ಕಾರು ಭೀಮನಬೀಡು ಕಡೆಯಿಂದ ಗುಂಡ್ಲುಪೇಟೆ ಕಡೆಗೆ ಹೋಗುತ್ತಿತ್ತು. ಚಾಲಕ ಮದ್ಯಪಾನ ಮಾಡಿದ್ದ ಕಾರಣ ರಸ್ತೆಯ ಬಲಭಾಗದಲ್ಲಿ ನಿಂತಿದ್ದವರಿಗೆ ಡಿಕ್ಕಿಯಾಗಿ ಶೆಡ್ಗೆ ನುಗ್ಗಿದ ಕಾರು ಜಮೀನೊಳಗೆ ಬಂದು ನಿಂತಿದೆ. ಇದರಿಂದ ಶೆಡ್ ಸಂಪೂರ್ಣ ಹಾನಿಯಾಗಿದ್ದು, ಬೈಕ್ ಕೂಡ ನಜ್ಜುಗುಜ್ಜಾಗಿದೆ.
ಘಟನೆ ಸಂಬಂಧ ಮಲೆ ಮಹದೇಶ್ವರ ಬೆಟ್ಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.ಯುವಕನ ಕಾಮಚೇಷ್ಠೆಗೆ ಈಗಲಾದರೂ ಪೊಲೀಸರು ನಿರ್ದಾಕ್ಷಿಣ್ಯ ಕ್ರಮ ಕೈಗೊಂಡು ಕುಟುಂಬಕ್ಕೆ ನ್ಯಾಯ ಕೊಡಿಸುತ್ತಾರಾ ಕಾದು ನೋಡಬೇಕಿದೆ.
ಒಂದೇ ಕುಟುಂಬದ ನಾಲ್ವರು ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿ, ಓರ್ವ ಮೃತಪಟ್ಟಿರುವ ಧಾರುಣ ಘಟನೆ ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟದ ತಪ್ಪಲಾದ ತಾಳುಬೆಟ್ಟದಲ್ಲಿ ನಡೆದಿದೆ.
ಶುಕ್ರವಾರ ಸಂಜೆ 1 ತಾಸಿಗೂ ಅಧಿಕ ಕಾಲ ಸುರಿದ ಮಳೆಯಿಂದಾಗಿ ಚಾಮರಾಜನಗರದ ಎಲ್ಲಾ ರಸ್ತೆಗಳಲ್ಲೂ ಹೊಳೆಯಂತೆ ನೀರು ಹರಿದ ಪರಿಣಾಮ ವಾಹನ ಸವಾರರು ಪರದಾಡಿದರು. ಈ ಕುರಿತ ವರದಿ ಇಲ್ಲಿದೆ ನೋಡಿ..
ಕೆರೆಯ ಬಳಿ ಆಸ್ವಸ್ಥಗೊಂಡು ಬಿದ್ದಿದ್ದ ಆನೆ ಚಿಕಿತ್ಸೆಗೆ ಸ್ಪಂದಿಸದೇ ಅಸುನೀಗಿರುವ ಘಟನೆ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶ, ಹೆಡಿಯಾಲ ಉಪ-ವಿಭಾಗದ ವ್ಯಾಪ್ತಿಯ ಮೊಳೆಯೂರು ವಲಯದ ಹಿಡುಗಲಪಂಚೀ ಕೆರೆ ಬಳಿ ನಡೆದಿದೆ.
ಕೊಳ್ಳೇಗಾಲದಿಂದ ಹನೂರಿನ ಒಡೆಯರಪಾಳ್ಯಕ್ಕೆ ತೆರಳುವ ಬಸ್ ನಲ್ಲಿ ಡೋರ್ ಬಳಿ ನಿಂತಿದ್ದ ಮಹಿಳೆಗೆ ಹಿಂದಕ್ಕೆ ಹೋಗಿ ಎಂದು ಕಂಡಕ್ಟರ್ ಹೇಳಿದ್ದಕ್ಕೆ ಮಾತಿಗೆ ಮಾತು ಬೆಳೆದು ಕಂಡಕ್ಟರ್ ಕೆನ್ನೆಗೆ ಮಹಿಳೆ ಬಾರಿಸಿರುವ ಘಟನೆ ಇಂದು ಮಧ್ಯಾಹ್ನ ನಡೆದಿದೆ.
ಕುರಿ ಸಾಕಣಿಗೆ ಮಾಡುತ್ತಿದ್ದ ಮಾಲೀಕರು ಕಡು ಬಡವರಾಗಿದ್ದು, ಕುರಿಗಳನ್ನೆ ನಂಬಿ ಜೀವನ ನಡೆಸುತ್ತಿದ್ದರು.ಇದೀಗ 10 ಕುರಿಗಳು ಒಮ್ಮೆಲೆ ಸಾವನ್ನಪ್ಪಿರುವ ಕಾರಣ ಅಪಾರ ನಷ್ಟ ಉಂಟಾಗಿದೆ.ಇದನ್ನು ಗಂಭೀರವಾಗಿ ತೆಗೆದುಕೊಂಡು ಈ ಕೂಡಲೇ ಪಶು ಸಂಗೋಪನಾ ಇಲಾಖೆ ಅಧಿಕಾರಿಗಳು ಸೂಕ್ತ ಪರಿಹಾರ ದೊರಕಿಸಿಕೊಡಬೇಕೆಂದು ರೈತ ಸಂಘದ ಜಿಲ್ಲಾ ಕಾರ್ಯಾಧ್ಯಕ್ಷ ಶಿವಪುರ ಮಹದೇವಪ್ಪ ಒತ್ತಾಯಿಸಿದ್ದಾರೆ
ಚಾಮರಾಜನಗರ ಜಿಲ್ಲೆಯಲ್ಲಿ ಮುಂದುವರೆದ ದಟ್ಟನೆಯ ಮಂಜು.. ಬೆಳಗ್ಗೆ ಏಳು ಗಂಟೆಯಾದರೂ ನಗರದೆಲ್ಲೆಡೆ ದಟ್ಟನೆಯ ಮಂಜು.. ವಾಯು ವಿಹಾರಕ್ಕೆ ತೆರಳಿದವರಿಗೆ ಮುಸುಕಿನ ಮಂಜು... ವಾಹನ ಸವಾರರು ಲೈಟ್ ಹಾಕಿಕೊಂಡು ಓಡಾಡುವಷ್ಟು ಮಂಜಿನ ದಟ್ಟನೆ
Chamarajanagar News : ವಾರಿಗೆಯಲ್ಲಿ ದೊಡ್ಡಪ್ಪನ ಮಗಳಾದ 15 ವರ್ಷದ ಅಪ್ರಾಪ್ತ ಬಾಲಕಿಯನ್ನು ಈತ ಪುಸಲಾಯಿಸಿ ಲೈಂಗಿಕ ದೌರ್ಜನ್ಯ ಎಸಗಿದ್ದಲ್ಲದೇ, ಬಲವಂತದಿಂದ ದೈಹಿಕ ಸಂಪರ್ಕ ನಡೆಸಿದ್ದನು.
Chamarajanagar : ಅಂತರ್ಜಾತಿ ವಿವಾಹ ಆಗಿದ್ದಕ್ಕೆ ಗ್ರಾಮದ ಮುಖಂಡರು ಅಮಾನವೀಯವಾಗಿ ನಡೆದುಕೊಂಡಿರುವ ಘಟನೆ ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ತಾಲ್ಲೂಕಿನ ಕುಣಗಳ್ಳಿ ಗ್ರಾಮದಲ್ಲಿ ನಡೆದಿದೆ.
ವರ್ಷ ಬದಲಾಗುತ್ತಲೇ ಇವೆ, ಅಭಿವೃದ್ಧಿಯ ಹೆಸರುಗಳು ಜನಪ್ರತಿನಿಧಿಗಳ ಬಾಯಿಂದ ಕೇಳಿ ಬರುತ್ತಿವೆ. ಸ್ಮಾರ್ಟ್ ಸಿಟಿಗಳಾಗುತ್ತಿವೆ. ಇಂತಹ ಪರಿಸ್ಥಿತಿ ನಡುವೆಯೂ ಅಮಾನವೀಯ ಘಟನೆಯೊಂದು ನಡೆದಿದೆ. ಅನಾರೋಗ್ಯಕ್ಕೀಡಾದ ವ್ಯಕ್ತಿಯನ್ನು ವಾಹನ ಸೌಕರ್ಯ ಇಲ್ಲದಿದ್ದರಿಂದ 10 ಕಿಮೀ. ಡೋಲಿ ಮೂಲಕ ಆಸ್ಪತ್ರೆಗೆ ರವಾನಿಸಿರುವ ಘಟನೆ ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟದ ತಪ್ಪಲಿನ ದೊಡ್ಡಾನೆ ಗ್ರಾಮದಲ್ಲಿ ಇಂದು ನಡೆದಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.