ಗಂಭೀರ ಪ್ರಕರಣಗಳು ಎದುರಾದಾಗ ನಮ್ಮ ಅಧಿಕಾರಿಗಳು ತನಿಖೆಗೆ ಸೂಕ್ತರಲ್ಲ ಎನ್ನುವ ಅಭಿಪ್ರಾಯ ಬಂದರೆ,ಆ ವೇಳೆ ಸಿಬಿಐಗೆ ನೀಡುವ ಬಗ್ಗೆ ಚಿಂತನೆ ಮಾಡುತ್ತೇವೆ ಎಂದು ಡಿಕೆ ಶಿವಕುಮಾರ್ ಹೇಳಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಮೂಡ ಪ್ರಕರಣದಲ್ಲಿ ಎಫ್ಐಆರ್ ದಾಖಲಿಸಲು ಕೋರ್ಟ್ ಅನುಮತಿ ನೀಡಿದ ಬೆನ್ನಲ್ಲೇ ರಾಜ್ಯ ಸರ್ಕಾರ ಸಿ.ಬಿ.ಐ ರಾಜ್ಯದಲ್ಲಿ ಮುಕ್ತ ಅವಕಾಶವಿದ್ದುದನ್ನು ಹಿಂಪಡೆಯಲಾಗಿದೆ.
ವೈದ್ಯೆಯ ಅತ್ಯಾಚಾರ ಮತ್ತು ಕೊಲೆ ವಿಚಾರವಾಗಿ ದೇಶಾದ್ಯಂತ ವ್ಯಾಪಕ ಸುದ್ದಿಗೆ ಗ್ರಾಸವಾಗಿದ್ದ ಕೋಲ್ಕತಾದ RG Kar ಆಸ್ಪತ್ರೆಯ ಮಾಜಿ ಪ್ರಾಂಶುಪಾಲ ಸಂದೀಪ್ ಘೋಷ್ ರನ್ನು CBI ಅಧಿಕಾರಿಗಳು ನಿನ್ನೆ ಬಂಧಿಸಿದ್ದಾರೆ.
ಗುರುವಾರ ವಿಧಾನಸೌಧದ ಸಮ್ಮೇಳನಾ ಸಭಾಂಗಣದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಕೇಂದ್ರ ಬಿಜೆಪಿ ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ ನಡೆಯ ವಿರುದ್ಧ ಛೀಮಾರಿ ಹಾಕಿದ ಅವರು,“ ವಾಲ್ಮೀಕಿ ನಿಗಮದ ಹಗರಣ ಪ್ರಕರಣವನ್ನು ತನಿಖೆ ನಡೆಸುತ್ತಿರುವ ಇಡಿ ಅಧಿಕಾರಿಗಳು ವಿಚಾರಣೆಗೊಳಪಟ್ಟವರ ಮೇಲೆ ದಬಾವಣೆ ನಡೆಸುತ್ತಿದ್ದಾರೆ. ಈ ಹಗರಣದಲ್ಲಿ ಉನ್ನತ ಮಟ್ಟದಲ್ಲಿರುವವರೂ ಸಹ ಭಾಗಿಯಾಗಿದ್ದಾರೆ ಎಂದು ಹೇಳಿಕೆ ನೀಡುವಂತೆ ಒತ್ತಾಯಿಸುತ್ತಿದ್ದಾರೆ” ಎಂದು ಆರೋಪಿಸಿದರು.
NET, NEET, ಮತ್ತು ನಾಗರಿಕ ಸೇವಾ ಪ್ರವೇಶ ಪರೀಕ್ಷೆಗಳಂತಹ ಪರೀಕ್ಷೆಗಳನ್ನು ಕ್ರ್ಯಾಕಿಂಗ್ ಮಾಡುವ ಭರವಸೆಯಲ್ಲಿ ಸಾವಿರಾರು ಆಕಾಂಕ್ಷಿಗಳು ಹೆಚ್ಚಿನ ವೆಚ್ಚದಲ್ಲಿ ನೋಂದಾಯಿಸಿಕೊಳ್ಳುವ ಕೋಚಿಂಗ್ ಸೆಂಟರ್ಗಳ ಪಾತ್ರವನ್ನು ಸಹ ತನಿಖೆ ನಡೆಸಲಾಗುತ್ತಿದೆ ಎಂದು ಸಿಬಿಐ ಅಧಿಕಾರಿಗಳು ತಿಳಿಸಿದ್ದಾರೆ
DHFL Scam Dheeraj Wadhawan Arrest:ಇದು ದೇಶದ ಅತಿದೊಡ್ಡ ಬ್ಯಾಂಕ್ ಹಗರಣ. ಇಲ್ಲಿ ನಡೆದಿರುವುದು 34,000 ಕೋಟಿ ರೂ.ಗಳ ಬ್ಯಾಂಕ್ ವಂಚನೆ ಹಗರಣ. ಈ ಹಗರಣದ ಆರೋಪಿ ಧೀರಜ್ ವಾಧವನ್ ಯಾರು?
ಹಿಂದೆ ಬಿಜೆಪಿಯವರೇ ಸಿಬಿಐಯನ್ನು ಕರಪ್ಷನ್ ಬ್ಯೂರೋ ಆಫ್ ಇನ್ವೆಸ್ಟಿಗೇಷನ್ ಎಂದು ಬಣ್ಣಿಸಿದ್ದಾರೆ. ದೇವೇಗೌಡರು ಚೋರ್ ಬಚಾವೋ ಸಂಸ್ಥೇ ಎಂದು ಹೇಳಿದ್ದರು. ಈಗ ಸಿಬಿಐ ಮೇಲೆ ವಿಶ್ವಾಸ ಬಂತಾ? ನನಗೆ ಸಿಬಿಐ ಮೇಲೆ ವಿಶ್ವಾಸವಿದೆ- ಮುಖ್ಯಮಂತ್ರಿ ಸಿದ್ದರಾಮಯ್ಯ
ನೇಹಾ ಹತ್ಯೆ ಆರೋಪಿಗೆ ಕಠಿಣ ಶಿಕ್ಷೆ ನೀಡಬೇಕೆಂದು ಸರ್ಕಾರಿ ಅಭಿಯೋಜಕರೊಂದಿಗೆ ಮಾತನಾಡಿದ್ದು, ಸರ್ಕಾರ ಈಗಾಗಲೇ ಆರೋಪಿಯನ್ನು ಬಂಧಿಸಿದೆ., ಸಿಐಡಿ ತನಿಖೆ ನಡೆದಿದ್ದು ಆರೋಪಪಟ್ಟಿಯನ್ನು ತಯಾರಿಸಲಿದೆ ಎಂದರು.
ಸಿಬಿಐನಲ್ಲಿ ದಾಖಲಾಗಿದ್ದ ಪ್ರಕರಣ ಲೋಕಾಯುಕ್ತಕ್ಕೆ ವರ್ಗಾವಣೆ
ಲೋಕಾಯುಕ್ತದಿಂದ ಡಿ.ಕೆ. ಶಿವಕುಮಾರ್ಗೆ ನೋಟೀಸ್ ಜಾರಿ
ಪ್ರಕರಣವನ್ನ ಲೋಕಾಯುಕ್ತಕ್ಕೆ ವರ್ಗಾವಣೆ ಮಾಡಿದ್ದ ಸರ್ಕಾರ
ಬೆಂಗಳೂರು ನಗರ ಲೋಕಾಯುಕ್ತ ಕಚೇರಿಯಲ್ಲಿ ದಾಖಲಾಗಿರೋ ಕೇಸ್
Akhilesh Uadav CBI Summon: ಸಿಬಿಐ ಅಖಿಲೇಶ್ ಯಾದವ್ ಅವರಿಗೆ ಸಮನ್ಸ್ ಕಳುಹಿಸಿದ ನಂತರ, ಯುಪಿ ರಾಜಕೀಯ ಬಿಸಿ ಹೆಚ್ಚಾಗಿದೆ. ಕೇಂದ್ರೀಯ ಸಂಸ್ಥೆಗಳನ್ನು ಬಿಜೆಪಿ ದುರುಪಯೋಗಪಡಿಸಿಕೊಂಡಿದೆ ಎಂದು ಇಂಡಿಯಾ ಮೈತ್ರಿಕೂಟದಲ್ಲಿ ಸೇರ್ಪಡೆಗೊಂಡಿರುವ ಎಲ್ಲಾ ಘಟಕಗಳು ಆರೋಪಿಸುತ್ತಿದೆ.
ಸತ್ಯವನ್ನು ಎದುರಿಸಲಾಗದ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ನಿರೀಕ್ಷೆಯಂತೆ ಸಿಬಿಐ ತನಿಖೆ ಮೂಲಕ ಚಿತ್ರಹಿಂಸೆ ನೀಡಲು ಹೊರಟಿದೆ ಎಂದು ಸಿಎಂ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿದ ದಾಖಲೆಗಳನ್ನು ಒದಗಿಸುವಂತೆ ಸಿಬಿಐಗೆ ಲೋಕಾಯುಕ್ತ ಪೊಲೀಸರು ಪತ್ರ ಬರೆದಿದ್ದಾರೆ. ಆದರೆ ಇಲ್ಲಿಯವರೆಗೂ ಸಹ ಸಿಬಿಐ ಯಾವುದೇ ದಾಖಲೆಗಳನ್ನು ಲೋಕಾಯುಕ್ತಕ್ಕೆ ನೀಡಿಲ್ಲ.
ಡಿಸೆಂಬರ್ 16, 2023 ರಂದು ಬ್ಯಾಂಕ್ ಆಫ್ ಇಂಡಿಯಾದ ಶಹಾಪುರ ಬೆಳಗಾವಿ ಶಾಖೆಗೆ 2001 ನೇ ವರ್ಷದಲ್ಲಿ 90 ಲಕ್ಷ ವಂಚನೆ ನಡೆಸಿದ ಪ್ರಕರಣದಲ್ಲಿ ಬ್ಯಾಂಕನ ಆಗಿನ ಮ್ಯಾನೇಜರ್ ಡಿ.ವಿ. ನಾರ್ವೇಕರ, ಪೂನಂ ಟ್ರೇಡಿಂಗ್ ಕಂಪನಿಯ ನಿರ್ದೇಶಕ ಆನಂದ್ ಶೇಷು, ಕಂಪನಿಯ ಚಾರ್ಟರ್ಡ್ ಅಕೌಂಟೆಂಟ್ ಎನ್.ಆದಿನಾರಾಯಣ ಮತ್ತು ದೇವರಾಜ್ ಹಾಗೂ ಹೇಮಲತಾ ದಂಪತಿಗಳಿಗೆ ಧಾರವಾಡದ ಸಿಬಿಐ ವಿಶೇಷ ನ್ಯಾಯಾಲಯವು 1 ವರ್ಷದ ಕಠಿಣ ಸಜೆ ಹಾಗೂ 1,60,000/- ರೂ.ಗಳ ದಂಡ ವಿಧಿಸಿ ಆದೇಶಿಸಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.