ಒಂದು ವರ್ಷಕ್ಕೆ ಮಾತ್ರ ಹೊರಗುತ್ತಿಗೆ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳಲಾಗುವುದು. ಒಂದು ವರ್ಷದ ಸೇವೆಯನ್ನು ತೃಪ್ತಿಕರವಾಗಿ ಪೂರೈಸಿದಲ್ಲಿ ಅಗತ್ಯವಿದಲ್ಲಿ ಮಾತ್ರ ಮುಂದಿನ ವರ್ಷಕ್ಕೆ ವಿಸ್ತರಿಸಲಾಗುವುದು. ಇದನ್ನು ಅಭ್ಯರ್ಥಿಯು ಹಕ್ಕು ಎಂದು ತಿಳಿಯತಕ್ಕದ್ದಲ್ಲ.
ಅರ್ಜಿ ಸಲ್ಲಿಸಲು ಮಾ.05 ಕಡೆಯ ದಿನವಾಗಿರುತ್ತದೆ. ಟೆಕ್ನಿಕಲ್ ಆಫಿಸರ್ ಹುದ್ದೆ 01, ವೇತನ ರೂ.35000/- ಇರುತ್ತದೆ. ಅರ್ಜಿ ನಮೂನೆ ಮತ್ತು ಹೆಚ್ಚಿನ ವಿವರಗಳನ್ನು ಸಂಸ್ಥೆಯ ವೆಬ್‌ಸೈಟ್ https://sims.karnataka.gov.in/english ನಲ್ಲಿ ಪಡೆಯತಕ್ಕದ್ದು.
ಆಸಕ್ತ ಅಭ್ಯರ್ಥಿಗಳು, ಫೆಬ್ರವರಿ 10, 2025 ರಂದು ಬೆಳಿಗ್ಗೆ 10:30 ರಿಂದ ಮಧ್ಯಾಹ್ನ 1:30 ಗಂಟೆಯವರೆಗೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಭಾಂಗಣದಲ್ಲಿ ನೇರ ಸಂದರ್ಶನಕ್ಕೆ ಹಾಜರಾಗಬಹುದು.
ಡಾ.ಬಿ.ಆರ್ ಅಂಬೇಡ್ಕರ್ ಬಾಲಕಿಯರ ವಸತಿ ಶಾಲೆ, ಕಸಬಾ, ಶಿವಮೊಗ್ಗ ತಾಲ್ಲೂಕು ಕೋಟೆ ರಸ್ತೆಯಲ್ಲಿರುವ ವಸತಿ ಶಾಲೆಯಲ್ಲಿ ಆರೋಗ್ಯ ಮೇಲ್ವಿಚಾರಣೆಗಾಗಿ ಸ್ಟಾಫ್ ನರ್ಸ್ ಸಿಬ್ಬಂದಿಯನ್ನು ಹೊರಗುತ್ತಿಗೆ ಆಧಾರದ ಮೇಲೆ ಸೇವೆ ಸಲ್ಲಿಸಲು ಅರ್ಜಿ ಆಹ್ವಾನಿಸಲಾಗಿದೆ.
ಪ್ರವೇಶ ಪರೀಕ್ಷೆಯನ್ನು ಡಿಸೆಂಬರ 5, 2024 ರಂದು 11.30 ಗಂಟೆಗೆ ಪತ್ರಿಕೋದ್ಯಮ ವಿಭಾಗದಲ್ಲಿ ಜರುಗಿಸಲಾಗುವುದು.ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 9481013993 ಗೆ ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದೆ.
ಕೊಡಗು ಜಿಲ್ಲೆಯ ಜಿಲ್ಲಾ ಸರ್ಕಾರಿ ವಕೀಲರ ಮತ್ತು ಅಪರ ಜಿಲ್ಲಾ ಸರ್ಕಾರಿ ವಕೀಲರ ಹುದ್ದೆಯನ್ನು ಭರ್ತಿ ಮಾಡಲು ಸರ್ಕಾರವು ಉದ್ದೇಶಿಸಿದ್ದು, ಈ ಹುದ್ದೆಯನ್ನು ಕರ್ನಾಟಕ ಕಾನೂನು ಅಧಿಕಾರಿಗಳ (ನೇಮಕಾತಿ ಮತ್ತು ಸೇವಾ ಷರತ್ತು) ಕಾಯಿದೆ, 1977 ರನ್ವಯ ಭರ್ತಿ ಮಾಡಲು ಷರತ್ತುಗಳನ್ವಯ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಶಿವಮೊಗ್ಗ; 2024-25ನೇ ಸಾಲಿನ ರಾಷ್ಟ್ರೀಯ ಆರೋಗ್ಯ ಅಭಿಯಾನ (ಎನ್.ಹೆಚ್.ಎಂ) ದಡಿಯಲ್ಲಿ ಗುತ್ತಿಗೆ ಆಧಾರದ ಮೇಲೆ ಶಿವಮೊಗ್ಗ ಜಿಲ್ಲೆಯ ವ್ಯಾಪ್ತಿಯಲ್ಲಿ ಬರುವ ಆರೋಗ್ಯ ಸಂಸ್ಥೆಗಳಲ್ಲಿ ಖಾಲಿ ಇರುವ ವೈದ್ಯಕೀಯ ಮತ್ತು ಅರೆವೈದ್ಯಕೀಯ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತರು ಅ. 09 ರಂದು ಬೆಳಿಗ್ಗೆ 10.30 ರಿಂದ ಮಧ್ಯಾಹ್ನ 1.30 ರ ವರೆಗೆ ಅರ್ಜಿ ನಮೂನೆಯನ್ನು ಎನ್.ಹೆಚ್.ಎಂ ವಿಭಾಗ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿಯ ಆವರಣ, ಬಿ.ಹೆಚ್. ರಸ್ತೆ, ಶಿವಮೊಗ್ಗ ಇಲ್ಲಿ ವಿತರಿಸಲಾಗುವುದು. ಹಾಗೂ ಅದೇ ದಿನ ಎಲ್ಲಾ ಹುದ್ದೆಯ ಮೂಲ ದಾಖಲಾತಿಗಳ ಪರಿಶೀಲನೆಯನ್ನು ಸಂಜೆ 5.30 ರವರೆಗೆ ನಡೆಸಲಾಗುವುದು.
ಅಂಚೆ ಜೀವ ವಿಮೆ ಹಾಗೂ ಗ್ರಾಮೀಣ ಅಂಚೆ ಜೀವ ವಿಮೆ ಉತ್ಪನ್ನಗಳನ್ನು ಮಾರಾಟ ಮಾಡಲು ನೇರಪ್ರತಿನಿಧಿ ಮತ್ತು ಮತ್ತು ಫೀಲ್ಡ್ ಆಫೀಸರ್‌ಗಳ ನೇಮಕಕ್ಕಾಗಿ ಅ.14 ರಂದು ಬೆಳಿಗ್ಗೆ 10 ಗಂಟೆಯಿಂದ ಮಧ್ಯಾಹ್ನ 02 ಗಂಟೆಯವರೆಗೆ, ನಗರದ ಕೋಟೆ ಆವರಣದ ಅಂಚೆ ಅಧೀಕ್ಷಕರ ಕಾರ್ಯಾಲಯದಲ್ಲಿ ನೇರ ಸಂದರ್ಶನ ಏರ್ಪಡಿಸಲಾಗಿದೆ.
ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿಯ ಕಾನೂನು ಪದವೀಧರರಿಗೆ ಕಾನೂನು ಆಡಳಿತ ನ್ಯಾಯಾಧೀಕರಣದಲ್ಲಿ ತರಬೇತಿ ಪಡೆಯಲು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ಅವಧಿಯನ್ನು ಸೆ.30ರ ವರೆಗೆ ವಿಸ್ತರಿಸಲಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಬಿ.ಮಲ್ಲಿಕಾರ್ಜುನ ಅವರು ತಿಳಿಸಿದ್ದಾರೆ.
ಭಾರತೀಯ ಕ್ರಿಕೆಟ್ ತಂಡದಲ್ಲಿ ಇರುವೊಬ್ಬೊಬ್ಬ ಆಟಗಾರ ವಿದ್ಯಾರ್ಹತೆ ಕೇಳಿದರೆ ಖಂಡಿತವಾಗಿಯೂ ಬೆಚ್ಚಿ ಬೀಳಬೇಕು. ತಮ್ಮನು ಕ್ರಿಕೆಟ್ ಗೇ ಸಮರ್ಪಿಸಿಕೊಂಡ ಇವರು ಓದಿನತ್ತ ಗಮನ ಹರಿಸಲೇ ಇಲ್ಲ.
2024-25ನೇ ಶೈಕ್ಷಣಿಕ ವರ್ಷಕ್ಕೆ ಕರ್ನಾಟಕದ ಕೆಳದಿ ಶಿವಪ್ಪನಾಯಕ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯ-ಶಿವಮೊಗ್ಗ, ಕೃಷಿ ವಿಶ್ವವಿದ್ಯಾಲಯ-ಬೆಂಗಳೂರು ಮತ್ತು ಧಾರವಾಡ, ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯ- ರಾಯಚೂರು ಹಾಗೂ ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ-ಬಾಗಲಕೋಟೆ ಈ ಐದು ಕಾಲೇಜುಗಳಲ್ಲಿ ವಿವಿಧ ಸ್ನಾತಕೋತ್ತರ ಪದವಿಗಳಿಗೆ ಪ್ರವೇಶ ಬಯಸುವವರಿಂದ ಅರ್ಜಿ ಆಹ್ವಾನಿಸಲಾಗಿದೆ.
ಮಹಿಳಾ ಅಭಿವೃದ್ಧಿ ನಿಗಮ ವತಿಯಿಂದ ಪ್ರಸ್ತಕ ಸಾಲಿಗೆ ವಿವಿಧ ಯೋಜನೆಗಳಡಿ ಸಹಾಯಧನಕ್ಕಾಗಿ ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರು ತಿಳಿಸಿದ್ದಾರೆ.ಅರ್ಜಿ ಸಲ್ಲಿಸಲು ಸೆ.21 ಕೊನೆಯ ದಿನವಾಗಿದೆ.
ಅಂಚೆ ಇಲಾಖೆ ವತಿಯಿಂದ 6ರಿಂದ 9ನೇ ತರಗತಿ ವಿದ್ಯಾರ್ಥಿಗಳಿಗೆ ಅಂಚೆ ಚೀಟಿಗಳ ಸಂಗ್ರಹ ಉತ್ತೇಜಿಸಲು ದೀನ್ ದಯಾಳ ಸ್ಪರ್ಶ ಯೋಜನೆಯಡಿ ವಿದ್ಯಾರ್ಥಿವೇತನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ ಎಂದು ಬಳ್ಳಾರಿ ವಿಭಾಗದ ಅಂಚೆ ಅಧೀಕ್ಷಕ ಪಿ.ಚಿದಾನಂದ ಅವರು ತಿಳಿಸಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.