ಇಂದು ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಏಳು ದಿನಗಳ ಕಾಲ ಅದ್ಭುತವಾದ ಯುವಜನೋತ್ಸವ ಅರ್ಥಪೂರ್ಣವಾಗಿ ಜರುಗಿದೆ. ಇಂದು ಸಮಾರೋಪ ಸಮಾರಂಭ ನಡೆಯುತ್ತಿದೆ. ವಿವಿಧ ರಾಜ್ಯಗಳ ಕ್ರೀಡಾಪಟುಗಳು ಆಗಮಿಸಿ ತಮ್ಮ ಸಾಮರ್ಥ್ಯ ಪ್ರದರ್ಶಿಸಿ ಅರ್ಥಪೂರ್ಣವಾಗಿ ನಡೆಸಿಕೊಟ್ಟಿದ್ದಾರೆ ಎಂದರು.
ಸ್ಯಾಂಟ್ರೋ ರವಿ ಬಿಜೆಪಿ ಕಾರ್ಯಕರ್ತ ಎನ್ನುವ ಬಗ್ಗೆ ಶಾಸಕ ದಿನೇಶ್ ಗುಂಡೂರಾವ್ ಮಾಡಿರುವ ಟ್ವೀಟ್ ಕುರಿತು ಪ್ರತಿಕ್ರಿಯೆ ನೀಡಿ, “ಕಾರ್ಯಕರ್ತ ಹೌದೋ ಅಲ್ಲವೋ ಎಂದು ಪರಿಶೀಲಿಸಲು ಸೂಚಿಸಲಾಗಿದೆ. ಕಾಂಗ್ರೆಸ್ ರಾಜಕೀಯವಾಗಿ ದಿವಾಳಿಯಾಗಿದೆ. ಕಾಂಗ್ರೆಸ್ ನಲ್ಲಿ ಎಂಥವರಿದ್ದಾರೆ ಎಂದು ದಿನೇಶ್ ಗುಂಡೂರಾವ್ ಅವರಿಗೆ ತಿಳಿದಿದೆ. ನಾನು ಅವರ ಮಟ್ಟಕ್ಕೆ ಇಳಿಯಲಾಗದು. ಮೊದಲು ಅವರ ಮನೆ ಸ್ವಚ್ಛ ಮಾಡಿಕೊಳ್ಳುವುದನ್ನು ಕಲಿಯಲಿ” ಎಂದು ಕಟುವಾಗಿ ನುಡಿದರು.
ಪಕ್ಷದ ಅಧ್ಯಕ್ಷ ಜೆ.ಪಿ ನಡ್ಡಾ ಅವರ ಸಮಯ ಕೇಳಿದ್ದು, ನಾಳೆ ಸಮಯ ದೊರೆಯುವ ವಿಶ್ವಾಸವಿದೆ ಎಂದರು. ಕೇಂದ್ರ ಸಚಿವರಾದ ಗಜೇಂದ್ರ ಸಿಂಗ್ ಶೇಖಾವತ್, ಭೂಪೇಂದ್ರ ಯಾದವ್ ಮತ್ತು ರಾಜನಾಥ್ ಸಿಂಗ್ ಅವರನ್ನು ಭೇಟಿ ಮಾಡಲಿದ್ದು, ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಜೊತೆಗೆ ಮೇಕೆದಾಟು, ಭದ್ರಾ ಮೇಲ್ಡಂಡೆ ಯೋಜನೆ, ಮಹದಾಯಿ ಬಗ್ಗೆ ಚರ್ಚೆ ಮಾಡಲಿರುವುದಾಗಿ ತಿಳಿಸಿದರು.
ಆಸ್ಪತ್ರೆಯು ಕಳೆದ 45 ವರ್ಷಗಳಿಂದ ಸುಮಾರು 10ಕ್ಕಿಂತಲೂ ಹೆಚ್ಚು ಜಿಲ್ಲೆಗಳ ಬಡರೋಗಿಗಳ ಆಶಾಕಿರಣವಾಗಿದೆ. ಆಯುಷ್ಮಾನ್ ಭಾರತ, ಆರೋಗ್ಯ ಕರ್ನಾಟಕ, ಇಎಸ್‌ಐ, ರೇಲ್ವೆ, ಇಸಿಎಚ್‌ಎಸ್ ಯೋಜನೆಯಡಿ ಪ್ರತಿ ತಿಂಗಳು ಸುಮಾರು 200 ಕ್ಕೂ ಹೆಚ್ಚು ಬಡ ರೋಗಿಗಳು ಹಾಗೂ ವರ್ಷಕ್ಕೆ 2,000 ಬಡರೋಗಿಗಳು ಚಿಕಿತ್ಸೆ ಪಡೆಯುತ್ತಿದ್ದಾರೆ.
ಅವರು ಇಂದು ಕೃಷಿ ಇಲಾಖೆಯ ಆಯವ್ಯಯ ಅನುಷ್ಠಾನದ ಪ್ರಗತಿ ಪರಿಶೀಲನೆ ಸಭೆ ನಡೆಸಿದರು. ರಾಜ್ಯದಲ್ಲಿ ಮೇ 31ರ ಮಾಹಿತಿಯಂತೆ 1.26 ಲಕ್ಷ ಮೆಟ್ರಿಕ್ ಟನ್ ಡಿಎಪಿ ಲಭ್ಯವಿದ್ದು, ಒಟ್ಟಾರೆ, 7.64 ಲಕ್ಷ ಮೆಟ್ರಿಕ್ ಟನ್ ರಸಗೊಬ್ಬರ ಲಭ್ಯವಿದೆ.
ಓಮಿಕ್ರಾನ್ ರೂಪಾಂತರದ ಬೆದರಿಕೆಯ ನಡುವೆ, ಕರ್ನಾಟಕ ಸರ್ಕಾರವು ಗುರುವಾರ (ಡಿಸೆಂಬರ್ 9) ಕ್ಲಸ್ಟರ್ ನಿರ್ವಹಣೆಯ ಮೇಲೆ ಕೇಂದ್ರೀಕರಿಸಲು ಮತ್ತು ಹಾಸ್ಟೆಲ್‌ಗಳಿಗೆ ಹೊಸ ಮಾರ್ಗಸೂಚಿಗಳನ್ನು ನೀಡಲು ನಿರ್ಧರಿಸಿದೆ.