Karnataka By Election Results 2024: ಉಪಚುನಾವಣೆ ನಡೆಯುತ್ತಿರುವ ಮೂರು ಕ್ಷೇತ್ರಗಳಲ್ಲಿ ಅತ್ಯಾಕರ್ಷಕವಾದ ಕ್ಷೇತ್ರವೆಂದು ಕರೆಯಲ್ಪಟ್ಟಿರುವ ಚೆನ್ನಪಟ್ಟಣದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸಿಪಿ ಯೋಗೆಶ್ವರ್ ಹಾಗೂ ನಿಖಿಲ್ ಕುಮಾರಸ್ವಾಮಿ ಅವರ ನಡುವೆ ಭರ್ಜರಿ ಪೈಪೋಟಿ ಇದೆ..
ಚನ್ನಪಟ್ಟಣ ಉಪಚುನಾವಣೆಯಲ್ಲಿ ಮೊಮ್ಮಗ ನಿಖಿಲ್ ಪರವಾಗಿ ಮತಯಾಚನೆ ಮಾಡಿದ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ಅವರು, ಪರೋಕ್ಷವಾಗಿ ಸಿಪಿ ಯೋಗೇಶ್ವರ್ ವಿರುದ್ಧ ಆಕ್ರೋಶ ಹೊರಹಾಕಿ ಪಕ್ಷಾಂತರ ಮಾಡಿದ ಅವರನ್ನು ಕನ್ವರ್ಟಡ್ ಕಾಂಗ್ರೆಸ್ ಜೆಂಟಲ್‌ಮೆನ್ ಎಂದು ಟೀಕಿಸಿದರು
Channapatna by-election: ನಿಖಿಲ್ ಕುಮಾರಸ್ವಾಮಿ ಅವರು ಈಗಾಗಲೇ ಸ್ಪರ್ಧೆ ಮಾಡಲ್ಲ ಎಂದು ಹೇಳಿದ್ದಾರೆ. ಸೀಟು ಅವರದ್ದೇ ಆಗಿರುವುದರಿಂದ ಹಾಗೂ ಎನ್‌ಡಿಎ ಪಾರ್ಟ್‌ನರ್ ಆಗಿರುವುದರಿಂದ ಜೆಡಿಎಸ್‌ನವರ ಸಲಹೆ ಪ್ರಮುಖವಾಗಿರುತ್ತದೆ. ಇನ್ನು ಎರಡು ದಿನದಲ್ಲಿ ಎಲ್ಲವೂ ತೀರ್ಮಾನವಾಗಲಿದೆ ಎಂದರು.
Channapatna By-Election 2024: ರಾಜೀನಾಮೆ ನೀಡಿದ ಬಳಿಕ ತಾವು ಸ್ವತಂತ್ರ ಅಭ್ಯರ್ಥಿಯಾಗಿ ಉಪಚುನಾವಣೆಯಲ್ಲಿ ಕಣಕ್ಕಿಳಿಯಲಿದ್ದೇನೆ ಎಂದು ಯೋಗೇಶ್ವರ್ ತಿಳಿಸಿದ್ದಾರೆ. ಮೂಲಗಳ ಪ್ರಕಾರ ಅವರು ಕಾಂಗ್ರೆಸ್‌ನಿಂದ ಸ್ಪರ್ಧಿಸುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.
ನಾನು ಕಾಂಗ್ರೆಸ್‌ಗೆ ಹೋಗುವ ಬಗ್ಗೆ ಆಲೋಚನೆ ಮಾಡಿಲ್ಲ. ಯಾರೂ ನನ್ನನ್ನು ಮಾತನಾಡಿಸಲಿಲ್ಲ. ಡಿಕೆಶಿ ಅವರು ಏನೇನೋ ಮಾತನಾಡುತ್ತಾರೆ. ಅದು ಅವರ ರಾಜಕೀಯ ತಂತ್ರಗಾರಿಕೆ. ಅವರಿಗೆ ಯಾವಾಗ ಏನು ಮಾತಾಡಬೇಕು ಅಂತಾ ಗೊತ್ತಿದೆ ಎಂದು ಸಿಪಿ ಯೋಗೇಶ್ವರ್ ಹೇಳಿದ್ದಾರೆ.
“ನಾನು ಹುಟ್ಟುತ್ತಾ ಕೃಷಿಕ, ವೃತ್ತಿಯಲ್ಲಿ ನಾನು ಉದ್ದಿಮೆದಾರ ಎಂದು ಹೇಳಿಕೊಂಡಿದ್ದೇನೆ. ನೀನು ಆ ರೀತಿ ಹೇಳಿಲ್ಲ. ನಾನು ಪಂಚೆಯುಟ್ಟು ಹೊಲ ಉಳುಮೆ ಮಾಡುತ್ತಿದ್ದೇನೆ ಎಂದು ಹೇಳಿಕೊಂಡಿದ್ದೀಯ. ಮಣ್ಣಿನ ಮಗ ಎಂದು ಹೇಳಿದ್ದೀಯ. ನಿಮ್ಮ ತಂದೆ ಮಣ್ಣಿನ ಮಗನಾಗಿರಬಹುದು. ಆದರೆ ನೀವಲ್ಲ”
ಚನ್ನಪಟ್ಟಣ ಕೈ ವಶಕ್ಕೆ ಡಿಕೆಶಿ ಸರ್ಕಸ್ ಹಲವಾರು ಸರ್ಕಸ್ ನಡೆಸಿದ್ದಾರೆ.. ಶತಾಯಗತಾಯ ಗೆಲ್ಲಲೇಬೇಕೆಂದು ಡಿಕೆಶಿ ರಾಮನಗರ ಹೆಸರು ಬದಲಾವಣೆಗೆ ಪ್ಲಾನ್ ನಡೆಸಿದ್ದಾರೆ.. ಆದ್ರೆ ಇದಕ್ಕೆ ಕೇಂದ್ರ ಸಚಿವ ಕುಮಾರಸ್ವಾಮಿ ಸೇರಿದಂತೆ ಹಲವರು ವಿರೋಧ ವ್ಯಕ್ತಪಡಿಸಿದ್ದಾರೆ..
DCM DK Shivakumar: ಚನ್ನಪಟ್ಟಣದ ಕೋಟೆ ಮಾರಮ್ಮ ದೇವಸ್ಥಾನದ ಆವರಣದಲ್ಲಿ ನಡೆದ ಸಾರ್ವಜನಿಕರ ಅಹವಾಲುಗಳನ್ನು ಸ್ವೀಕರಿಸಿದ ನಂತರ ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿದ ಅವರು "ಎಲ್ಲಾ ಹಗರಣಗಳು ನಡೆದಿರುವುದು ಬಿಜೆಪಿ ಕಾಲದಲ್ಲಿ. ಅವರ ಎಲ್ಲಾ ಪ್ರಶ್ನೆಗಳಿಗೆ ಸದನದಲ್ಲಿ ಉತ್ತರ ಕೊಡುತ್ತೇವೆ" ಎಂದು ತಿರುಗೇಟು ನೀಡಿದರು.
"ಚನ್ನಪಟ್ಟಣದಲ್ಲಿ ಶಾಸಕರು ಇದ್ದಿದ್ದರೆ ನಾನೇಕೆ ಬರುತ್ತಿದ್ದೆ? ಕುರ್ಚಿ ಖಾಲಿ ಇರುವುದಕ್ಕೆ ಬಂದು ಕುಳಿತಿದ್ದೇನೆ. ಬೇರೆಯವರು ಕುರ್ಚಿಯಲ್ಲಿ ಕುಳಿತಿದ್ದರೆ ಬರುತ್ತಿದ್ದೇನೆಯೇ?" ಎಂದು ಡಿಸಿಎಂ ಡಿ. ಕೆ. ಶಿವಕುಮಾರ್ ಅವರು ಪ್ರಶ್ನಿಸಿದರು.
ಇಲ್ಲಿ ಬಂದಿರುವ ಸಾವಿರಾರು ಜನ ತಮ್ಮ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲು ಅರ್ಜಿ ಸಲ್ಲಿಸಲು ಮುಗಿ ಬೀಳುತ್ತಿರುವುದನ್ನು ನೋಡಿದರೆ, ಅವರ ಪರಿಸ್ಥಿತಿ ಅರ್ಥವಾಗುತ್ತದೆ. ನನ್ನ ಬಗ್ಗೆ ಯಾರು ಏನೇ ಟೀಕೆ ಮಾಡಲಿ, ನನಗೆ ಈ ಜನರ ಸಮಸ್ಯೆಗೆ ಪರಿಹಾರ ನೀಡುವುದಷ್ಟೇ ಮುಖ್ಯ
ಮೈಸೂರು-ಬೆಂಗಳೂರು ಹೆದ್ದಾರಿಯ ಚೆಕ್ ಪೋಸ್ಟ್ ನಲ್ಲಿ ಚುನಾವಣಾ ನೀತಿ ಸಂಹಿತೆ ಜಾರಿಯಾದ ಬಳಿಕ ಆರಂಭಗೊಂಡಿರುವ ಚೆಕ್‌ಪೋಸ್ಟ್ ತಪಾಸಣೆ ನಡೆಸುವಾಗ ಈ ನಗದು ಸಿಕ್ಕಿದ್ದು, ಜಪ್ತಿ ಮಾಡಿದ್ದಾರೆ.
ಕೂಳಿಗೆ ದಂಡವಾಗಿದೆ, ಭೂಮಿಗೆ ಭಾರವಾಗಿದೆ ಈ ಸರ್ಕಾರ ಎಂದು ರಾಮನಗರದ ಚನ್ನಪಟ್ಟಣದಲ್ಲಿ ಸಿ .ಎಂ. ಇಬ್ರಾಹಿಂ ಹೇಳಿದ್ದಾರೆ. ಅಶೋಕ ನೀನು ಕೂತಿದಿಯಲ್ಲಾ ಬೆಳಗಾವಿ ಸುವರ್ಣಸೌಧ, ಆ ಸೌಧವನ್ನ ಕಟ್ಟಿಸಿದ್ದು ಈ ಹೆಚ್‌ಡಿ ಕುಮಾರಸ್ವಾಮಿ ಎಂದು ಗುಡುಗಿದ್ದಾರೆ.
ಯಾವುದೇ ಒಬ್ಬ ಮನುಷ್ಯ ಎಲ್ಲಿಯವರೆಗೆ ಸಹಿಸಲು ಸಾಧ್ಯ. ಅವರು ತಿರುಗಿ ಬಿದ್ದರೆ ಯಾವ ಸರ್ಕಾರಗಳು ಉಳಿಯಲು ಸಾಧ್ಯವಿಲ್ಲ. ಅಂತಹ ಅವಕಾಶ ನೀಡದೆ ಸರ್ಕಾರ ಕಠಿಣ ಕ್ರಮಕ್ಕೆ ಮುಂದಾಗಬೇಕು. ಎಲ್ಲಾ ವರ್ಗ, ಸಮಾಜದ ಜನರು ನೆಮ್ಮದಿಯಿಂದ ಬದುಕುವ ಕೆಲಸ ಸರ್ಕಾರ ಮಾಡಬೇಕಿದೆ. ಸರ್ಕಾರ ನಿಷ್ಕ್ರಿಯವಾದ್ರೆ ದೊಡ್ಡ ಬೆಲೆ ತೆರಬೇಕಾಗುತ್ತದೆ. ಇದಕ್ಕೆ ಅವಕಾಶ ಕಲ್ಪಿಸಬೇಡಿ ಎಂಬುದು ನನ್ನ ಆಗ್ರಹ ಎಂದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.