇಶ್ ಗಾಬರಿಯಾಗಿದ್ದಾರೆ.
ಗ್ರಾಮ ಪಂಚಾಯಿತಿ ಚುನಾವಣೆ ಬೆನ್ನಲ್ಲೇ ಸಂಪುಟ ವಿಸ್ತರಣೆ ನಡೆಸಬೇಕು ಎಂಬುವುದು ಸಚಿವಾಕಾಂಕ್ಷಿಗಳ ಬೇಡಿಕೆ ಆಗಿತ್ತು. ಆದರೆ ಬಿಜೆಪಿ ಕೋರ್ ಕಮಿಟಿ ಸಭೆಯಲ್ಲೂ ಈ ಬಗ್ಗೆ ಒಮ್ಮತದ ನಿರ್ಧಾರಕ್ಕೆ ಬಂದ ಹಾಗಿಲ್ಲ.