ಒಂದು ಕಾಲದಲ್ಲಿ ಬಿಜೆಪಿ ಸರ್ಕಾರ ರಚನೆಯಲ್ಲಿ ರೆಡ್ಡಿ ಬ್ರದರ್ಸ್ ಬಹಳ ಪ್ರಮುಖ ಪಾತ್ರ ವಹಿಸಿದ್ದರು. ಅದ್ಯಾಕೋ ಏನೋ ರೆಡ್ಡಿ ಬಿಜೆಪಿ ಪಕ್ಷದಿಂದ ದೂರ ಸರಿದು, ನೂತನವಾಗಿ ಕಲ್ಯಾಣ ರಾಜ್ಯ ಪ್ರಗತಿ ಪಕ್ಷ ಸ್ಥಾಪಿಸಿದ್ದಾರೆ. ಇದರಿಂದ ಚುನಾವಣೆಯಲ್ಲಿ ಗೆಲ್ಲುವ ಕ್ಷೇತ್ರಗಳಲ್ಲಿ ಬಹುತೇಕ ಅಭ್ಯರ್ಥಿಗಳನ್ನು ಕಣಕ್ಕಿಳಿಸಲು ರೆಡ್ಡಿ ಚಿಂತನೆಯಲ್ಲಿದ್ದಾರೆ.
ಹೆಂಡತಿ ತವರು ಮನೆ ಸೇರಿದ ಬಳಿಕ ಕುಡಿತಕ್ಕೆ ದಾಸನಾಗಿದ್ದ ರಂಗನಾಥ, ಮಾವ ಉತ್ತಮಸ್ಥನಾದರೂ ಊರಲ್ಲಿ ಅನ್ನ ಆಹಾರ ಇಲ್ಲದೆ ಅಲೆಯುತ್ತಿದ್ದ. ಆದರೆ, ಇದ್ದಕ್ಕಿದ್ದಂತೆ ಈತನ ಮಾವ ಉಮೇಶ್ ಮತ್ತು ಹೆಂಡತಿ ಅಮೃತ ಮತ್ತು ಕುಟುಂಬಸ್ಥರು ಅವನನ್ನು ಮನೆಗೆ ಕರೆತಂದು ಸರಪಳಿ ಹಾಕಿ ಬಂಧಿಸಿದ್ದಾರೆ.
Chitradurga News : ಕಾಂಗ್ರೆಸ್ ಮುಖಂಡ, ವಿಧಾನ ಪರಿಷತ್ ಪರಾಜಿತ ಅಭ್ಯರ್ಥಿ ಬಿ.ಸೋಮಶೇಖರ್ ಅವರ ಮೇಲೆ ಗುರುವಾರ ರಾತ್ರಿ ಮಾಜಿ ಸಚಿವ ಡಿ.ಸುಧಾಕರ್ ಬೆಂಬಲಿಗರು ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ.
ಭ್ರಷ್ಟಾಚಾರವನ್ನು ಹುಟ್ಟಿಹಾಕಿದ್ದೇ ಕಾಂಗ್ರೆಸ್ ಪಕ್ಷ. ಲೋಕಾಯುಕ್ತವನ್ನು ಮುಚ್ಚಿ ಎಸಿಬಿಯನ್ನು ಪ್ರಾರಂಭಿಸಿದರು. 50 ಕ್ಕಿಂತ ಹೆಚ್ಚು ಪ್ರಕರಣಗಳು ಕಾಂಗ್ರೆಸ್ ನವರ ಮೇಲಿತ್ತು. ಅವುಗಳನ್ನು ಮುಚ್ಚಿಹಾಕಿದರು ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದರು.
ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿರುವ ಚಿತ್ರದುರ್ಗ ಜಿಲ್ಲಾ ಸರ್ಜನ್ ಡಾ.ಬಸವರಾಜ್ , ‘ಶ್ರೀಗಳ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಅವರನ್ನು ರಸ್ತೆ ಮೂಲಕ ಬೆಂಗಳೂರಿಗೆ ಶಿಫ್ಟ್ ಮಾಡಲಾಗುತ್ತದೆ’ ಎಂದು ಹೇಳಿದ್ದಾರೆ.
ಮುರುಘಾ ಶ್ರೀಗಳಿಂದ ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ಕಿರುಕುಳ ಆರೋಪ ಪ್ರಕರಣಕ್ಕೆ ಸಂಬಂಧಿಸಿ 2ನೇ ಆರೋಪಿ ವಾರ್ಡನ್ ರಶ್ಮಿಯನ್ನು ಪೊಲೀಸರು ಬಂಧಿಸಿದ್ದಾರೆ. ಮುರುಘಾಮಠದಲ್ಲೇ ವಾಸ್ತವ್ಯ ಹೂಡಿದ್ದ A-1 ಮುರುಘಾ ಶ್ರೀ ಅವರನ್ನು ಗುರುವಾರ ರಾತ್ರಿ ಬಂಧಿಸಲಾಗಿತ್ತು.
Shivamurthy Murugha Swamiji : ನಿಮ್ಮೆಲ್ಲರ ಸಲುವಾಗಿ ನಾವು ಧೈರ್ಯವಾಗಿ ಇರುತ್ತೇವೆ. ಯಾವುದೇ ಕಾರಣಕ್ಕೂ ಆತಂಕ ಪಡಬೇಕಿಲ್ಲ. ನಾವುಗಳು ಈ ನೆಲದ ಕಾನೂನನ್ನು ಸರಿಯಾಗಿ ಅರ್ಥ ಮಾಡಿಕೊಳ್ಳಬೇಕು. ಕಾನೂನಿಗೆ ನಾವು ಯಾವತ್ತೂ ಗೌರವ ಕೊಡುತ್ತೇವೆ. ಇದರಲ್ಲಿ ಯಾವುದೇ ಪಲಾಯನ ವಾದ ಇಲ್ಲ ಎಂದು ಚಿತ್ರದುರ್ಗದ ಮುರುಘಾಮಠದಲ್ಲಿ ಡಾ.ಶಿವಮೂರ್ತಿ ಸ್ವಾಮೀಜಿಗಳು ಹೇಳಿದ್ದಾರೆ.
ಇಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ಚಿತ್ರದುರ್ಗ ಮುರುಘಾ ಮಠದ ಶ್ರೀ ಶಿವಮೂರ್ತಿ ಮುರುಘಾ ಶರಣರ ಜನ್ಮದಿನಾಚರಣೆ ನಿಮಿತ್ತ ಹಮ್ಮಿಕೊಂಡಿದ್ದ ಸಮಾನತ ದಿನ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಾತನಾಡಿದರು.
ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ತಾಲೂಕಿನ ದುಮ್ಮಿ ಗ್ರಾಮದಲ್ಲಿ ಜವರಾಯ ಅಟ್ಟಹಾಸ ಮೆರೆದಿದ್ದಾನೆ. ಬೈಕ್ ಗೆ ಖಾಸಗಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಒಂದೇ ಕುಟುಂಬದ ನಾಲ್ಕು ಮಂದಿ ಮೃತಪಟ್ಟಿದ್ದಾರೆ.
ತುರ್ತು ಕಾರ್ಯಗಳಿಗೆ ತೆರಳುವವರಿಗೆ ಯಾವುದೇ ರೀತಿಯ ತೊಂದರೆಯಾಗದಂತೆ, ಸಾರ್ವಜನಿಕರ ಹಿತದೃಷ್ಟಿಯಿಂದ ಮತ್ತು ಅನುಕೂಲತೆಗಾಗಿ ಇ-ಪಾಸ್ ವಿತರಿಸಲು ಏಪ್ರಿಲ್ 23ರಿಂದ ಆನ್‍ಲೈನ್‍ನಲ್ಲಿ ಇ-ಪಾಸ್ ಪೋರ್ಟಲ್ ಪ್ರಾರಂಭಿಸಲಾಗಿದೆ.