ಕನ್ನಡಿಗರೂ ಮನುಷ್ಯರು, ಅವರಿಗೂ ಅನ್ನ ನೀರು ಬೇಕು. ಅವರೂ ಈ ಒಕ್ಕೂಟ ವ್ಯವಸ್ಥೆಯ ಭಾಗ ಎನ್ನುವುದನ್ನು ಸಮಿತಿ ಮರೆತಿರುವಂತಿದೆ. ಸರಕಾರದಿಂದ ಕಾವೇರಿ ಹಿತರಕ್ಷಣೆ ಸಾಧ್ಯವಿಲ್ಲ. ಈ ಆದೇಶವನ್ನು ದಿಕ್ಕರಿಸುವ ಎದೆಗಾರಿಕೆ ಸರಕಾರಕ್ಕೆ ಇಲ್ಲ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಹೇಳಿದರು.
ಸುಪ್ರೀಂ ಕೋರ್ಟ್ ವಿಚಾರಣೆ ವೇಳೆ ಕರ್ನಾಟಕ ತನ್ನ ಜಾಗದಲ್ಲಿ ಆಣೆಕಟ್ಟುಕೊಳ್ಳಲು ಅಡ್ಡಿಪಡಿಸಬೇಡಿ ಎಂದು ಅಭಿಪ್ರಾಯಪಟ್ಟಿದೆ. ಹೀಗಾಗಿ ಬಿಜೆಪಿ ನಾಯಕರು ರಾಜಕೀಯ ಬಿಟ್ಟು ರಾಜ್ಯದ ಹಿತಕ್ಕಾಗಿ ಕೇಂದ್ರ ಸರ್ಕಾರದ ಮೇಲೆ ಒತ್ತಡ ತರಲಿ ಎಂದು ಡಿಸಿಎಂ ಡಿಕೆ ಶಿವಕುಮಾರ್ ಅವರು ಹೇಳಿದರು.
ಕಳ್ಳತನದಿಂದ ನೀರು ಬಿಟ್ಟಿದ್ದಕ್ಕೆ ಕಳ್ಳ ಎಂದರೆ ತಪ್ಪು ಇವರಿಗೆ. ಎಲ್ಲರ ಜೊತೆ ಮಾತುಕತೆ ನಡೆಸಿದ್ದರೆ ರಾಜ್ಯದ ಜನರು ಅವರ ಜೊತೆಗೆ ಇರುತ್ತಿದ್ದರು. ಸ್ಟಾಲಿನ್ ಎಂಬ ಪುಣ್ಯಾತ್ಮನಿಗಾಗಿ, ಇಂಡಿಯಾ ಸಂಸ್ಥೆ ಓಲೈಸಲು ಡಿ.ಕೆ. ಶಿವಕುಮಾರ್ ನೀರು ಬಿಟ್ಟಿದ್ದಾರೆ ಎಂದು ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ ದೂರಿದರು.
Karnataka bandh : ತಮಿಳು ನಟ ಸಿದ್ಧಾರ್ಥ್ ಸೆಪ್ಟೆಂಬರ್ 28 ರಂದು 'ಚಿಕ್ಕು' ಸಿನಿಮಾದ ಪ್ರಚಾರಕ್ಕೆಂದು ಬೆಂಗಳೂರಿಗೆ ಬಂದಿದ್ದರು. ಈ ವೇಳೆ ಕರ್ನಾಟಕ ರಕ್ಷಣಾ ವೇದಿಕೆಯ ಸ್ವಾಭಿಮಾನಿ ಸೇನೆ ಸಂಘಟನೆ ಸದಸ್ಯರು ಸಿದ್ಧಾರ್ಥ ಪತ್ರಿಕಾ ಗೋಷ್ಠಿಯನ್ನು ಸ್ಥಗಿತಗೊಳಿಸಿದ್ದರು. ಈ ವಿಚಾರವಾಗಿ ಪ್ರಕಾಶ್ ರಾಜ್ ಬೇಸರ ವ್ಯಕ್ತಪಡಿಸಿದ್ದರು.
ಕೊಳ್ಳೆ ಹೊಡೆದ ಮೇಲೆ ಬಾಗಿಲು ಹಾಕಿದಂತೆ ಈಗ ಕಾನೂನು ಹೊರಾಟ ಮಾಡಲು ಹೊರಟಿದ್ದಾರೆ. ಕಾನೂನು ತಜ್ಞರ ಜೊತೆ ಮಾತನಾಡುವ ಕೆಲಸವನ್ನು ಮುಂಚೆಯೇ ಮಾಡಬೇಕಿತ್ತು ಎಂದು ಕಾವೇರಿ ವಿಚಾರವಾಗಿ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡರು.
ಕಾವೇರಿ ನೀರು ಹಂಚಿಕೆ ಸಮಸ್ಯೆಯನ್ನು ಬಗೆಹರಿಸಲು ಇಂಡಿ ಒಕ್ಕೂಟದ ಮುಖ್ಯಸ್ಥರಾಗಿರುವ ಸೋನಿಯಾ ಗಾಂಧಿ ಮಧ್ಯಸ್ಥಿಕೆ ವಹಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆಗ್ರಹಿಸಿದ್ದಾರೆ.
ಸಂಕಷ್ಟ ಪರಿಸ್ಥಿತಿಯಲ್ಲಿ ನೀರಿನ ಹಂಚಿಕೆ ಸೂತ್ರ ರೂಪಿಸದೇ ಇರುವುದರಿಂದ ಕಾವೇರಿ ವಿಚಾರ ರಾಜ್ಯವನ್ನು ತೀವ್ರ ಸಂದಿಗ್ಧ ಪರಿಸ್ಥಿತಿಗೆ ತಳ್ಳಿದೆ ಎಂದು ಕೃಷಿ ಸಚಿವರಾದ ಎನ್ ಚಲುವರಾಯಸ್ವಾಮಿ ಅಭಿಪ್ರಾಯ ಪಟ್ಟಿದ್ದಾರೆ.ಬೆಂಗಳೂರು ಕೃಷಿ ವಿಶ್ವ ವಿದ್ಯಾನಿಲಯದ ಹಳೆ ವಿದ್ಯಾರ್ಥಿಗಳ ಸಂಘ ಹೆಬ್ಬಾಳದಲ್ಲಿ ಆಯೋಜಿಸಿದ್ದ ಪ್ರತಿಭಾನ್ವಿತ ಮತ್ತು ನಾಮ ನಿರ್ದೇಶಿತ ಸದಸ್ಯರ ಸನ್ಮಾನ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.
ತಮಿಳುನಾಡಿಗೆ ನೀರು ಬಿಡಲು ನಮ್ಮ ಬಳಿಯೇ ನೀರಿಲ್ಲ ಎನ್ನುವುದನ್ನು ಕೇಂದ್ರಕ್ಕೆ ಮನವರಿಕೆ ಮಾಡಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.ಅವರು ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರ ಜೊತೆ ಸಭೆ ನಡೆಸಿದ ನಂತರ ಮಾತನಾಡಿದರು.
ನೀರಾವರಿ ಬಗ್ಗೆ ಕನಿಷ್ಠ ಜ್ಞಾನ, ತಿಳಿವಳಿಕೆ ಇಲ್ಲದವರು ಅಧಿಕಾರದಲ್ಲಿದ್ದರೆ ಏನಾಗುತ್ತದೆ ಎನ್ನುವುದಕ್ಕೆ ಕಾವೇರಿ ಬಿಕ್ಕಟ್ಟು ಸ್ಪಷ್ಟ ಉದಾಹರಣೆ. ಸುಪ್ರೀಂಕೋರ್ಟ್ ಆದೇಶ ನಿಜಕ್ಕೂ ದುರದೃಷ್ಟಕರ.ಆದರೆ, ಇಲ್ಲಿ ನ್ಯಾಯಾಲಯವನ್ನು ದೂರುವಂತಿಲ್ಲ ಎಂದು ಎಚ್.ಡಿ.ಕುಮಾರಸ್ವಾಮಿ ಕಿಡಿ ಕಾರಿದ್ದಾರೆ.
ಕುಡಿಯುವ ನೀರಿಗಾದರು ಉಳಿಸಿಕೊಳ್ಳಲು ರಾಜ್ಯ ಸರ್ಕಾರ ಹೋರಾಟ ಮಾಡಬೇಕು. ಇದರಲ್ಲಿ ನಮಗೆ ರಾಜಕಾರಣ ಮಾಡಲು ಇಷ್ಟ ಇಲ್ಲ. ಈಗಾಗಲೇ ರೈತರ ಬೆಳೆ ಒಣಗಿ ಹೋಗುತ್ತಿದೆ. ರಾಜ್ಯ ಸರ್ಕಾರ ಪ್ರತಿ ಎಕರೆಗೆ 25 ಸಾವಿರ ರೂ. ಪರಿಹಾರ ನೀಡಬೇಕು ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಆಗ್ರಹಿಸಿದರು.
ಸರ್ವಪಕ್ಷ ಸಬೆ ಕರೆದಿದ್ದು ನೋಡಿದರೆ, ಅವರಿಗೆ ಸುಪ್ರೀಂ ಕೋರ್ಟ್ನಲ್ಲಿ ಪ್ರತಿಪಾದಿಸಲು ಸಾದ್ಯವಾಗುತ್ತಿಲ್ಲ. ಮತ್ತೆ ಒತ್ತಡಕ್ಕೆ ಸಿಲುಕಿಕೊಂಡಿದ್ದಾರೆ. ನಾವು ಸರಕಾರದ ಜೊತೆಗಿದ್ದೇವೆ, ಸರಕಾರ ತಮಿಳುನಾಡಿನ ಒತ್ತಡಕ್ಕೆ ಮಣಿಯಬಾರದು ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು.
ತಮಿಳುನಾಡಿಗೆ 4 ಟಿಎಂಸಿ ನೀರು ಬಿಡುವಂತೆ ಕರ್ನಾಟಕಕ್ಕೆ ಸುಪ್ರೀಂ ಕೋರ್ಟ್ ಆದೇಶ ನೀಡಿದ್ದು, ಇದಕ್ಕೆ ಸಂಸದ ಹಾಗೂ ಕಾವೇರಿ ಹಿತರಕ್ಷಣಾ ಸಮಿತಿ ಅಧ್ಯಕ್ಷ ಜಿ.ಮಾದೇಗೌಡ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕಾವೇರಿ ವಿವಾದಕ್ಕೆ ಸಂಬಂಧಿಸಿದಂತೆ ಕರ್ನಾಟಕ ವಿರೋಧಿ ಹೇಳಿಕೆಗಳನ್ನು ನೀಡುತ್ತಿರುವ ತಮಿಳು ನಟ ರಜನಿಕಾಂತ್ ಹಾಗೂ ಕಮಲ್ ಹಾಸನ್ ಸಿನಿಮಾಗಳ ಪ್ರದರ್ಶನವನ್ನು ರಾಜ್ಯದಲ್ಲಿ ನಿಷೇಧಿಸಲು ನಿರ್ಧರಿಸಲಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.