ಕೆಪಿಸಿಸಿ ಕಚೇರಿಯಲ್ಲಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಸಿದ್ದರಾಮಯ್ಯ ಅವರು ಸಿಎಲ್ಪಿ ನಾಯಕರಾಗಿ ಆಯ್ಕೆಯಾದರು. ಸಭೆ ಮುಕ್ತಾಯದ ಬಳಿಕ ಕಾಂಗ್ರೆಸ್ ನಾಯಕರು ರಾಜ್ಯಪಾಲ ಥಾವರ್ಚಂದ್ ಗೆಹ್ಲೋಟ್ ಅವರನ್ನು ಭೇಟಿಯಾದರು. ಈ ವೇಳೆ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಸರ್ಕಾರ ರಚನೆಗೆ ಹಕ್ಕು ಮಂಡಿಸಿದರು.
ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕರನ್ನಾಗಿ ಸಿದ್ದರಾಮಯ್ಯ ಅವರನ್ನು ಆಯ್ಕೆ ಮಾಡಲಾಗಿದೆ. ಕೆಪಿಸಿಸಿ ಕಚೇರಿಯಲ್ಲಿ ನಡೆದ ಚುನಾಯಿತ ಸದಸ್ಯರ ಸಭೆಯಲ್ಲಿ ಈ ನಿರ್ಧಾರವನ್ನು ಕೈಗೊಳ್ಳಲಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.