ಒಂದೇ ವರ್ಷದಲ್ಲಿ ಯೋಜನೆಯನ್ನು ಸಂಪೂರ್ಣ ಮಾಡಿ, ಈ ತಾಲ್ಲೂಕಿನ ಜನತೆಗೆ ಲೋಕಾರ್ಪಣೆ ಮಾಡುವ ಸೌಭಾಗ್ಯ ನನಗೆ ಸಿಕ್ಕಿದೆ. ಹಿಂದಿನ ಸರ್ಕಾರದ ಧೀಮಂತ ನಾಯಕ ಎನಿಸಿಕೊಂಡ ಈ ಜಿಲ್ಲೆಯ ಬಾದಾಮಿ ಶಾಸಕರು, ಮಾಜಿ ಮುಖ್ಯಮಂತ್ರಿಗಳು ಅಡಿಗಲ್ಲು ಹಾಕಿ, ಲೋಕಾರ್ಪಣೆ ಮಾಡಿದ ಒಂದೇ ಒಂದು ಯೋಜನೆಯನ್ನು ತೋರಿಸಿ ಎಂದು ಸಿಎಂ ಬೊಮ್ಮಾಯಿ ಸವಾಲು ಹಾಕಿದರು.ಒಂದೇ ವರ್ಷದಲ್ಲಿ ಯೋಜನೆಯನ್ನು ಸಂಪೂರ್ಣ ಮಾಡಿ, ಈ ತಾಲ್ಲೂಕಿನ ಜನತೆಗೆ ಲೋಕಾರ್ಪಣೆ ಮಾಡುವ ಸೌಭಾಗ್ಯ ನನಗೆ ಸಿಕ್ಕಿದೆ. ಹಿಂದಿನ ಸರ್ಕಾರದ ಧೀಮಂತ ನಾಯಕ ಎನಿಸಿಕೊಂಡ ಈ ಜಿಲ್ಲೆಯ ಬಾದಾಮಿ ಶಾಸಕರು, ಮಾಜಿ ಮುಖ್ಯಮಂತ್ರಿಗಳು ಅಡಿಗಲ್ಲು ಹಾಕಿ, ಲೋಕಾರ್ಪಣೆ ಮಾಡಿದ ಒಂದೇ ಒಂದು ಯೋಜನೆಯನ್ನು ತೋರಿಸಿ ಎಂದು ಸಿಎಂ ಬೊಮ್ಮಾಯಿ ಸವಾಲು ಹಾಕಿದರು.
ಇಲ್ಲಿನ ಗ್ರಾನೈಟ್ ಅಂತರರಾಷ್ಟ್ರೀಯ ಮಾರುಕಟ್ಟೆಗೆ ಹೋಗಿದೆ. ಕಳೆದ ಮೂರು ವರ್ಷಗಳಲ್ಲಿ ಔದ್ಯೋಗಿಕವಾಗಿ, ಕೃಷಿಗೆ ಪ್ರಸಿದ್ಧವಾಗಿರುವ ಕ್ಷೇತ್ರದ ಸಮಗ್ರ ಅಭಿವೃದ್ಧಿ, ದಾಖಲೆ ಪ್ರಮಾಣದಲ್ಲಿ ಆಗಿದೆ. ಇದಕ್ಕೆ ಕಾರಣ ನಮ್ಮ ಸರ್ಕಾರ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ಮುಖ್ಯಮಂತ್ರಿ ಗೃಹ ಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಫಾಕ್ಸ್ಕಾನ್ ಸೇರಿದಂತೆ 10 ಹೊಸ ಯೋಜನೆಗಳು, 5 ವಿಸ್ತರಣೆ ಯೋಜನೆಗಳು ಮತ್ತು 3 ಹೆಚ್ಚುವರಿ ಯೋಜನೆಗಳಿಗೆ ಅನುಮೋದನೆ ನೀಡಲಾಗಿದೆ. ಈ 18 ಯೋಜನೆಗಳಿಂದ 77,606 ಜನರಿಗೆ ಉದ್ಯೋಗಾವಕಾಶ ನಿರೀಕ್ಷಿಸಲಾಗಿದೆ.
Bhadra Upper Bank Project: ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ಪಟ್ಟಣದಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರದ ಫಲಾನುಭವಿಗಳ ಸೌಲಭ್ಯ ಮತ್ತು ಸಲಕರಣೆಗಳ ವಿತರಣೆ ಹಾಗೂ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ನೆರವೇರಿಸಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಾತನಾಡಿದರು.
ಇತ್ತೀಚಿನ ದಿನಗಳಲ್ಲಿ ಮಾಲ್’ಗಳು ಶಾಪಿಂಗ್ ಕಾಂಪ್ಲೆಕ್ಸ್’ಗಳು ಬಂದಿವೆ. ಸ್ವಲ್ಪ ದಿನ ವ್ಯಾಪಾರ ಚೆನ್ನಾಗಿ ಆದರೂ ಸ್ವಲ್ಪ ದಿನಗಳಲ್ಲಿ ಕಡಿಮೆಯಾಗುತ್ತದೆ. ಏನೇ ಬಂದರೂ ಕಿರಾಣಿ ಅಂಗಡಿ ವ್ಯಾಪಾರ ಕಡಿಮೆಯಾಗುವುದಿಲ್ಲ. ಕಾಳು ಕಡ್ಡಿ ಕೊಳ್ಳುವವರು ಹೆಚ್ಚಿದ್ದಾರೆ. ದರ ಮತ್ತು ತೂಕ ಸರಿಯಾಗಿ ನೀಡಿದರೆ ಗ್ರಾಹಕರು ಸಂತೋಷದಿಂದಿರುತ್ತಾರೆ ಎಂದರು.
ಈ ಭಾಗದ ಸಮಸ್ಯೆಗಳ ಬಗ್ಗೆ ಚರ್ಚೆ ನಡೆಸಿ ಪರಿಹಾರ ಕಂಡುಕೊಳ್ಳಬೇಕಿದೆ. ರಾಜ್ಯವನ್ನು ಮುನ್ನಡೆಸುವ ದಿಸೆಯಲ್ಲಿ ಹತ್ತು ಹಲವಾರು ವಿಷಯಗಳ ಬಗ್ಗೆ ಚರ್ಚೆಯಾಗಬೇಕಿದೆ. ಹಲವಾರು ಕಾನೂನುಗಳ ರಚನೆಗಳ ಉದ್ದೇಶದಿಂದ ಕಲಾಪ ನಡೆಸಲಾಗುತ್ತಿದೆ ಎಂದರು.
46 ಸಾವಿರ ನೇಕಾರ ಕುಟುಂಬದ ವಿದ್ಯಾರ್ಥಿಗಳ ದಾಖಲೆಗಳನ್ನು ಹದಿನೈದು ದಿನದೊಳಗೆ ಪಡೆದು ಪಟ್ಟಿಯನ್ನು ಸಲ್ಲಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ ಮುಖ್ಯಮಂತ್ರಿಗಳು, ವಿದ್ಯಾರ್ಥಿಗಳಿಗೆ ಕೂಡಲೇ ವಿದ್ಯಾನಿಧಿಯನ್ನು ಬಿಡುಗಡೆ ಮಾಡುವುದಾಗಿ ತಿಳಿಸಿದರು. ಮಕ್ಕಳಿಂದ ಯಾವುದೇ ರೀತಿಯ ಅರ್ಜಿಯನ್ನು ಪಡೆಯುವುದಲ್ಲ. ವಿದ್ಯಾನಿಧಿ ಮಕ್ಕಳ ಹಕ್ಕು ಎಂದು ತಿಳಿಸಿದರು.
ತಮ್ಮ ಹಾಗೂ ಯಡಿಯೂರಪ್ಪ ಅವರ ನಡುವೆ ಭಿನ್ನಾಭಿಪ್ರಾಯ ಇದೆ ಎಂಬ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿ “ನಮ್ಮದು ತಂದೆ ಮಕ್ಕಳ ಸಂಬಂಧ. ಯಾವುದೇ ಕಾರಣಕ್ಕೂ ಯಾವುದೇ ಸಂದರ್ಭದಲ್ಲಿಯೂ ಭಿನ್ನಾಭಿಪ್ರಾಯ ಬರುವುದಿಲ್ಲ. ನಿರೀಕ್ಷೆ ಮಾಡುವವರಿಗೆ ನಿರಾಸೆಯಾಗುತ್ತದೆ” ಎಂದರು.
ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ನಮ್ಮ ಕ್ಲಿನಿಕ್ ಗಳನ್ನು ಉದ್ಘಾಟಿಸಲಿದ್ದಾರೆ. ಆರಂಭದಲ್ಲಿ 114 ಕ್ಲಿನಿಕ್ಗಳು ಏಕಕಾಲಕ್ಕೆ ಲೋಕಾರ್ಪಣೆಯಾಗಲಿದೆ. ರಾಜ್ಯದಲ್ಲಿ ಒಟ್ಟು 438 ನಮ್ಮ ಕ್ಲಿನಿಕ್ಗಳನ್ನು ಆರಂಭಿಸಲು ಸರ್ಕಾರ ಯೋಜನೆ ರೂಪಿಸಿದ್ದು, ಜನವರಿ ಅಂತ್ಯಕ್ಕೆ ಎಲ್ಲವೂ ಕಾರ್ಯನಿರ್ವಹಿಸಲಿವೆ ಎಂದು ತಿಳಿಸಿದರು.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು 2022-23 ನೇ ಸಾಲಿನ ಬಜೆಟ್ ನಲ್ಲಿ ‘ಶ್ರವಣ ದೋಷ ಮುಕ್ತ ಕರ್ನಾಟಕ” ನಿರ್ಮಾಣ ಮಾಡುವ ಘೋಷಣೆ ಮಾಡಿದ್ದು, ಈ ಯೋಜನೆ ಕುರಿತು ಸಚಿವರು ಪ್ರಗತಿ ಪರಿಶೀಲನೆ ನಡೆಸಿ ಮಾಹಿತಿ ನೀಡಿದರು.
ಭಾರತಿಯವರು ಖುದ್ದಾಗಿ ಬಂದು ಗೃಹಪ್ರವೇಶಕ್ಕೆ ಆಹ್ವಾನ ನೀಡಿದ್ದರು. ವಿಷ್ಣುವರ್ಧನ್ ಅವರಿದ್ದ ಮನೆಯನ್ನು ಇನ್ನಷ್ಟು ಚಂದ ಮಾಡಿದ್ದಾರೆ. ನವೀಕರಣಗೊಂಡಿರುವ ವಿಷ್ಣುವರ್ಧನ್ ಅವರ ಮನೆಯ ಹಿಂದೆ ಭಾರತಿ ವಿಷ್ಣುವರ್ಧನ್ ಅವರ ಪ್ರಯತ್ನ ಹಾಗೂ ಶ್ರಮ ಎದ್ದು ಕಾಣುತ್ತಿದೆ. ವಿಷ್ಣು ವರ್ಧನ್ ಅವರ ತ್ಯಾಗವನ್ನು ಅಳವಡಿಸಿದ್ದಾರೆ ಎನ್ನುವುದು ನನ್ನ ಭಾವನೆ. ಅವರಿಗೆ ಶುಭ ಕೋರಲು ಬಂದಿದ್ದೇನೆ ಎಂದರು .
ಸರ್ಕಾರ ವಿಶ್ವವಿದ್ಯಾಲಯದ ತಂಡವನ್ನು ಕಳಿಸಿ ಅಧ್ಯಯನ ಕೈಗೊಂಡಿದೆ. ಕೇಂದ್ರ ಸರ್ಕಾರದ ತಜ್ಞರು ಕೂಡ ಚಿಕ್ಕಮಗಳೂರಿಗೆ ಬಂದು ಅಧ್ಯಯನ ಮಾಡಿದ್ದಾರೆ. ನಿರಂತರವಾಗಿ ಮಳೆ ಇರುವುದರಿಂದ ಹಾಗೂ ಗಾಳಿಯಿಂದ ಒಂದಕ್ಕೊಂದು ಹರಡುತ್ತಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.