ಕಾವೇರಿ ವಿಚಾರದಲ್ಲಿ ನಾವು ಕಾನೂನು, ಸಂವಿಧಾನ ಹಾಗೂ ಕೋರ್ಟ್ ಆದೇಶಕ್ಕೆ ಗೌರವ ನೀಡಬೇಕು. ಈ ಹಿಂದೆ ಇದ್ದ ಸರ್ಕಾರಗಳು ನ್ಯಾಯಾಲಯದ ಆದೇಶಗಳನ್ನು ಇದೇ ರೀತಿ ಪಾಲಿಸಿವೆ. ನೀರು ಬಿಡುಗಡೆ ಮಾಡಿವೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು.
ನೆಲ, ಜಲ, ಭಾಷೆಯ ಪ್ರಶ್ನೆ ಬಂದಾಗ ರಾಜಕಾರಣಕ್ಕಿಂತ ರಾಜ್ಯದ ಹಿತ ಮುಖ್ಯವೆಂದು ನಮ್ಮ ಸರಕಾರ ತೀರ್ಮಾನಿಸಿದೆ. ಇಲ್ಲಿ ನಾವೆಲ್ಲ್ರರೂ ಒಂದು ಎಂದು ಸಚಿವ ಎಂ ಬಿ ಪಾಟೀಲ ಅವರು ತಿಳಿಸಿದ್ದಾರೆ.
ನಮ್ಮ ಹಕ್ಕನ್ನು ಅವರಿಗೆ ಬಿಟ್ಟು ಕೊಟ್ಟು, ತಾವು ಮಾಡಿದ ತಪ್ಪಿಗೆ. ರೈತರಿಗೆ ಸುಪ್ರೀಂ ಕೋರ್ಟಿಗೆ ಹೋಗಿ ಅಂತ ಹೇಳುತ್ತಿದ್ದಾರೆ. ರೈತರು ಸುಪ್ರೀಂಕೋರ್ಟಿಗೆ ಹೋಗಬೇಕಾದರೆ ನಿಮ್ಮನ್ನು ಯಾಕೆ ಆಯ್ಕೆ ಮಾಡಬೇಕಿತ್ತು ಇವರು ಯಾಕೆ ಸರಕಾರದಲ್ಲಿ ಅಧಿಕಾರ ಮಾಡಬೇಕು ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು.
ಸಾಮಾಜಿಕ ತಾಣದಲ್ಲಿ ಕಾಂಗ್ರೆಸ್ ಸರಕಾರದ ವಿರುದ್ಧ ತೀವ್ರ ರೀತಿಯಲ್ಲಿ ಹರಿಹಾಯ್ದಿದ್ದಾರೆ. ಮೇಕೆದಾಟು ಪಾದಯಾತ್ರೆ ಹೈಡ್ರಾಮಾ ಆಡಿದ ಕಾಂಗ್ರೆಸ್, ಈಗ I.N.D.I.A.ಗೆ ಜೀವದಾನ ಮಾಡಲು ರಾಜ್ಯದ ಕಾವೇರಿ ಹಿತವನ್ನೇ ಬಲಿದಾನ ಮಾಡಿದೆ ಎಂದು ಕುಮಾರಸ್ವಾಮಿ ಆರೋಪಿಸಿದ್ದಾರೆ.
ಮಳೆಗಾಗಿ ಕೆಆರ್ಎಸ್ ನಿಗಮ ಅಧಿಕಾರಿಗಳಿಂದ ದೇವರ ಮೊರೆ
ಇಂದು ಕೆಆರ್ಎಸ್ ಜಲಾಶಯದ ಮುಂಭಾಗ ಹೋಮ-ಹವನ
ಕಾವೇರಿ ಪ್ರತಿಮೆ ಮುಂಭಾಗ ಯತಿಗಳಿಂದ ಪರ್ಜನ್ಯ ಜಪ
ಅರ್ಚಕ ಭಾನು ಪ್ರಕಾಶ್ ನೇತೃತ್ವದಲ್ಲಿ ವಿಶೇಷ ಪೂಜೆ
By accepting cookies, you agree to the storing of cookies on your device to enhance site navigation, analyze site usage, and assist in our marketing efforts.