ಮಾಜಿ ಪ್ರಧಾನಿಗಳು ಮತ್ತು ಹಿರಿಯರಾದ ಹೆಚ್.ಡಿ.ದೇವೇಗೌಡರು ಪಠ್ಯ ಪುಸ್ತಕ ಪರಿಷ್ಕರಣೆಯ ಬಗ್ಗೆ ಬರೆದಿರುವ ಪತ್ರಕ್ಕೆ ಗೌರವಪೂರ್ವಕವಾಗಿ ಉತ್ತರ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ರಾಜ್ಯದಲ್ಲಿನ ನಡೆಯುತ್ತಿರುವ ದೊಡ್ಡ ಪ್ರಮಾಣದ ಅಭಿವೃದ್ಧಿ, ಜನಪರ ಕಾರ್ಯಕ್ರಮಗಳು ಹಾಗೂ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಸಹಭಾಗಿತ್ವದ ಯೋಜನೆಗಳ ಅನುಷ್ಠಾನದ ಬಗ್ಗೆ ಪ್ರಧಾನಿ ನರೇಂದ್ರ ಮೋದಿಯವರು ಮೆಚ್ಚುಗೆಯನ್ನು ವ್ಯಕ್ತಪಡಿಸಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಇಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ.. ಸಿಎಂ ಬೊಮ್ಮಾಯಿ ನೇತೃತ್ವದಲ್ಲೇ ಮುಂದಿನ ಚುನಾವಣೆ ಎಂದು ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ.
ಪಠ್ಯ ಪರಿಷ್ಕರಣೆ ಬಗ್ಗೆ ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆ ವಿಚಾರಕ್ಕೆ ಸಂಬಂಧಪಟ್ಟಂತೆ ಸಿಎಂ ಬಸವರಾಜ ಬೊಮ್ಮಾಯಿ ಮಾತನಾಡಿದ್ದು, ಸಿದ್ದರಾಮಯ್ಯ ಎಲ್ಲದರಲ್ಲೂ ರಾಜಕಾರಣ ಮಾಡುತ್ತಾರೆ ಎಂದು ಹೇಳಿದ್ದಾರೆ.
ಪಠ್ಯ ಪುಸ್ತಕ ಪರಿಷ್ಕರಣೆಗೆ ಸಂಬಂಧಿಸಿದಂತೆ ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿ, ಬೇರೆ ಬೇರೆ ಸ್ವಾಮೀಜಿಗಳು ಪತ್ರ ಬರೆದಿದ್ದಾರೆ. ಅವರ ಜೊತೆ ಚರ್ಚೆ ಮಾಡಿ ಮುಂದಿನ ಕ್ರಮ ಕೈಗೊಳ್ಳುತ್ತೇವೆ ಎಂದು ಸಿಎಂ ಬೊಮ್ಮಾಯಿ ಹೇಳಿದ್ರು.
ಅಯೋಧ್ಯೆಯ ಶ್ರೀರಾಮನ ದರ್ಶನಕ್ಕೆ ತೆರಳಿ ಅಪಘಾತಕ್ಕೀಡಾದ ಘಟನೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ದೂರವಾಣಿ ಮೂಲಕ ಅಪಘಾತದಲ್ಲಿ ಬೀದರ್ನ 7 ಜನ ಸಾವನಪ್ಪಿದ ಕುಟುಂಬಸ್ಥರೊಂದಿಗೆ ಮಾತನಾಡಿ ಸಾಂತ್ವನ ಹೇಳಿದ್ದಾರೆ.
ಕಳೆದ ನಾಲ್ಕು ತ್ರೈಮಾಸಿಕಕ್ಕೆ ಹೋಲಿಕೆ ಮಾಡಿದರೆ ದೇಶಕ್ಕೆ ವಿದೇಶಿ ನೇರ ಬಂಡವಾಳ ಅತಿ ಹೆಚ್ಚು ಬಂದಿದ್ದು, ಇದರಲ್ಲಿ ನಂಬರ್ ಒನ್ ಪಾಲು ಕರ್ನಾಟಕಕ್ಕೆ ಹರಿದು ಬಂದಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಜೀ ಎಂಟರ್ಟೈನ್ಮೆಂಟ್ ಎಂಟರ್ಪ್ರೈಸಸ್ ಲಿಮಿಟೆಡ್ ಇಂದು ನಗರದ ಬೆಳ್ಳಂದೂರಿನ ಆರ್ ಎಂಜಿ ಇಕೋ ಸ್ಪೇಸ್ ಟೆಕ್ ಪಾರ್ಕ್ ನಲ್ಲಿ ಸ್ಥಾಪಿಸಿರುವ ಜೀ ತಂತ್ರಜ್ಞಾನ ಮತ್ತು ಸಂಶೋಧನಾ ಕೇಂದ್ರವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ಕರ್ನಾಟಕ ರಾಜ್ಯಪಾಲರಾದ ಥಾವರ್ ಚಂದ ಗೆಲ್ಹೋಟ್, ಜೀ ಅಂತಾರಾಷ್ಟ್ರೀಯ ಬ್ರಾಡ್ ಕಾಸ್ಟ್ ಸಂಸ್ಥೆಯ ಮುಖ್ಯ ಕಾರ್ಯನಿರ್ವಾಹಕ ಅಮಿತ್ ಗೋಯೆಂಕ, ಜೀ ಟೆಕ್ನಾಲಜಿ ಮತ್ತು ಡೇಟಾ ಅಧ್ಯಕ್ಷ ನಿತಿನ್ ಮಿತ್ತಲ್ ಹೀಗೆ ಇತರರು ಭಾಗವಹಿಸಿದ್ದರು.
2022-23 ನೇ ಸಾಲಿಗೆ ಎ,ಬಿ,ಸಿ,ಡಿ ಗ್ರೂಫ್ ಅಧಿಕಾರಿಗಳು/ನೌಕರರು, ಸಿಬ್ಬಂದಿಗಳನ್ನು ವರ್ಗಾವಣೆ ಮಾಡಲು ಇಲಾಖೆ ಸಚಿವರಿಗೆ ಅಧಿಕಾರ ನೀಡಿ ಆದೇಶ ಹೊರಡಿಸಿದೆ.ಇಲಾಖೆಯ ಶೇ.6 ರಷ್ಟು ಮೀರದಂತೆ ವರ್ಗಾವಣೆ ಮಾಡಲು ಸೂಚನೆ ನೀಡಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.