Citizenship (Amendment) Act: ಲೋಕಸಭಾ ಚುನಾವಣೆಗೆ ಕೆಲವೇ ದಿನಗಳು ಬಾಕಿಯಿರುವ ಈ ಹೊತ್ತಿನಲ್ಲಿ ಕೇಂದ್ರ ಸರ್ಕಾರ ಪೌರತ್ವ ತಿದ್ದುಪಡಿ ಕಾಯ್ದೆಯ (ಸಿಎಎ) ನಿಯಮಗಳನ್ನು ಜಾರಿಗೆ ತಂದಿದೆ. ಆದರೆ, ಇದೊಂದು ಎಲೆಕ್ಷನ್ ಗಿಮಿಕ್ ಎಂದು ಬಣ್ಣಿಸಿರುವ ಕೆಲವು ರಾಜ್ಯಗಳ ಮುಖ್ಯಮಂತ್ರಿಗಳು ತಮ್ಮ ರಾಜ್ಯದಲ್ಲಿ ಸಿಎಎ ಜಾರಿಯಾಗುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
Amith Shah talk on CAA: ಕೊರೊನಾ ಸಾಂಕ್ರಾಮಿಕದಿಂದಾಗಿ ಪೌರತ್ವ ತಿದ್ದುಪಡಿ ಕಾಯ್ದೆ ವಿಳಂಬವಾಗಿದೆ. ತುಳಿತಕ್ಕೊಳಗಾದ ನಾಗರಿಕರಿಗೆ ಪೌರತ್ವದ ಹಕ್ಕಿದೆ. ಅಸಾದುದ್ದೀನ್ ಓವೈಸಿ, ರಾಹುಲ್ ಗಾಂಧಿ, ಮಮತಾ ಬ್ಯಾನರ್ಜಿ ಅಥವಾ ಕೇಜ್ರಿವಾಲ್ ಆಗಿರಲಿ ಎಲ್ಲ ವಿರೋಧ ಪಕ್ಷಗಳೂ ಸುಳ್ಳಿನ ರಾಜಕಾರಣ ಮಾಡುತ್ತಿವೆ. ಆದ್ದರಿಂದ ಸಮಯವು ಮುಖ್ಯವಲ್ಲ” ಎಂದಿದ್ದಾರೆ.
Citizenship Amendment Act: ''ಇಂಡಿಯಾ ಮೈತ್ರಿಕೂಟ'' ಅಧಿಕಾರಕ್ಕೆ ಬರುವುದಿಲ್ಲ. ಇದು ಅವರಿಗೂ ಗೊತ್ತಿರುವ ವಿಚಾರವಾಗಿದೆ. ಪ್ರಧಾನಿ ಮೋದಿ ನೇತೃತ್ವದ ಸರ್ಕಾರ ಜಾರಿಗೊಳಿಸುತ್ತಿರುವ CAAಯನ್ನು ರದ್ದುಪಡಿಸುವುದು ಅಸಾಧ್ಯ. ಇದು ಸಂಪೂರ್ಣ ಸಾಂವಿಧಾನಿಕವಾಗಿದೆ. ಸುಪ್ರೀಂಕೋರ್ಟ್ ಸಹ ಈ ಕಾನೂನು ಜಾರಿಗೆ ತಡೆ ನೀಡಿಲ್ಲವೆಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ.
Actor Vijay : ಕೇಂದ್ರದ ಸಿಎಎ ಕಾಯ್ದೆಗೆ ವಿರೋಧ ವ್ಯಕ್ತಪಡಿಸಿರುವ ಸೂಪರ್ ಸ್ಟಾರ್ ನಟ ವಿಜಯ್, ಈ ಕಾಯ್ದೆಯನ್ನು ತಮಿಳುನಾಡಿನಲ್ಲಿ ಜಾರಿಯಾಗದಂತೆ ನೋಡಿಕೊಳ್ಳಬೇಕು ಎಂದು ಕರೆ ನೀಡಿದ್ದಾರೆ.
CAA: ಪಾಕಿಸ್ತಾನ, ಅಫ್ಘಾನಿಸ್ತಾನ ಮತ್ತು ಬಾಂಗ್ಲಾದೇಶದಿಂದ ಹಿಂದೂ, ಜೈನ್, ಬೌದ್ಧ, ಸಿಖ್ ಮತ್ತು ಪಾರ್ಸಿ ನಿರಾಶ್ರಿತರು CAA 2019 ರ ಅಡಿಯಲ್ಲಿ ಪೌರತ್ವಕ್ಕಾಗಿ ಹೇಗೆ ಸಲ್ಲಿಸಬೇಕು ಎಂಬ ಪ್ರಶ್ನೆಗೆ ಇಲ್ಲಿದೆ ಉತ್ತರ...
Implementation of Citizenship Amendment Act: ಪೌರತ್ವ (ತಿದ್ದುಪಡಿ) ಕಾಯಿದೆ 2019 ಎಂಬುದು, ಭಾರತದ ಮೂರು ನೆರೆಯ ರಾಷ್ಟ್ರಗಳಿಂದ ಧಾರ್ಮಿಕ ಆಧಾರದ ಮೇಲೆ ಕಿರುಕುಳಕ್ಕೊಳಗಾದ ನಂತರ ಭಾರತಕ್ಕೆ ಬಂದ ನಿರಾಶ್ರಿತರಿಗೆ ಮತ್ತು 31 ಡಿಸೆಂಬರ್ 2014 ಕ್ಕಿಂತ ಮೊದಲು ಭಾರತದಲ್ಲಿ ಆಶ್ರಯ ಪಡೆದ ನಿರಾಶ್ರಿತರಿಗೆ ಭಾರತೀಯ ಪೌರತ್ವದ ಹಕ್ಕನ್ನು ನೀಡುವ ಕಾನೂನಾಗಿದೆ.
Asaduddin Owaisi: ಪೌರತ್ವ ತಿದ್ದುಪಡಿ ಕಾಯ್ದೆ ಅಂದರೆ ಸಿಎಎಗೆ ಸಂಬಂಧಿಸಿದಂತೆ ದೇಶದಲ್ಲಿ ಮತ್ತೊಮ್ಮೆ ಚರ್ಚೆ ಶುರುವಾಗಿದೆ. ಸಿಎಎ ವಿಚಾರದಲ್ಲಿ ಅಸಾದುದ್ದೀನ್ ಓವೈಸಿ ಮತ್ತೊಮ್ಮೆ ಕೇಂದ್ರ ಸರ್ಕಾರದ ಮೇಲೆ ಕೆಂಡಕಾರಿದ್ದಾರೆ.
ಹೊಸದಾಗಿ ಅಂಗೀಕರಿಸಿದ ಪೌರತ್ವ ತಿದ್ದುಪಡಿ ಕಾಯ್ದೆಯ (ಸಿಎಎ) ನಿಯಮಗಳನ್ನು ರೂಪಿಸಲು ಇನ್ನೂ ಮೂರು ತಿಂಗಳುಗಳು ಬೇಕು ಎಂದು ಕೇಂದ್ರ ಗೃಹ ಸಚಿವಾಲಯವು ಸಂಸದೀಯ ಸ್ಥಾಯಿ ಸಮಿತಿಗೆ ಸಂಬಂಧಿಸಿದ ಇಲಾಖೆಗೆ ಮಾಹಿತಿ ನೀಡಿದೆ.
ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರವು ಪೌರತ್ವ ತಿದ್ದುಪಡಿ ಕಾಯ್ದೆ ಅಡಿಯಲ್ಲಿ ದೇಶದ ಪ್ರತಿಯೊಬ್ಬ ನಿರಾಶ್ರಿತರಿಗೆ ಪೌರತ್ವ ನೀಡಲಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಭಾನುವಾರ ಪ್ರತಿಪಾದಿಸಿದರು. ಕೋಲ್ಕತ್ತಾದಲ್ಲಿ ನಡೆದ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡಿದ ಶಾ ಅವರು ಪಶ್ಚಿಮ ಬಂಗಾಳಕ್ಕೆ ಒಂದು ದಿನದ ಭೇಟಿಯಲ್ಲಿದ್ದಾರೆ, "ಎಲ್ಲಾ ನಿರಾಶ್ರಿತರಿಗೆ ಪೌರತ್ವ ನೀಡುವವರೆಗೂ ನಾವು ನಿಲ್ಲುವುದಿಲ್ಲ" ಎಂದು ಹೇಳಿದರು.
ಹಿರಿಯ ಅಧಿಕಾರಿಗಳು ಮತ್ತು ಉನ್ನತ ಪೊಲೀಸ್ ಅಧಿಕಾರಿಗಳೊಂದಿಗೆ ನಡೆದ ಸಭೆಯಲ್ಲಿ ಗೃಹ ಸಚಿವ ಅಮಿತ್ ಶಾ ಅವರು ನಗರದ ಹಿಂಸಾಚಾರ ಪೀಡಿತ ಪ್ರದೇಶಗಳಲ್ಲಿನ ಪರಿಸ್ಥಿತಿಯನ್ನು ಪರಿಶೀಲಿಸಿದ ನಂತರ ರಾತ್ರಿ 10 ರ ಸುಮಾರಿಗೆ ಸಚಿವಾಲಯ ಹೇಳಿಕೆ ನೀಡಿದೆ.
ಕೋಮು ಸೌಹಾರ್ದತೆಯನ್ನು ಕಾಪಾಡಿಕೊಳ್ಳಬೇಕು. ಯಾವುದೇ ರೀತಿಯ ಹಿಂಸಾಚಾರಕ್ಕೆ ಮಹಾತ್ಮ ಗಾಂಧಿಯವರ ಭಾರತದಲ್ಲಿ ಸ್ಥಾನವಿಲ್ಲ ಎಂದು ಸಿಎಎ ವಿರುದ್ಧ ದೆಹಲಿಯಲ್ಲಿ ನಡೆದ ಹಿಂಸಾಚಾರದ ಬಗ್ಗೆ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ದೇಶವಾಸಿಗಳಿಗೆ ಕರೆ ನೀಡಿದರು.
ಈಶಾನ್ಯ ಜಿಲ್ಲೆಯ ಪ್ರದೇಶಗಳಲ್ಲಿ, ವಿಶೇಷವಾಗಿ ಮೌಜ್ಪುರ, ಕಾರ್ಡಮ್ ಪುರಿ, ಚಂದ್ ಬಾಗ್, ಗೋಕುಲ್ಪುರಿ ಮತ್ತು ದಯಾಲ್ಪುರಗಳಲ್ಲಿ ಹಿಂಸಾಚಾರ ಮತ್ತು ಅಗ್ನಿಸ್ಪರ್ಶದ ಘಟನೆಗಳು ವರದಿಯಾಗಿವೆ.
ಅಮೆರಿಕಾದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಭಾರತ ಭೇಟಿಗೆ ಕೆಲವೇ ದಿನಗಳ ಮೊದಲು, ಯುಎಸ್ ಸಂಸ್ಥೆ ಗುರುವಾರ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ಕುರಿತು ಕಳವಳ ವ್ಯಕ್ತಪಡಿಸಿದೆ, ಪ್ರಸ್ತಾವಿತ ಕಾಯ್ದೆಯು ರಾಷ್ಟ್ರೀಯ ನಾಗರಿಕರ ನೋಂದಣಿ (ಎನ್ಆರ್ಸಿ) ಕಾನೂನಿನ ಒಂದು ಭಾಗವಾಗಿದೆ. ಈ ನಡೆ ಧಾರ್ಮಿಕ ಪರೀಕ್ಷೆಯನ್ನು ರಚಿಸುವ ಪ್ರಯತ್ನ ಮತ್ತು ಭಾರತೀಯ ಮುಸ್ಲಿಮರ ಹಕ್ಕು ನಿರಾಕರಣೆಗೆ ಕಾರಣವಾಗಬಹುದು ಎಂದು ಅಭಿಪ್ರಾಯಪಟ್ಟಿದೆ.
ಕ್ಯಾಬಿನೆಟ್ ಸಭೆಯ ನಂತರ ಹೊರಡಿಸಿದ ಹೇಳಿಕೆಯಲ್ಲಿ, 'ನೆರೆಯ ರಾಷ್ಟ್ರಗಳ ನಾಗರಿಕರಿಗೆ ಪೌರತ್ವ ನೀಡಲು ಧರ್ಮದ ಆಧಾರದ ಮೇಲೆ ತಾರತಮ್ಯ ಮಾಡದಂತೆ ರಾಜ್ಯ ಸಚಿವ ಸಂಪುಟ ಕೇಂದ್ರ ಸರ್ಕಾರಕ್ಕೆ ಮನವಿ' ಮಾಡಿದೆ. ಇದರೊಂದಿಗೆ ಪೌರತ್ವ ನೀಡಬೇಕಾದರೆ ಎಲ್ಲ ಧರ್ಮದ ಜನರನ್ನು ಅದರಲ್ಲಿ ಸೇರಿಸಿಕೊಳ್ಳಬೇಕು ಎಂದು ಮನವಿ ಮಾಡಲಾಗಿದೆ.
ನಿರ್ದಿಷ್ಟ ಕಾನೂನಿನ ವಿರುದ್ಧ ಶಾಂತಿಯುತ ಪ್ರತಿಭಟನೆ ನಡೆಸುವ ವ್ಯಕ್ತಿಗಳನ್ನು ದೇಶದ್ರೋಹಿಗಳು ಅಥವಾ ರಾಷ್ಟ್ರ ವಿರೋಧಿಗಳು ಎಂದು ಕರೆಯಲಾಗುವುದಿಲ್ಲ ಎಂದು ಬಾಂಬೆ ಹೈಕೋರ್ಟ್ ಹೇಳಿದೆ.ಅರ್ಜಿದಾರರು ಮತ್ತು ಅವರ ಸಹಚರರು ತಮ್ಮ ಪ್ರತಿಭಟನೆಯನ್ನು ತೋರಿಸಲು ಶಾಂತಿಯುತ ಆಂದೋಲನವನ್ನು ನಡೆಸಲು ಬಯಸುತ್ತಾರೆ ಎಂದು ಹೈಕೋರ್ಟ್ನ ಔರಂಗಾಬಾದ್ ನ್ಯಾಯಪೀಠ ಗುರುವಾರ ಅಭಿಪ್ರಾಯಪಟ್ಟಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.