ಪ್ರತಿಕೂಲ ವಾತಾವರಣದಿಂದಾಗಿ ವಾಯುಸೇನೆಯ ಕಿರಣ್ ಏರ್ ಪಥ್ U692 ವಿಮಾನ ಚಾಮರಾಜನಗರ ತಾಲೂಕಿನ ಭೋಗಾಪುರ ಗ್ರಾಮದಲ್ಲಿ ಪತನಗೊಂಡಿದೆ. ಪೈಲೆಟ್ ಗಳಿಗೆ ಕುತ್ತಿಗೆ ಬಳಿ ಸಣ್ಣಪುಟ್ಟ ಗಾಯವಾಗಿದ್ದು ಅಪಾಯದಿಂದ ಪಾರಾಗಿದ್ದಾರೆ.
ಚಾಮರಾಜನಗರ ಜಿಲ್ಲೆಯ ಯಳಂದೂರು ತಾಲೂಕಿನ ಹೊನ್ನೂರು ಗ್ರಾಮಕ್ಕೆ ವಿದ್ಯುತ್ ಬಿಲ್ ನೀಡಲು ತೆರಳಿದ್ದ ಸೆಸ್ಕ್ ಸಿಬ್ಬಂದಿಗೆ ರೈತ ಮುಖಂಡರು "ಕೈ ಗ್ಯಾರಂಟಿ " ಶಾಕ್ ಕೊಟ್ಟಿದ್ದು ಬಿಲ್ ನ್ನೇ ಪಡೆಯದೇ ವಾಪಾಸ್ ಕಳುಹಿಸಿದ್ದಾರೆ.
ಮಾದೇಶ್ವರನ ಅಣೆ... ನನ್ನ ಮಕ್ಕಳಾಣೆ ನಾನಾಗಿ ಇಲ್ಲಿಗೆ ಬರಲಿಲ್ಲ... ಹೈಕಮಾಂಡ್ ಹೇಳಿದ್ದರಿಂದ ಚಿನ್ನ ದಂತಹ ಗೋವಿಂದರಾಜ ನಗರ ಕ್ಷೇತ್ರ ಬಿಟ್ಟು ಇಲ್ಲಿಗೆ ಬಂದೆ. ಪಕ್ಷ ತಾಯಿಗೆ ಸಮಾನ ಪಕ್ಷದೊಳಗಿದ್ದು ದ್ರೋಹ ಬಗೆಯುವುದು ಎಷ್ಟರಮಟ್ಟಿಗೆ ಸರಿ ??
Rajiv Gandhi Jyoti Yatra: ಚಾಮರಾಜನಗರದ ಮುಖ್ಯದ್ವಾರದಲ್ಲಿ ಜ್ಯೋತಿಯನ್ನು ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಬಿ.ಕೆ. ರವಿಕುಮಾರ್ ಹಾಗೂ ನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಹಮದ್ ಅಸ್ಗರ್ ನೇತೃತ್ವದಲ್ಲಿ ಕಾಂಗ್ರೆಸ್ ಮುಖಂಡರು ಜ್ಯೋತಿ ಸ್ವೀಕರಿಸಿ ಪ್ರಮುಖ ಬೀದಿಗಳಲ್ಲಿ ಜಾಗೃತಿ ಜಾಥಾ ನಡೆಸಿ, ತಮಿಳುನಾಡಿನ ಶ್ರೀಪೆರಂಬದೂರಿಗೆ ಬೀಳ್ಕೊಟ್ಟರು.
ತಮ್ಮಿಚ್ಛೆಯ ಅಭ್ಯರ್ಥಿಗಳು ಗೆಲ್ಲುತ್ತಾರೆ ಎಂಬ ಹುಮ್ಮಸಿನಲ್ಲಿ ಲಕ್ಷ-ಲಕ್ಷ ಹಣ ಹಿಡಿದು ಬಾಜಿಗೆ ಆಹ್ವಾನಿಸಿದ ಇಬ್ಬರಿಗೆ ಖಾಕಿ ಬಿಸಿ ಮುಟ್ಟಿಸಿ ಬಂಧಿಸಿರುವ ಘಟನೆ ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲದಲ್ಲಿ ನಡೆದಿದೆ.
Karnataka Vidhansabha Chunav 2023 Latest Update: ಮತದಾನ ಮಾಡಲು ಹಳೆ ಮಾಟಳ್ಳಿ ಗ್ರಾಮದಿಂದ ತೋಕೆರೆ ಗ್ರಾಮಕ್ಕೆ ತೆರಳುತ್ತಿದ್ದ ಸಂದರ್ಭದಲ್ಲಿ ಕಾಡಾನೆ ದಾಳಿ ನಡೆಸಿದ ಪರಿಣಾಮ ವ್ಯಕ್ತಿ ಸ್ಥಳದಲ್ಲೇ ಮೃತಪಟ್ಟಿದ್ದಾನೆ ಎಂದು ವರದಿ ಆಗಿದೆ. ಮೃತ ವ್ಯಕ್ತಿಯನ್ನು ಹನೂರು ತಾಲೂಕಿನ ತೋಕರೆ ಗ್ರಾಮದ ಪುಟ್ಟಸ್ವಾಮಿ (42) ಎಂದು ಗುರುತಿಸಲಾಗಿದೆ.
ಬಿರುಸಿನ ಮತದಾನದ ನಡುವೆ ಕೈ ಕೊಟ್ಟ EVM. ಚಾಮರಾಜನಗರ ಮತಗಟ್ಟೆಯ ಇವಿಎಂನಲ್ಲಿ ದೋಷ. ಸಂತೇಮರಹಳ್ಳಿ ವೃತ್ತ ಸಮೀಪದ ಮತಗಟ್ಟೆಯಲ್ಲಿ ಘಟನೆ. ಉಪ್ಪಾರ ಬೀದಿಯ ಮತಗಟ್ಟೆ 69ರಲ್ಲಿ ತಾಂತ್ರಿಕ ದೋಷ. ಬಳಿಕ ಅಧಿಕಾರಿಗಳಿಂದ ಸರಿಪಡಿಸುವ ಕಾರ್ಯ ಪೂರ್ಣ. ಮತದಾರರು ಅರ್ಧ ಗಂಟೆ ಕಾದು ಕಾದು ಅಸಮಾಧಾನ. ಚಾಮರಾಜನಗರದ ಉಳಿದೆಲ್ಲೆಡೆ ಬಿರುಸಿನ ಮತದಾನ.
Karnataka Vidhansabha Chunav Latest Updates: ಗುಂಡ್ಲುಪೇಟೆ ತಾಲೂಕಿನ ಬಾಚಹಳ್ಳಿ ಗ್ರಾಪಂ ವ್ಯಾಪ್ತಿಯ ಚಿಕ್ಕ ಎಲಚೆಟ್ಟಿ ಗ್ರಾಮದಲ್ಲಿ 101 ಅರ್ಹ ಮತದಾರರಿದ್ದಾರೆ. ಆದರೆ, ಗ್ರಾಮಕ್ಕೆ ಸರಿಯಾದ ರಸ್ತೆ ಹಾಗೂ ಬಸ್ ಸೌಕರ್ಯ ಇಲ್ಲವೆಂದು ಗ್ರಾಮಸ್ಥರು ಅಸಮಾಧಾನಗೊಂಡು ಮತದಾನ ಬಹಿಷ್ಕಾರ ಮಾಡಿದ್ದಾರೆ.
Karnataka Vidhansabha Chunav Latest Updates: ಮತಗಟ್ಟೆಯತ್ತ ವನವಾಸಿಗಳನ್ನು ಸೆಳೆಯುವ ಉದ್ದೇಶದಿಂದ ಸ್ವಾಗತ ಕಮಾನು, ಬಣ್ಣಬಣ್ಣದ ಬಾವುಟಗಳು, ಜನಪದ ಚಿತ್ರಗಳನ್ನು ಮತಗಟ್ಟೆಯಲ್ಲಿ ರಚಿಸಿ ಹೊಸ ಲುಕ್ ಕೊಟ್ಟಿದ್ದು ಸೋಲಿಗರು ಸಂಭ್ರಮದಿಂದ ಬಂದು ತಮ್ಮ ಮತದಾನದ ಹಕ್ಕನ್ನು ಚಲಾಯಿಸುತ್ತಿದ್ದಾರೆ.
Karnataka Assembly Elections: ಚಾಮರಾಜನಗರದ ಪದವಿ ಕಾಲೇಜು ಹಾಗೂ ಕೊಳ್ಳೆಗಾಲದ ಎಂ.ಜಿ.ಎಸ್.ವಿ. ಪದವಿಪೂರ್ವ ಕಾಲೇಜಿನ ಮಸ್ಟರಿಂಗ್ ಕೇಂದ್ರಗಳಿಂದ ಜಿಲ್ಲೆಯ ನಾಲ್ಕು ವಿಧಾನಸಭಾ ಕ್ಷೇತ್ರಗಳಾದ ಚಾಮರಾಜನಗರ, ಗುಂಡ್ಲುಪೇಟೆ, ಕೊಳ್ಳೇಗಾಲ ಹಾಗೂ ಹನೂರಿನ ವಿವಿಧ ಮತಗಟ್ಟೆಗಳಿಗೆ ಇವಿಎಂ ಹಿಡಿದು ಸಿಬ್ಬಂದಿ ತೆರಳಿದ್ದಾರೆ.
Karnataka Assembly Election: ಸಿದ್ದರಾಮಯ್ಯ ಅವರಂತು ಪ್ರಧಾನಿ ಮೋದಿ ವಿರುದ್ಧ ವಾಗ್ದಾಳಿ ನಡೆಸಿ, ಪ್ರಧಾನಿ ಇಲ್ಲಿಗೆ ಬಂದು ಭಾವನಾತ್ಮಕವಾಗಿ ಮಾತನಾಡಿ ಹೋಗುತ್ತಾರೆ. ಆದರೆ, 40% ಲಂಚದ ಬಗ್ಗೆ ಅವರೆಲ್ಲೂ ಮಾತನಾಡಲ್ಲ, ದೂರು ಕೊಟ್ಟರೂ ಕ್ರಮ ತೆಗೆದುಕೊಂಡಿಲ್ಲ, ಲಂಚ ತಿನ್ನಲ್ಲ -ತಿನ್ನಲು ಬಿಡಲ್ಲ ಎನ್ನುತ್ತಾರೆ. ಇಲ್ಲಿ ಬಿಜೆಪಿ ಅವರು 40% ಭ್ರಷ್ಟಾಚಾರ ನಡೆಸುತ್ತಿದ್ದಾರೆ ಎಂದು ಟೀಕಿಸಿದರು.
Karnataka Assembly Election: ಗುಂಡ್ಲುಪೇಟಯಲ್ಲಿ ಚುನಾವಣಾ ಪ್ರಚಾರದ ಬಳಿಕ ಚಾಮರಾಜನಗರಕ್ಕೆ ಎಂಟ್ರಿ ಕೊಟ್ಟ ಸುದೀಪ್, ಸಚಿವ ವಿ. ಸೋಮಣ್ಣ ಪರ ಪ್ರಚಾರ ನಡೆಸಿದರು. ಚಾಮರಾಜನಗರದ ಸಂತೇಮರಹಳ್ಳಿ ವೃತ್ತದಲ್ಲಿ 5 ಸಾವಿರಕ್ಕೂ ಅಧಿಕ ಮಂದಿ ಅಭಿಮಾನಿಗಳ ಜಮಾಯಿಸಿ ಕಿಚ್ಚ ಸುದೀಪ್ ಅವರಿಗೆ ಅದ್ಧೂರಿ ಸ್ವಾಗತ ಕೋರಿದರು.
Karnataka Assembly Election 2023: ಚಾಮರಾಜನಗರ BSP ಅಭ್ಯರ್ಥಿ ಹ.ರಾ.ಮಹೇಶ್ ಆನೆ ಮಾದರಿ ಪ್ರಚಾರ ರಥವನ್ನು ನಿರ್ಮಾಣ ಮಾಡಿಸಿಕೊಂಡಿದ್ದು, ಆನೆ ಮೇಲೆ ಕುಳಿತು ಭರ್ಜರಿ ಪ್ರಚಾರ ನಡೆಸಿ ಗಮನ ಸೆಳೆಯುತ್ತಿದ್ದಾರೆ.
ಕರ್ನಾಟಕದ ಪ್ರಮುಖ ದೇಗುಲಗಳಲ್ಲಿ ಒಂದಾದ ಚಾಮರಾಜನಗರದ ಜಿಲ್ಲೆಯ ಹನೂರು ತಾಲೂಕಿನ ಮಲೆಮಹದೇಶ್ವರ ಬೆಟ್ಟದಲ್ಲಿ ಶುಕ್ರವಾರ ಹುಂಡಿ ಎಣಿಕೆ ಕಾರ್ಯ ನಡೆದಿದ್ದು 2.28 ಕೋಟಿ ರೂ. ಸಂಗ್ರಹವಾಗಿದೆ.
ಚಾಮರಾಜನಗರದಲ್ಲಿ ಚಾಣಕ್ಯನ ರೋಡ್ ಶೋಗೆ ಕ್ಷಣಗಣನೆ. ಹೆದ್ದಾರಿ-766 ಮೂಲಕ ಚಾಮರಾಜನಗರ ರಸ್ತೆಯಲ್ಲಿ ಜಾಥಾ. ಅಮಿತ್ ಶಾ ಆಗಮನದ ಹಿನ್ನೆಲೆಯಲ್ಲಿ ಪೊಲೀಸ್ ಬಿಗಿ ಭದ್ರತೆ. ರೋಡ್ ಶೋ ಭದ್ರತೆಗಾಗಿ 800 ಮಂದಿ ಪೊಲೀಸರ ನಿಯೋಜನೆ.
ಇಂದು ಚಾಮುಂಡೇಶ್ವರಿ ದರ್ಶನ ಪಡೆಯಲಿರುವ ಅಮಿತ್ ಶಾ. ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ ದೇವಿಯ ದರ್ಶನ. ಬೆಳಗ್ಗೆ 10 ಗಂಟೆಗೆ ಚಾಮುಂಡಿ ಬೆಟ್ಟಕ್ಕೆ ಅಮಿತ್ ಶಾ ಭೇಟಿ. ದರ್ಶನದ ಬಳಿಕ ಚಾಮರಾಜನಗರದತ್ತ ತೆರಲಿರುವ ʻಚಾಣಕ್ಯʼ. ಗುಂಡ್ಲುಪೇಟೆಯಲ್ಲಿ ರೋಡ್ ಶೋನಲ್ಲಿ ಅಮಿತ್ ಶಾ ಭಾಗಿ. ಗುಂಡ್ಲುಪೇಟೆ ಅಭ್ಯರ್ಥಿ ನಿರಂಜನ್ ಕುಮಾರ್ ಪರವಾಗಿ ಪ್ರಚಾರ.