ಪಕ್ಷದಲ್ಲಿ ಸಂಭವಿಸಲಿರುವ ಬಿರುಕುಗಳನ್ನು ತಪ್ಪಿಸಲು ಪಕ್ಷದ ನಾಯಕತ್ವವು ಈ ಬಾರಿ ಕೆಲ ನಾಯಕರಿಗೆ ಅವಕಾಶ ಕಲ್ಪಿಸಲು ಪಕ್ಷದ ನಾಯಕತ್ವ ನಿರ್ಧಾರ ಕೈಗೊಳ್ಳಲಿದೆ ಎಂಬ ವಿಶ್ವಾಸವಿದೆ- ರಮೇಶ್ ಜಾರಕಿಹೊಳಿ
ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತಮ್ಮ ದಾವೋಸ್ ಪ್ರವಾಸವನ್ನು ರದ್ದುಗೊಳಿಸಿದ್ದು, ಸಂಪುಟ ವಿಸ್ತರಣೆ ಸಂಬಂಧ ಪಕ್ಷದ ಹೈಕಮಾಂಡ್ ಜೊತೆ ಚರ್ಚಿಸಲು ಜನವರಿ 11, 12 ರಂದು ದೆಹಲಿಗೆ ತೆರಳಲು ನಿರ್ಧರಿಸಿದ್ದಾರೆ ಎನ್ನಲಾಗಿದೆ.
ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಈ ತಿಂಗಳ ಅಂತ್ಯದ ವೇಳೆಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಹಾಗೂ ಗೃಹ ಸಚಿವರೂ ಆಗಿರುವ ಅಮಿತ್ ಶಾ ಅವರನ್ನು ಭೇಟಿ ಆಗಲಿದ್ದಾರೆ. ಇನ್ನೊಂದೆಡೆ ಸಚಿವಾಕಾಂಕ್ಷಿಗಳು ಸಚಿವ ಸ್ಥಾನಕ್ಕೆ ಲಾಬಿ ನಡೆಸುತ್ತಿದ್ದಾರೆ.
ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಭಾರೀ ಮಳೆಯಿಂದ ಪ್ರವಾಹ ಉಂಟಾಗಿ ಸಾವಿರಾರು ಕುಟುಂಬಗಳು ಸಂಕಷ್ಟಕ್ಕೆ ಸಿಲುಕಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ದೆಹಲಿ ಪ್ರವಾಸ ಮೊಟಕುಗೊಳಿಸಿ ನಿನ್ನೆ ರಾಜ್ಯಕ್ಕೆ ವಾಪಸ್ ಆಗಿದ್ದರಿಂದ ಶುಕ್ರವಾರ ನಡೆಯಬೇಕಿದ್ದ ಸಚಿವ ಸಂಪುಟ ವಿಸ್ತರಣೆ ಮುಂದೂಡಿಕೆಯಾಗಿತ್ತು.