ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಕಾನೂನು ನೆರವು ರಕ್ಷಣಾ ಸಲಹೆಗಾರ (LADC) ಕಚೇರಿಯಲ್ಲಿ ತಾತ್ಕಾಲಿಕ ಹುದ್ದೆಗಳಿಗೆ ಗುತ್ತಿಗೆ ಆಧಾರದ ಮೇಲೆ ನೇಮಕಾತಿಗೆ ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರೂ ಆಗಿರುವ ಎಸ್.ಹೆಚ್.ಪುಷ್ಪಾಂಜಲಿ ದೇವಿ ಅವರು ತಿಳಿಸಿದ್ದಾರೆ.
ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯ ಕಾಯ್ದೆ 2009ರ ಕಲಂ 58ರ ಅಡಿಯನ್ವಯ ಕರ್ನಾಟಕ ರಾಜ್ಯದಲ್ಲಿ 2023-24ರ ಶೈಕ್ಷಣಿಕ ವರ್ಷಕ್ಕೆ 3 ವರ್ಷದ ಎಲ್.ಎಲ್.ಬಿ., 5 ವರ್ಷದ ಬಿ.ಎ.,ಎಲ್.ಎಲ್.ಬಿ., 5 ವರ್ಷದ ಬಿ.ಬಿ.ಎ.,ಎಲ್ಎಲ್.ಬಿ., 5 ವರ್ಷದ ಬಿ.ಕಾಂ.,ಎಲ್.ಎಲ್.ಬಿ., 2 ವರ್ಷದ ಎಲ್.ಎಲ್.ಎಂ., ಅಧ್ಯಯನ ಕೇಂದ್ರ, ಡಿಪ್ಲೋಮಾ ಹಾಗೂ ಸರ್ಟಿಫೀಕೇಟ ಕೋರ್ಸ್ಗಳಿಗೆ ಹೊಸ, ನವೀಕರಣ, ವಿಸ್ತರಣೆ, ಶಾಶ್ವತ ಹಾಗೂ ಶಾಶ್ವತ ನವೀಕರಣ ಸಂಯೋಜನೆಗಾಗಿ ಕರ್ನಾಟಕ ರಾಜ್ಯ ಕಾನೂನು ವಿಶ್ಬವಿದ್ಯಾಲಯವು, ಅರ್ಜಿ ಆಹ್ವಾನಿಸಲಾಗಿದೆ.
ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ 2023-24ನೇ ಸಾಲಿನಲ್ಲಿ ಬೆಂಗಳೂರು ನಗರ ಜಿಲ್ಲೆಗೆ ಸೇರಿರುವ ಹಿಂದುಳಿದ ವರ್ಗಗಳಿಗೆ ಸೇರಿದ ಪ್ರವರ್ಗ-1, 2ಎ, 3ಎ ಮತ್ತು 3ಬಿ ವರ್ಗಗಳಿಗೆ ಸೇರಿದ ಕಾನೂನು ಪದವೀಧರರಿಂದ ನ್ಯಾಯಾಂಗ ಆಡಳಿತದಲ್ಲಿ ಹಾಗೂ ವಕೀಲ ವೃತ್ತಿಯ ತರಬೇತಿ ಭತ್ಯೆ ಮಂಜೂರಾತಿಗಾಗಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಸಮಾಜ ಕಲ್ಯಾಣ ಇಲಾಖೆಯು ಜಿಲ್ಲೆಯ ಪರಿಶಿಷ್ಟ ಜಾತಿಗೆ ಸೇರಿದ ಕಾನೂನು ಪದವೀಧರರಿಗೆ ಮಾಸಿಕ ಶಿಷ್ಯವೇತನದ ಆಧಾರದ ಮೇಲೆ ನ್ಯಾಯಾಂಗ ಆಡಳಿತದಲ್ಲಿ ತರಬೇತಿ ಪಡೆಯುವ ಸೌಲಭ್ಯಕ್ಕಾಗಿ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.