ಮುಖ್ಯಮಂತ್ರಿಗಳು ಏನೇ ಹೇಳಿದರೂ ರಾಜ್ಯದ ಆರ್ಥಿಕ ಸ್ಥಿತಿಯ ಬಗ್ಗೆ ಸತ್ಯ ಮುಚ್ಚಿಡಲು ಸಾಧ್ಯವಿಲ್ಲ. ಇಂತಹ ಗಂಭೀರ ಪರಿಸ್ಥಿತಿಯಲ್ಲೂ ಕೂಡ ಡೀಲ್ ಮಾಡಲು ಹೊರಟಿರುವ ರಾಜ್ಯ ಸರ್ಕಾರ ರಾಜ್ಯ ದ್ರೋಹ ಹಾಗೂ ಜನದ್ರೋಹ ಮಾಡುತ್ತಿದೆ. ಇದರ ವಿರುದ್ದ ಬಿಜೆಪಿ ಜನಾಂದೋಲನವನ್ನು ಮಾಡುವುದು ಅತ್ಯಂತ ಅವಶ್ಯ ಮತ್ತು ಅನಿವಾರ್ಯ ಎಂದು ಹೇಳಿದ್ದಾರೆ.
ರಾಜ್ಯ ಕಾಂಗ್ರೆಸ್ ಸರ್ಕಾರ ಪೂರ್ವ ಸಿದ್ದತೆ ಇಲ್ಲದ ಗ್ಯಾರೆಂಟಿ ಹೆಸರಿನಲ್ಲಿ ರಾಜ್ಯವನ್ನು ದಿವಾಳಿ ಮಾಡಿದ್ದು, ಆರ್ಥಿಕ ವಿಚಾರದಲ್ಲಿ ಹತಾಶರಾಗಿ ತೀರ ಕೆಳಮಟ್ಟಕ್ಕೆ ಇಳಿದಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಹಾವೇರಿ ಗದಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
Lok Sabha Election 2024: ತುಂಗಾ ಮೇಲ್ದಂಡೆ ಯೋಜನೆಯಲ್ಲಿ ಒಂದು ಲಕ್ಷ ಎಕರೆ ನೀರಾವರಿ ಮಾಡಿರುವುದು ಸಾಮಾನ್ಯ ಮಾತಲ್ಲ. ಇದರಿಂದ ಹಾನಗಲ್, ಹಿರೆಕೆರೂರು, ರಾಣೆಬೆನ್ನೂರು ತಾಲೂಕುಗಳಲ್ಲಿ ನೀರಾವರಿಯಾಗಿದೆ. ಈ ಕೆಲಸ ಸಾಧ್ಯವಿಲ್ಲ ಎಂದು ಹೇಳಿದ್ದರು. ಅದನ್ನು ಮಾಡಿ ತೋರಿಸಿದ್ದೇನೆ.ಶಿಗ್ಗಾಂವಿ ಕ್ಷೇತ್ರ ಬಿಟ್ಟು ಎಂಟು ಏತ ನೀರಾವರಿ ಯೋಜನೆ ಮಾಡಿದ್ದೇನೆ ಎಂದರು.
Basavaraj Bommai: ರಾಜ್ಯದಲ್ಲಿ ಮೊದಲ ಹಂತದ ನಾಮಪತ್ರ ಸಲ್ಲಿಕೆ ಮುಕ್ತಾಯ ಆಗಿದೆ. ಕಣ ಸಿದ್ದವಾಗಿದೆ. ವಿಶ್ವಾಸ ಇದೆ. ಮೊದಲ ಹಂತದಲ್ಲಿ ನಮಗೆ ಅಭೂತಪೂರ್ವ ಬೆಂಬಲ ಸಿಕ್ಕಿದೆ. ಸಿದ್ದರಾಮಯ್ಯ ಓಡಾಡುವುದು ನೋಡಿದರೆ ಅವರಿಗೆ ಭಯ ಹುಟ್ಟಿಕೊಂಡಿದೆ.ಸೋಲಿನ ಭಯದಿಂದ ಗಲ್ಲಿಗಲ್ಲಿಯಲ್ಲಿ ಓಡಾಡುತ್ತಿದ್ದಾರೆ ಎಂದು ಹೇಳಿದರು.
ರಾಜ್ಯದಲ್ಲಿ 200 ಯುನಿಟ್ ಫ್ರೀ ಕರೆಂಟ್ ಕೊಡುವುದಾಗಿ ಹೇಳಿ ಈಗ ರಾಜ್ಯದಲ್ಲಿ ಕರೆಂಟ್ ಸಿಗದ ಪರಿಸ್ಥಿತಿ ನಿರ್ಮಾಣ ಆಗಿದೆ. ವಿದ್ಯುತ್ ಉತ್ಪಾದನೆ ಕಡಿಮೆಯಾಗಿದ್ದು, ನವೆಂಬರ್ ನಿಂದ ರಾಜ್ಯದಲ್ಲಿ ಕತ್ತಲೆ ಆವರಿಸುತ್ತದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ಬೆಂಗಳೂರಿನಲ್ಲಿ ಇಂದು ಮಾಧ್ಯಮದವರೊಂದಿಗೆ ಅವರು ಮಾತನಾಡಿದ ಹಂಗಾಮಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಜನರು ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿದ್ದಾರೆ. ಕಾಂಗ್ರೆಸ್ ಪಕ್ಷ ಜನರ ಮತ್ತು ರಾಜ್ಯದ ಅಭಿವೃದ್ಧಿ ಮಾಡಲಿ. ಅವರಿಗೆ ಇಲ್ಲಿಯವರೆಗೂ ಮುಖ್ಯಮಂತ್ರಿ ಆಯ್ಕೆ ಮಾಡಲು ಅಗುತ್ತಿಲ್ಲ. ಬೇಗ ಮುಖ್ಯಮಂತ್ರಿ ಆಯ್ಕೆಯನ್ನು ಮಾಡಲಿ ಎಂದರು.
ಇಂದು ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಅವರು ಮಾತನಾಡಿದ ಹಂಗಾಮಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ, ಇಂದು ಡಾ. ಕೆ. ಸುಧಾಕರ್ ಭೇಟಿ ಮಾಡಿದ್ದೀನಿ. ನಮ್ಮ ಜೊತೆ ಕೆಲಸ ಮಾಡಿದವರು ಅಲ್ಪ ಪ್ರಮಾಣದಲ್ಲಿ ಸೋತಿದ್ದಾರೆ. ಧೈರ್ಯ ತುಂಬುವ ಕೆಲಸ ಮಾಡುತ್ತಿದ್ದೇನೆ. ಸೋಲಿನ ಕಾರಣದ ಬಗ್ಗೆ ಚರ್ಚೆ ಮಾಡಿದ್ದೇವೆ. ವಿ. ಸೋಮಣ್ಣ ಅವರನ್ನೂ ಭೇಟಿ ಮಾಡುತ್ತೇನೆ ಎಂದರು.
Karnataka Assembly Polls: ಮತದಾನದ ಬಳಿಕ ಮಾಧ್ಯಮದೊಂದಿಗೆ ಮಾತಾನಾಡಿದ ಸಿಎಂ ಬಸವರಾಜ ಬೊಮ್ಮಾಯಿ, ಮತದಾನೋತ್ತರ ಸಮೀಕ್ಷೆಗಳು ಕಳೆದ ಬಾರಿ ಕಾಂಗ್ರೆಸ್ 107 ಕ್ಕೂ ಅಧಿಕ ಸ್ಥಾನ ಅಂತ ಹೇಳಿದ್ದವು ಆದರೆ ಫಲಿತಾಂಶದ ದಿನ ಅದು ಉಲ್ಟಾ ಆಗಿತ್ತು ಹಿಗಾಗಿ ಈ ಬಾರಿ ಚುನಾವಣೆ ಸಮೀಕ್ಷೆ ಮೇಲೆ ನಂಬಿಕೆ ಇಲ್ಲ.
Karnataka Exit poll 2023 : ಎಕ್ಸಿಟ್ ಪೋಲ್ ನೂರಕ್ಕೆ ನೂರರಷ್ಟು ನಿಖರವಾಗಿರುವುದಿಲ್ಲ. 5 ರಿಂದ 10% ಹೆಚ್ಚು ಕಮ್ಮಿ ಆಗುತ್ತಿರುತ್ತದೆ. ಒಂದೊಂದು ಸಂಸ್ಥೆ ಒಂದೊಂದು ರೀತಿ ತೋರಿಸುತ್ತಿದೆ, ಯಾವುದು ಸ್ಥಿರವಾಗಿಲ್ಲ. ನಮಗೆ ಕಂಪ್ಲೀಟ್ ಗ್ರೌಂಡ್ ರಿಪೋರ್ಟ್ ಇದೆ. ಸಂಪೂರ್ಣ ಬಹುಮತ ಸಿಗುತ್ತದೆ ಎಂದು ವಿವಿಧ ಮಾಧ್ಯಮಗಳು ಮತ್ತು ಸಂಸ್ಥೆಗಳ ಎಕ್ಸಿಟ್ ಪೋಲ್ ವಿಚಾರವಾಗಿ ಸಿಎಂ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯೆ ನೀಡಿದರು.
ಮತದಾನಕ್ಕೂ ಮುನ್ನ ಸಿಎಂ ಬೊಮ್ಮಾಯಿ ಪೂಜೆ. ಗಾಯತ್ರಿ ತಪೋಭೂಮಿಗೆ ಬೊಮ್ಮಾಯಿ ಭೇಟಿ. ಶಿಗ್ಗಾವಿ ತಾ. ತಡಸ ಗ್ರಾಮದಲ್ಲಿರುವ ತಪೋಭೂಮಿ. ಗಾಯತ್ರಿ ದೇವಿ, ಆಂಜನೇಯನ ದರ್ಶನ ಪಡೆದ ಸಿಎಂ. ಪುತ್ರ ಭರತ್, ಪತ್ನಿ ಚೆನ್ನಮ್ಮ, ಮಗಳು ಅದಿತಿ ಸಾಥ್.
ಸಿಎಂ ಬೊಮ್ಮಾಯಿ ಕ್ಷೇತ್ರಕ್ಕೆ ದಳಪತಿಯ ಎಂಟ್ರಿ. JDS ಅಭ್ಯರ್ಥಿ ಶಶಿಧರ ಯಲಿಗಾರ ಪರ ಕುಮಾರಸ್ವಾಮಿ ಕ್ಯಾಂಪೇನ್. ಬೆಳಗ್ಗೆ 10 ಗಂಟೆಗೆ JDS ಬಹಿರಂಗ ಸಮಾವೇಶದಲ್ಲಿ ಹೆಚ್ಡಿಕೆ ಭಾಗಿ. ಹಾವೇರಿಯ ಸಂತೆ ಮೈದಾನದಲ್ಲಿ ಜೆಡಿಎಸ್ ಬಹಿರಂಗ ಸಮಾವೇಶ. ಬಹಿರಂಗ ಸಮಾವೇಶದ ಮೂಲಕ ಮಾಜಿ ಸಿಎಂ ಮತಯಾಚನೆ.
ವಿಧಾನಸಭೆ ಚುನಾವಣೆಗೆ 6 ದಿನಗಳು ಬಾಕಿ ಇವೆ. ಪ್ರಧಾನಿ ಮೋದಿ ಸೇರಿದಂತೆ ಬಿಜೆಪಿ ನಾಯಕರ ದಂಡೇ ರಾಜ್ಯದಲ್ಲಿ ಬೀಡು ಬಿಟ್ಟಿದೆ. ಮೇ 7ಕ್ಕೆ ಬಹಿರಂಗ ಪ್ರಚಾರಕ್ಕೆ ತೆರೆ ಬೀಳಲಿದೆ. ಮೂರು ದಿನಗಳು ಬಿಜೆಪಿ ನಾಯಕರು ಅಬ್ಬರದ ರೋಡ್ ಶೋ, ಸಭೆಗಳ ಮೂಲಕ ಮತದಾರರನ್ನು ಸೆಳೆಯಲು ಮುಂದಾಗಿದ್ದಾರೆ.
Karnataka Assembly Elections: ಮತ್ತೊಬ್ಬರ ಭಾವನೆಗಳಿಗೆ ಧಕ್ಕೆ ಬರುವ ರೀತಿಯಲ್ಲಿ ಕಾಂಗ್ರೆಸ್ ವರ್ತಿಸುತ್ತಿದೆ. ನಾವು ಎಸ್.ಡಿ.ಪಿ.ಐ, ಪಿಎಫ್ಐ ವಿರುದ್ಧ ಮಾತನಾಡಿದರೆ ಕಾಂಗ್ರೆಸ್ ನಾಯಕರಿಗೆ ತಳಮಳ ಶುರುವಾಗುತ್ತದೆ. ಕಾಂಗ್ರೆಸ್ ತುಷ್ಟೀಕರಣ ರಾಜಕಾರಣ ಮಾಡುತ್ತಿದೆ.
Karnataka Assembly Election 2023: ಕಾಂಗ್ರೆಸ್ ಘೋಷಣೆ ಮಾಡಿದ್ದ ಯೋಜನೆಗಳಲ್ಲಿ 65% ಅವರೇ ಮಾಡಿಲ್ಲ. ಮೊದಲು ಅವರು ರಿಪೋರ್ಟ್ ಕಾರ್ಡ್ ಕೊಡಲಿ. ನಮ್ಮ ಕಾಲದಲ್ಲಿ ಕೋವಿಡ್ ಬಂದಿದ್ದರಿಂದ ಸ್ವಲ್ಪ ಮಾರ್ಪಾಡು ಮಾಡಿಕೊಂಡು ಹೊಸ ಸ್ಕೀಂಗಳನ್ನು ಕೊಟ್ಟಿದ್ದೇವೆ. ಇದನ್ನು ವಿಧಾನಸಭೆಯಲ್ಲೂ ಹೇಳಿದ್ದೇನೆ.
ಸಕ್ಕರೆನಾಡು ಮಂಡ್ಯದಲ್ಲಿ ರಂಗೇರಿದ ರಾಜಕೀಯ ಅಖಾಡ. ಸಕ್ಕರೆನಾಡಿನ ಅಖಾಡಕ್ಕೆ ಸಿಎಂ ಬೊಮ್ಮಾಯಿ ಎಂಟ್ರಿ. ಬಿಜೆಪಿ ಅಭ್ಯರ್ಥಿಗಳ ಸಿಎಂ ಬೊಮ್ಮಾಯಿ ಭರ್ಜರಿ ಪ್ರಚಾರ. ಮಂಡ್ಯ ಮತ್ತು ಮದ್ದೂರಿನಲ್ಲಿ ರೋಡ್ ಶೋ, ಸಾರ್ವಜನಿಕ ಸಭೆ. ಸಂಜೆ 5 ಗಂಟೆಗೆ ಮಂಡ್ಯ, 6 ಗಂಟೆಗೆ ಮದ್ದೂರಿನಲ್ಲಿ ಪ್ರಚಾರ.
CM Basavaraj Bommai on Congress: 150 ಸ್ಥಾನ ಯಾರಿಗೆ ಕೊಡಬೇಕು ಎಂದು ಜನ ತೀರ್ಮಾನ ಮಾಡುತ್ತಾರೆ. ಬೂತ್ ಮಟ್ಟದಿಂದ ಪಕ್ಷ ಸಂಘಟನೆ ಮತ್ತು ಬೂತ್ ಮಟ್ಟದ ಗೆಲುವಿನ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಕಾರ್ಯಕರ್ತರಿಗೆ ಸಂದೇಶ ನೀಡಿದ್ದಾರೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು
Karnataka Election 2023: ಜಯವಾಹಿನಿ ಎಲ್ಲೇ ಹೋದರೂ ಜನರಿಂದ ಅಭೂತಪೂರ್ವ ಜನಬೆಂಬಲ ಸಿಗ್ತಿದೆ. ಕಳೆದ 3 ವರ್ಷದಲ್ಲಿ ರಾಜ್ಯದಲ್ಲಿ ಬಿಜೆಪಿ ಸುನಾಮಿ ಎದ್ದಿದೆ. 2023ರ ಚುನಾವಣೆಯಲ್ಲೂ ಬಿಜೆಪಿಯನ್ನು ಬೆಂಬಲಿಸಬೇಕು. ಅರುಣ್ ಕುಮಾರ್ ಅವರನ್ನು 30 ಸಾವಿರ ಮತಗಳ ಅಂತರದಿಂದ ಗೆಲ್ಲಿಸಬೇಕು ಎಂದು ಸಿಎಂ ಬೊಮ್ಮಾಯಿ ಹೇಳಿದರು.
CM Basavaraj Bommai: ರಾಜ್ಯಕ್ಕೆ ಪ್ರಧಾನಿ ನರೇಂದ್ರ ಮೋದಿ, ಅಮಿತ್ ಶಾ, ಸ್ಮೃತಿ ಇರಾನಿ, ಸೇರಿದಂತೆ ಹಲವು ನಾಯಕರು ತಾರಾ ಪ್ರಚಾರಕರಾಗಿ ಆಗಮಿಸುತ್ತಿದ್ದಾರೆ. ಸಿಎಂ ಆಗಬೇಕು ಎಂದು ನಾನು ಅಂದುಕೊಂಡಿರಲಿಲ್ಲ. ಹಿಂದೆಯೂ ಹೈಕಮಾಂಡ್ ತೀರ್ಮಾನ ಮಾಡಿದ್ದು, ಈಗಲೂ ಕೂಡ ಹೈಕಮಾಂಡ್ ತೀರ್ಮಾನ ಮಾಡುತ್ತದೆ ಎಂದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.