ಸುಪ್ರೀಂ ಕೋರ್ಟ್ ಆದೇಶ ಖಂಡಿಸಿ ನಾಳೆ ಮಂಡ್ಯ ಬಂದ್. ಬಂದ್ ಸಂಬಂಧ ಇಂದು ಮತ್ತೊಂದು ಮಹತ್ವದ ಸಭೆ. ರೈತಸಂಘಗಳ ಸಭೆಯಲ್ಲಿ ಬಂದ್ ರೂಪುರೇಷೆ ಚರ್ಚೆ. ಬಂದ್ಗೆ ಕರೆಕೊಟ್ಟ ಜಿಲ್ಲಾ ರೈತ ಹಿತ ರಕ್ಷಣಾ ಸಮಿತಿ. ರಾಜಕೀಯ ಮುಖಂಡರು, ವರ್ತಕರು, ಸಂಘಟನೆಗಳು ಭಾಗಿ .
ಇಂದು ಮಂಡ್ಯದಲ್ಲಿ ವಿವಿಧ ಸಂಘಟನೆಗಳಿಂದ ಪ್ರೋಟೆಸ್ಟ್. ಸುಪ್ರೀಂ ತೀರ್ಪು ಪಾಲಿಸದಂತೆ ಹೋರಾಟಗಾರರ ಒತ್ತಾಯ.! ಬೆಂ-ಮೈ ಹೆದ್ದಾರಿ ತಡೆದು ಪ್ರತಿಭಟನೆ ನಡೆಸುವ ಸಾಧ್ಯತೆ. ರಾಜ್ಯ ಸರ್ಕಾರ, ತಮಿಳುನಾಡಿನ ವಿರುದ್ಧ ಅನ್ನದಾತರ ಕಿಡಿ.!
ತಮಿಳುನಾಡಿಗೆ ಕಾವೇರಿ ನೀರು ಆದೇಶ ವಿಚಾರ. ನಮಗೇ ನೀರಿಲ್ಲ, ನೀರು ಕೊಡಿ ಅಂದ್ರೆ ಹೇಗೆ..? ಕೇಂದ್ರ ಮಧ್ಯಪ್ರವೇಶ ಮಾಡಿ ವಾಸ್ತವಾಂಶ ಅರಿಯಬೇಕು. ಸಿಎಂ ನಿರ್ಧಾರ ತೆಗೆದುಕೊಳ್ಳುತ್ತಾರೆಂಬ ವಿಶ್ವಾಸವಿದೆ. ಚಿತ್ರದುರ್ಗದಲ್ಲಿ ಸಚಿವ ಮಧು ಬಂಗಾರಪ್ಪ ಹೇಳಿಕೆ . ಇದಕ್ಕೆ ಪಕ್ಷಾತೀತವಾಗಿ ಎಲ್ಲಾ ಶಾಸಕರ ಬೆಂಬಲ ಇದೆ. ಬಂಗಾರಪ್ಪ ಐತಿಹಾಸಿಕ ನಿರ್ಧಾರ ತೆಗೆದುಕೊಂಡಿದ್ದರು. ಆಗ ನೀರಿರಲಿಲ್ಲ, ಈಗ ಪರಿಸ್ಥಿತಿ ಅದಕ್ಕಿಂದ ಕೆಟ್ಟದಾಗಿದೆ. ಚಿತ್ರದುರ್ಗದಲ್ಲಿ ಸಚಿವ ಮಧು ಬಂಗಾರಪ್ಪ ಹೇಳಿಕೆ
ಕಾವೇರಿ ವಿಚಾರದಲ್ಲಿ ಮತ್ತೆ ಕರ್ನಾಟಕಕ್ಕೆ ಅನ್ಯಾಯ. ಸಕ್ಕರೆನಾಡು ಮಂಡ್ಯದಲ್ಲಿ ಭುಗಿಲೆದ್ದ ಕಾವೇರಿ ಕಿಚ್ಚು. ಸುಪ್ರೀಂ ತೀರ್ಪಿನ ವಿರುದ್ಧ ರೊಚ್ಚಿಗೆದ್ದ ಅನ್ನದಾತರು. ಸರ್ಕಾರದ ಮಹತ್ವದ ಸಭೆ
Cauvery Water Issue: ಲೋಕಸಭಾ ಚುಣಾವಣೆಗಾಗಿ ಕಾಂಗ್ರೆಸ್ ಕರ್ನಾಟಕ ಜನತೆಗೆ ಮೋಸ ಮಾಡುತ್ತಿದ್ದು, ಕರ್ನಾಟಕವನ್ನ ಬಲಿ ಕೊಡತಾ ಇದೆ. ಕಾಂಗ್ರೆಸ್ ಸರ್ಕಾರ ಕರ್ನಾಟಕದ ಜನತೆಗೆ ದ್ರೋಹ ಮಾಡಿದೆ ಇದು ಸರಿಯಲ್ಲ.
ಕಾವೇರಿ ನೀರಿನ ಹಂಚಿಕೆ ವಿಚಾರದಲ್ಲಿ ರಾಜ್ಯ ಸರಕಾರವು ಉದಾಸೀನ ತೋರಿಸುತ್ತಿಲ್ಲ. ಈ ಬಗ್ಗೆ ಬಿಜೆಪಿ ನಾಯಕರು ಮಾಡುತ್ತಿರುವ ಆರೋಪಗಳಲ್ಲಿ ಹುರುಳಿಲ್ಲ. ನಮ್ಮ ವಕೀಲರ ತಂಡ ವಿಚಾರವನ್ನು ಗಂಭೀರವಾಗಿ ಪರಿಗಣಿಸಿ, ಸೂಕ್ತ ಹೆಜ್ಜೆಗಳನ್ನು ಇಡುತ್ತಿದೆ ಎಂದು ಪಾಟೀಲ ಪ್ರಶ್ನೆಯೊಂದಕ್ಕೆ ಉತ್ತರಿಸಿದರು.
ನಾವು ಪ್ರಧಾನಿ ಅವರ ಸಮಯವನ್ನೂ ಕೇಳಿದ್ದೇವೆ. ಸಮಯ ಸಿಕ್ಕರೆ ಭೇಟಿ ಆಗುತ್ತೇವೆ. ನಾಲ್ಕೂ ರಾಜ್ಯದವರನ್ನು ಕರೆಸಿ ಮಾತನಾಡಲು ಮಧ್ಯ ಪ್ರವೇಶಿಸಿ ಎಂದು ಪ್ರಧಾನಿಗೆ ಮನವಿ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಇದೇ ವೇಳೆ ತಿಳಿಸಿದರು.
ಕಾವೇರಿ ನೀರನ್ನು ತಮಿಳುನಾಡಿಗೆ ಹರಿಸುತ್ತಿರುವ ರಾಜ್ಯ ಕಾಂಗ್ರೆಸ್ ಸರ್ಕಾರದ ದಮನಕಾರಿ ನೀತಿಯನ್ನು ವಿರೋಧಿಸಿ, ಆಮ್ ಆದ್ಮಿ ಪಕ್ಷದಿಂದ ಬೆಂಗಳೂರಿನ ಪ್ರೀಡಂ ಪಾರ್ಕ್ನಲ್ಲಿ ಪ್ರತಿಭಟನೆ ನಡೆಸಿತು. ಈ ವೇಳೆ ಖಾಲಿ ಬಿಂದಿಗೆ, ಖಾಲಿ ಬಕೆಟ್ ಹಿಡಿದು ವಿನೂತನವಾಗಿ ಪ್ರತಿಭಟನೆ ನಡೆಸಿದರು. ರಾಜ್ಯ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು.
ಸಂಕಷ್ಟ ಸೂತ್ರವನ್ನು ರೂಪಿಸಬೇಕಾದವರು ಯಾರು? ಅದಕ್ಕೆ ರಾಜ್ಯ ಮಾಡಬೇಕು ಎಂದು ಆಲೋಚನೆ ಮಾಡದೆ ಹೇಳಿಕೆಗಳನ್ನು ಕೊಡುತ್ತಿದ್ದರೆ ಉಪಯೋಗ ಏನು? ಸಂಕಷ್ಟ ಸೂತ್ರ ರಚನೆಗೆ ಇಷ್ಟು ಹೊತ್ತಿಗೆ ರಾಜ್ಯ ದೊಡ್ಡ ಮಟ್ಟದಲ್ಲಿ ಹೋರಾಟ ನಡೆಸಬೇಕಿತ್ತು.
ಒಂದು ಹನಿ ನೀರು ಬಿಡಲ್ಲ ಎನ್ನುತ್ತಲೇ ತಮಿಳುನಾಡಿಗೆ ಮತ್ತೆ ನೀರು. ತಮಿಳುನಾಡಿಗೆ KRS ಡ್ಯಾಂ ನಿಂದ 5 ಸಾವಿರ ಕ್ಯೂಸೆಕ್ ಗೂ ಹೆಚ್ಚು ನೀರು. ಪ್ರಾಧಿಕಾರದ ಆದೇಶ ಪಾಲಿಸಿ ಮಂಡ್ಯ ರೈತರಿಗೆ ಸರ್ಕಾರದ ದೋಖಾ..?
By accepting cookies, you agree to the storing of cookies on your device to enhance site navigation, analyze site usage, and assist in our marketing efforts.