ಕವಿ,ನಾಡೋಜ ಡಾ.ಚೆನ್ನವೀರ ಕಣವಿ ಅವರ ನೆನಪಿಗಾಗಿ ಕರ್ನಾಟಕ ವಿಶ್ವವಿದ್ಯಾಲಯ ಹಾಗೂ ಎಸ್ಡಿಎಂ ಡೀಮ್ಡ್ ವಿಶ್ವವಿದ್ಯಾಲಯಗಳಲ್ಲಿ ಸ್ವರ್ಣಪದಕಗಳನ್ನು ಸ್ಥಾಪಿಸಲಾಗುವುದು ಎಂದು ಅವರ ಪುತ್ರ ಪ್ರಿಯದರ್ಶಿ ಕಣವಿ ತಿಳಿಸಿದ್ದಾರೆ.
ಚೆಂಬೆಳಕಿನ ಕವಿ, ನಾಡೋಜ ಡಾ.ಚೆನ್ನವೀರ ಕಣವಿ ಅವರು ಇಂದು (ಫೆ.16) ಬೆಳಿಗ್ಗೆ ನಿಧನರಾದರು. ಕಲ್ಯಾಣ ನಗರದ ನಿವಾಸ, ಕರ್ನಾಟಕ ಕಾಲೇಜು ಆವರಣದಲ್ಲಿ ಪಾರ್ಥಿವ ಶರೀರಕ್ಕೆ ಅಂತಿಮ ದರ್ಶನ ಏರ್ಪಡಿಸಲಾಗಿತ್ತು. ಸಂಜೆ ಕೆಲಗೇರಿ ಸಮೀಪದ “ಸೃಷ್ಠಿ” ತೋಟದಲ್ಲಿ ಪೊಲೀಸ್ ಗೌರವದೊಂದಿಗೆ ಅಂತ್ಯಕ್ರಿಯೆ ನಡೆಯಿತು. ಕೇಂದ್ರ ಹಾಗೂ ರಾಜ್ಯ ಸಚಿವರು, ಶಾಸಕರು, ಗಣ್ಯರು, ಸಾಹಿತಿಗಳು ಅಂತಿಮದರ್ಶನ ಪಡೆದು ಗೌರವ ಸಲ್ಲಿಸಿದರು.
ಕನ್ನಡ ಕಾವ್ಯಲೋಕದ ಚೆಂಬೆಳಕಾಗಿದ್ದ, ಸೌಹಾರ್ದತೆಯನ್ನು ಸಾರುತ್ತಾ ಸಮನ್ವಯ ಕವಿ ಎಂದೇ ಖ್ಯಾತರಾಗಿದ್ದ ಕವಿ ಚೆನ್ನವೀರ ಕಣವಿ ಅವರ ನಿಧನದಿಂದ ಅತೀವ ದು:ಖಕ್ಕೀಡಾಗಿದ್ದೇನೆ ಅಂತಾ ಮಾಜಿ ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.
ಕಳೆದ ಒಂದು ತಿಂಗಳಿನಿಂದ ತೀವ್ರ ಅಸ್ವಸ್ಥರಾಗಿರುವ ಹೆಸರಾಂತ ಕವಿ,ನಾಡೋಜ ಡಾ.ಚೆನ್ನವೀರ ಕಣವಿ ಅವರಿಗೆ ಉತ್ತಮ ಚಿಕಿತ್ಸೆ ದೊರೆಯುತ್ತಿದೆ.ಸ್ವಲ್ಪಮಟ್ಟಿನ ಚೇತರಿಕೆ ಕಂಡು ಬಂದಿದೆ, ಮುಂದಿನ 3-4 ದಿನಗಳಲ್ಲಿ ಇನ್ನಷ್ಟು ಆರೋಗ್ಯ ಸುಧಾರಿಸುವ ಭರವಸೆ ಇದೆ.ಕಣವಿ ಅವರ ಚಿಂತನೆಗಳು ನಾಡಿಗೆ ಮತ್ತೆ ದೊರೆಯಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆಶಯ ವ್ಯಕ್ತಪಡಿಸಿದರು.
ನಾಡಿನ ಹೆಸರಾಂತ ಹಿರಿಯ ಕವಿ, ನಾಡೋಜ ಡಾ.ಚೆನ್ನವೀರ ಕಣವಿ ಅವರು ಜ.14 ರಂದು ಎಸ್.ಡಿ.ಎಮ್.ಆಸ್ಪತ್ರೆಗೆ ದಾಖಲಾದ ಮಾಹಿತಿ ಬಂದ ಕೂಡಲೇ ಜಿಲ್ಲಾಡಳಿತ ಅವರ ಚಿಕಿತ್ಸೆಗೆ ಐಸಿಯು ಬೆಡ್ ಮೀಸಲಿರಿಸಿ, ಉತ್ತಮ ಚಿಕಿತ್ಸೆಗೆ ಕ್ರಮಕೈಗೊಂಡಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.